ಬ್ರೇಕಿಂಗ್ ನ್ಯೂಸ್
29-09-24 09:45 pm HK News Desk ದೇಶ - ವಿದೇಶ
ಜಮ್ಮು, ಸೆ.29: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಮಾತನಾಡುತ್ತಿರುವಾಗ ಹಠಾತ್ತನೆ ಅಸ್ವಸ್ಥರಾಗಿ, ಕೆಲ ಹೊತ್ತಿನ ಬಳಿಕ ಚೇತರಿಸಿಕೊಂಡು ಅವರು ಈ ಮಾತು ಹೇಳಿದರು.
ರಾಜ್ಯ ವಿಧಾನಸಭಾ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಪ್ರಚಾರದ ಕೊನೆಯ ದಿನದಂದು ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, "ನಾವು ರಾಜ್ಯದ ಸ್ಥಾನಮಾನವನ್ನು ಪುನಃಸ್ಥಾಪಿಸಲು ಹೋರಾಡುತ್ತೇವೆ. ನನಗೆ 83 ವರ್ಷ ವಯಸ್ಸು, ಆದರೆ ನಾನು ಇಷ್ಟು ಬೇಗ ಸಾಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಜೀವಂತವಾಗಿರುತ್ತೇನೆ." ಎಂದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಎಂದಿಗೂ ಬಯಸಿರಲಿಲ್ಲ ಎಂದು ಹೇಳಿದ ಖರ್ಗೆ, "ಒಂದೊಮ್ಮೆ ಅವರು ಚುನಾವಣೆ ನಡೆಸಲು ಬಯಸಿದ್ದರೆ ಒಂದೆರಡು ವರ್ಷಗಳಲ್ಲಿಯೇ ಅದನ್ನು ಮಾಡುತ್ತಿದ್ದರು. ಸುಪ್ರೀಂ ಕೋರ್ಟ್ ಆದೇಶದ ನಂತರ ಅವರು ಚುನಾವಣೆಗೆ ತಯಾರಿ ಪ್ರಾರಂಭಿಸಿದರು. ಅವರಿಗೆ ಚುನಾವಣೆ ಬೇಕಿರಲಿಲ್ಲ. ಅವರು ಲೆಫ್ಟಿನೆಂಟ್ ಗವರ್ನರ್ ಮೂಲಕ ರಿಮೋಟ್ ಕಂಟ್ರೋಲ್ ಸರ್ಕಾರವನ್ನು ನಿರ್ವಹಿಸಲು ಬಯಸಿದ್ದರು." ಎಂದು ವಾಗ್ದಾಳಿ ನಡೆಸಿದರು.
ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ದೇಶದ ಯುವಕರಿಗೆ ಏನನ್ನೂ ನೀಡಿಲ್ಲ ಎಂದು ಆರೋಪಿಸಿದ ಖರ್ಗೆ, "10 ವರ್ಷಗಳಲ್ಲಿ ನಿಮ್ಮ ಸಮೃದ್ಧಿಯನ್ನು ಮರಳಿ ತರಲು ಸಾಧ್ಯವಾಗದ ವ್ಯಕ್ತಿಯನ್ನು ನೀವು ನಂಬಬಹುದೇ? ಬಿಜೆಪಿ ನಾಯಕರು ನಿಮ್ಮ ಮುಂದೆ ಬಂದರೆ, ಅವರು ಸಮೃದ್ಧಿಯನ್ನು ತಂದಿದ್ದಾರೆಯೇ ಅಥವಾ ಇಲ್ಲವೇ ಎಂದು ಅವರನ್ನು ಕೇಳಿ" ಎಂದು ಹೇಳಿದರು.
ಇನ್ನು ಚುನಾವಣಾ ಪ್ರಚಾರದ ವೇಳೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡಿದ್ದು, ಕೆಲ ನಿಮಿಷಗಳ ಕಾಲ ಭಾಷಣ ನಿಲ್ಲಿಸಲಾಯಿತು. ಖರ್ಗೆ ಅವರು ವೇದಿಕೆಯಲ್ಲೇ ತಲೆತಿರುಗಿ ಅಸ್ವಸ್ಥರಾದಾಗ ಪಕ್ಷದ ಹಲವಾರು ನಾಯಕರು ಅವರನ್ನು ಹಿಡಿದು ಆಸರೆ ನೀಡಿದರು.
ಸ್ವಲ್ಪ ಸಮಯದ ನಂತರ, ಅವರು ಕುಳಿತು ಕೆಲವು ನಿಮಿಷಗಳ ಕಾಲ ಭಾಷಣ ಮಾಡಿದರು, ಆದರೆ ಮಧ್ಯದಲ್ಲಿ ಮತ್ತೆ ನಿಲ್ಲಿಸಿದರು. ಬಳಿಕ ಎದ್ದು ನಿಂತು 2 ನಿಮಿಷ ಭಾಷಣ ಮಾಡಿದರು. ಹೊರಡುವಾಗ ಎಲ್ಲರನ್ನೂ ಉದ್ದೇಶಿಸಿ ತನಗೆ 83 ವರ್ಷ, ಇನ್ನೂ ಸಾಯುವುದಿಲ್ಲ ಎಂದು ಹೇಳಿದ್ದಾರೆ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಸಾಯುವುದಿಲ್ಲ ಎಂದು ಭಾಷಣದ ವೇಳೆ ಹೇಳಿದ್ದಾರೆ.
ಪ್ರಚಾರ ಸಭೆಯ ನಂತರ, ಅವರು ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗೆ ಒಳಗಾಗಲಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಬಿಜೆಪಿ ಹೋರಾಡುತ್ತಿವೆ. ಉಭಯ ಪಕ್ಷಗಳ ನಡುವಿನ ಒಪ್ಪಂದದ ಪ್ರಕಾರ, ಎನ್ಸಿ 52 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ 31 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಕಾಶ್ಮೀರ ಕಣಿವೆಯಲ್ಲಿ ಸಿಪಿಐ-ಎಂಗೆ ಮತ್ತು ಜಮ್ಮು ವಿಭಾಗದಲ್ಲಿ ಪ್ಯಾಂಥರ್ಸ್ ಪಕ್ಷಕ್ಕೆ ಎರಡು ಸ್ಥಾನಗಳನ್ನು ಈ ಮೈತ್ರಿಕೂಟವು ಅವಿರೋಧವಾಗಿ ಬಿಟ್ಟುಕೊಟ್ಟಿದೆ.
Congress chief Mallikarjun Kharge, who fell ill while addressing a poll campaign rally in J&K's Kathua district, has said he would not die till Prime Minister Narendra Modi is "removed" from power. Mr Kharge had felt dizzy while addressing a huge gathering on the last day of the campaign for the third and final phase of the Assembly elections.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm