ಬ್ರೇಕಿಂಗ್ ನ್ಯೂಸ್
12-09-24 09:12 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಭಾರತೀಯ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್ವಾದ) ಪ್ರಧಾನ ಕಾರ್ಯದರ್ಶಿ ಹಾಗೂ ಹಿರಿಯ ನಾಯಕರಾದ ಸೀತಾರಾಂ ಯೆಚೂರಿ (72) ಅವರು ಅನಾರೋಗ್ಯದ ಬಳಿಕ ದೆಹಲಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಆಗಸ್ಟ್ 19ರಂದು ನ್ಯುಮೋನಿಯಾ, ಎದೆ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ನಲ್ಲಿ ಇರಿಸಿದ್ದ ವೈದ್ಯರು, ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.
40 ವರ್ಷಗಳಿಂದ ದೇಶದ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದ ಅವರು, 32 ವರ್ಷಗಳಿಂದ ಸಿಪಿಎಂ ಕೇಂದ್ರೀಯ ಸಮಿತಿ ಪಾಲಿಟ್ ಬ್ಯೂರೊ ಸದಸ್ಯರಾಗಿದ್ದರು. 2015ರಿಂದ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. 2005-2017ರ ವರೆಗೆ ಪಶ್ಚಿಮ ಬಂಗಾಳದಿಂದ ರಾಜ್ಯಸಭಾ ಸದಸ್ಯರಾಗಿಯೂ ಆಯ್ಕೆಗೊಂಡಿದ್ದರು.
1952ರ ಆಗಸ್ಟ್ 12ರಂದು ಚೆನ್ನೈನಲ್ಲಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಅವರ ಮೂಲ ಹೆಸರು, ಯೆಚೂರಿ ಸೀತಾರಾಮ ರಾವ್. ಸಿಪಿಎಂನ ಮೊದಲ ಪ್ರಧಾನ ಕಾರ್ಯದರ್ಶಿ ಪಿ. ಸುಂದರಯ್ಯ (ಸುಂದರ ರಾಮ ರೆಡ್ಡಿ) ಅವರಿಂದ ಪ್ರಭಾವಿತರಾಗಿ, ತಮ್ಮ ಹೆಸರಿನಲ್ಲಿದ್ದ ಜಾತಿ ಸೂಚಕ ನಾಮವನ್ನು ತೆಗೆದು ಸೀತಾರಾಂ ಯೆಚೂರಿ ಎಂದು ಬದಲಿಸಿದ್ದರು. ಕಮ್ಯುನಿಸ್ಟ್ ತತ್ವಗಳ ವಿಚಾರದಲ್ಲಿ ಅವರು ನಿಷ್ಠುರವಾದಿಯಾಗಿದ್ದರು.
Veteran Left leader and CPM general secretary Sitaram Yechury died this afternoon. He was 72 and was undergoing treatment for pneumonia at Delhi's All India Institute of Medical Sciences (AIIMS). The CPM leader was admitted to the emergency ward of AIIMS on August 19 and later shifted to the Intensive Care Unit (ICU).
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm