ಬ್ರೇಕಿಂಗ್ ನ್ಯೂಸ್
17-09-24 07:28 pm HK News Desk ದೇಶ - ವಿದೇಶ
ನವದೆಹಲಿ, ಸೆ.17: ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ಏಕ್ಷನ್ ಕುರಿತಂತೆ ಸುಪ್ರೀಂ ಕೋರ್ಟ್ ಗರಂ ಆಗಿದ್ದು ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನಿಲ್ಲಿಸಬೇಕು. ಅತಿಕ್ರಮಣಗಳಿದ್ದರೆ ಕಾನೂನು ಪ್ರಕಾರ ಮಾತ್ರ ತೆರವು ಮಾಡಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿದೆ.
ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಬುಲ್ಡೋಜರ್ ಬಳಕೆಯ ವಿರುದ್ಧ ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅಕ್ಟೋಬರ್ 1ರ ವರೆಗೆ ದೇಶದ ಯಾವುದೇ ರಾಜ್ಯಗಳಲ್ಲಿ ಯಾವುದೇ ಬುಲ್ಡೋಜರ್ ಕಾರ್ಯಾಚರಣೆ ನಡೆಸದಂತೆ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸುತ್ತಿದೆ.
ಈ ಕುರಿತು ನೋಟಿಸ್ ನೀಡಿದ ನಂತರವೇ ಅತಿಕ್ರಮಣ ತೆರೆವಿಗೆ ಬುಲ್ಡೋಜರ್ ಬಳಸಲಾಗುತ್ತಿದೆ ಎಂದು ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಆದರೆ ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದನ್ನು ನ್ಯಾಯಾಧೀಶರು ವಿರೋಧಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾದ ಅಕ್ರಮ ನಿರ್ಮಾಣಗಳನ್ನು ಸರಿಯಾದ ಕ್ರಮದಲ್ಲಿ ನೆಲಸಮ ಮಾಡಬಹುದು ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಅಭಿಪ್ರಾಯ ಪಟ್ಟರು.
ನಿರ್ದಿಷ್ಟ ಸಮುದಾಯ ಗುರಿಯಾಗಿಸಿ ಬುಲ್ಡೋಜರ್ ಕಾರ್ಯಾಚರಣೆ ಮಾಡಿದ್ದಾರೆ ಎನ್ನುವುದು ತಪ್ಪು ಅಭಿಪ್ರಾಯ. ಈ ರೀತಿಯ ತಪ್ಪು ನಿರೂಪಣೆಯನ್ನು ದೇಶದಲ್ಲಿ ಹರಡಲಾಗುತ್ತಿದೆ ಎಂದು ಆಕ್ಷೇಪಿಸಿದರು. ಆದರೆ, ಇಂತಹ ನಿರೂಪಣೆಯಿಂದ ನಾವು ಪ್ರಭಾವಿತರಾಗುತ್ತಿಲ್ಲ. ಅಕ್ರಮ ನಿರ್ಮಾಣಕ್ಕೆ ನಾವು ರಕ್ಷಣೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
While hearing a batch of pleas against "bulldozer actions" in various states, the Supreme Court today passed an interim order that no demolition should take place in the country without its permission.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm