ಬ್ರೇಕಿಂಗ್ ನ್ಯೂಸ್
07-09-24 10:44 pm HK News Desk ದೇಶ - ವಿದೇಶ
ನವದೆಹಲಿ, ಸೆ.7: ಕೇಂದ್ರ ಸರ್ಕಾರವು ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಿದೆ.
ವಿಶೇಷಚೇತನ ಹಾಗೂ ಒಬಿಸಿ ಕೋಟಾ ದುರ್ಬಳಕೆ ಮಾಡಿದ್ದಾರೆಂಬ ಆರೋಪದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ ಈ ಹಿಂದೆ ಎಫ್ಐಆರ್ ದಾಖಲಿಸಿತ್ತು. ಹಾಗಿದ್ದರೂ, ಪೂಜಾ ಯುಪಿಎಸ್ಸಿ ಅಧಿಕಾರಿಗಳಿಗೆ ಸವಾಲೊಡ್ಡುವ ಮಾತನ್ನಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಪೂಜಾ ಅವರ ಆಯ್ಕೆಯನ್ನು ರದ್ದುಪಡಿಸಿ ಸೇವೆಯುಂದ ವಜಾ ಮಾಡಿದೆ.
ಉದ್ಯೋಗ ಭದ್ರತೆಗಾಗಿ ಪೂಜಾ ಖೇಡ್ಕರ್ ನಕಲಿ ದಾಖಲೆ, ಪ್ರಮಾಣ ಪತ್ರಗಳನ್ನ ಸಲ್ಲಿಸಿದ್ದಾರೆ. ಅಲ್ಲದೆ, ತಮ್ಮ ಖಾಸಗಿ ಆಡಿ ಕಾರಿಗೆ ರೆಡ್ಲೈಟ್ ಮತ್ತು ಮಹಾರಾಷ್ಟ್ರ ಸರ್ಕಾರದ ಲಾಂಛನ ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಎಲ್ಲ ಕಾರಣಗಳಿಂದಾಗಿ ಮಹಾರಾಷ್ಟ್ರ ಸರ್ಕಾರ ಅವರ ತರಬೇತಿಯನ್ನು ತಡೆಹಿಡಿದಿತ್ತು. ಈ ಬಗ್ಗೆ ಯುಪಿಎಸ್ಸಿ ಕಡೆಯಿಂದ ವಿಚಾರಣೆಗೆ ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರೀ ನ್ಯಾಷನಲ್ ಅಕಾಡೆಮಿಗೆ ಬರುವಂತೆ ಸೂಚಿಸಲಾಗಿತ್ತು. ವಿಚಾರಣೆ ಬಳಿಕ ಜು.19ರಂದು ಎಫ್ಐಆರ್ ದಾಖಲಿಸಿತ್ತು.
2023ನೇ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಪೂಜಾ ಖೇಡ್ಕರ್ ಅವರು ಮಹಾರಾಷ್ಟ್ರದ ವಾಶೀಂ ಜಿಲ್ಲೆಯಲ್ಲಿ ಪ್ರೊಬೇಷನರಿಯಾಗಿ ನಿಯೋಜನೆಗೊಂಡಿದ್ದರು. ಕೇಂದ್ರ ಲೋಕಸೇವಾ ಆಯೋಗಕ್ಕೆ ಸಲ್ಲಿಸಿದ್ದ ವೈದ್ಯಕೀಯ ಪ್ರಮಾಣ ಪತ್ರದಲ್ಲಿ ತಾವು ಭಾಗಶಃ ಅಂಗವಿಕಲತೆ ಹೊಂದಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ಅಂಗವೈಕಲ್ಯ ಕೋಟಾ ಬಳಸಿದ್ದರು. ಅಲ್ಲದೇ ಹಿಂದುಳಿದ ವರ್ಗಗಳ ಅಡಿಯಲ್ಲಿ ಮೀಸಲಾತಿ ಕೋಟಾವನ್ನೂ ದುರ್ಬಳಕೆ ಮಾಡಿದ್ದಾರೆ. ಜಾತಿ ಮತ್ತು ವೈದ್ಯಕೀಯ ಪ್ರಮಾಣ ಪತ್ರಗಳನ್ನು ನಕಲು ಮಾಡಿದ್ದಾರೆ ಎಂಬ ಆರೋಪ ಇತ್ತು.
The Department of Personnel and Training (DoPT) has discharged probationer Indian Administrative Service (IAS) officer Puja Khedkar from service, more than a month after her candidature was cancelled by the Union Public Service Commission (UPSC) and Delhi Police registered a criminal case against her.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm