ಬ್ರೇಕಿಂಗ್ ನ್ಯೂಸ್
06-09-24 10:47 pm HK News Desk ದೇಶ - ವಿದೇಶ
ನವದೆಹಲಿ, ಸೆ.6: ಹರ್ಯಾಣ ಅಸೆಂಬ್ಲಿ ಚುನಾವಣೆಯಲ್ಲಿ ಕುಸ್ತಿ ಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗ್ ಪೂನಿಯಾ ಕಣಕ್ಕಿಳಿಯೋದು ಪಕ್ಕಾ ಆಗಿದೆ. ಚುನಾವಣೆ ತಯಾರಿ ನಡುವಲ್ಲೇ ಕಳೆದ ಬಾರಿ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ವಿರುದ್ಧ ಬೀದಿಗಿಳಿದಿದ್ದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಹಾಗೂ ವಿನೇಶ್ ಫೋಗಟ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಇವರಿಬ್ಬರು ವಾರದ ಹಿಂದೆಯೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಆಗಲೇ ಕಾಂಗ್ರೆಸ್ ಸೇರುವ ಬಗ್ಗೆ ಸುದ್ದಿ ಹರಡಿತ್ತು. ಅದೀಗ ನಿಜವಾಗಿದ್ದು, ಇಬ್ಬರೂ ಅಧಿಕೃತವಾಗಿ 'ಕೈ' ಪಕ್ಷದಲ್ಲಿ ಸೇರ್ಪಡೆಯಾಗಿದ್ದಾರೆ.
ಪಕ್ಷ ಸೇರ್ಪಡೆಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಜೊತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿನೇಶ್ ಫೋಗಟ್, “ಕುಸ್ತಿ ವೃತ್ತಿಜೀವನದಲ್ಲಿ ನನ್ನನ್ನು ಬೆಂಬಲಿಸಿದ ದೇಶದ ಜನರಿಗೆ ಧನ್ಯವಾದ ಹೇಳುತ್ತೇನೆ. ನಾನು ಅವರ ನಿರೀಕ್ಷೆಗಳಿಗೆ ತಕ್ಕಂತೆ ಬದುಕುತ್ತೇನೆ ಎಂದು ಅಂದುಕೊಂಡಿದ್ದೇನೆ. ನಾನು ಕಾಂಗ್ರೆಸ್ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಕಾರಣ ಕೆಟ್ಟ ಸಮಯದಲ್ಲಿ ಮಾತ್ರ ನಮ್ಮವರು ಯಾರು ಎಂದು ಗೊತ್ತಾಗುತ್ತದೆ. ನಮ್ಮನ್ನು ರಸ್ತೆಯಲ್ಲಿ ಎಳೆದಾಡಿದಾಗ, ಬಿಜೆಪಿ ಹೊರತುಪಡಿಸಿ ಉಳಿದೆಲ್ಲ ಪಕ್ಷಗಳು ನಮ್ಮೊಂದಿಗೆ ನಿಂತಿದ್ದವು. ನಮ್ಮ ನೋವು, ಕಣ್ಣೀರನ್ನು ಅರ್ಥ ಮಾಡಿಕೊಂಡಿದ್ದವು ಎಂದು ಹೇಳಿದ್ದಾರೆ.
ಮಹಿಳೆಯರ ಮೇಲಿನ ದುರ್ನಡತೆ, ಅನ್ಯಾಯದ ವಿರುದ್ಧ ನಿಲ್ಲುವ ಪಕ್ಷದೊಂದಿಗೆ ಗುರುತಿಸಿಕೊಳ್ಳಲು ನಾನು ಹೆಮ್ಮೆ ಪಡುತ್ತೇನೆ. ಕುಸ್ತಿಯಲ್ಲಿ ನಾವು ತೋರಿದ ಅದೇ ಬದ್ಧತೆಯಿಂದ ದೇಶದ ಜನರಿಗಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡುತ್ತೇನೆ ಎಂದಿದ್ದಾರೆ.
ಒಲಿಂಪಿಕ್ ಪದಕ ವಿಜೇತ ಕುಸ್ತಿ ಪಟು ಬಜರಂಗ್ ಪೂನಿಯಾ ಮಾತನಾಡಿ, ನಾವು ದೇಶದ ಜನರಿಗಾಗಿ ಕೆಲಸ ಮಾಡಲಿದ್ದೇವೆ, ಕಾಂಗ್ರೆಸ್ ಪಕ್ಷವನ್ನು ಮತ್ತು ಭಾರತವನ್ನು ಮತ್ತಷ್ಟು ಬಲಪಡಿಸುತ್ತೇವೆ. ವಿನೇಶ್ ಫೋಗಟ್ ಫೈನಲ್ ತಲುಪಿದಾಗ ಎಲ್ಲರೂ ಸಂತೋಷಪಟ್ಟಿದ್ದರು. ಆದರೆ ಆಕೆಯನ್ನು ಅನರ್ಹಗೊಳಿಸಿದಾಗ ಕೆಲವರು ಮಾತ್ರ ಸಂಭ್ರಮಿಸಿದರು ಎಂದು ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಸೇರಿದ ಬೆನ್ನಲ್ಲೇ ವಿನೇಶ್ ಪೋಗಟ್ ತನ್ನ ರೈಲ್ವೇ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕುಸ್ತಿ ಪಟುಗಳು ಕಾಂಗ್ರೆಸ್ ಪಕ್ಷ ಸೇರಿರುವುದರಿಂದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎನ್ನಲಾಗುತ್ತಿದೆ. ಹರ್ಯಾಣದಲ್ಲಿ ಅಕ್ಟೋಬರ್ 5ಕ್ಕೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8ರಂದು ಚುನಾವಣೆ ಫಲಿತಾಂಶ ಹೊರಬೀಳಲಿದೆ.
Olympian wrestlers Vinesh Phogat and Bajrang Punia are set to jojn the Indian National Congress on Saturday, ahead of the Haryana assembly election.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm