ಬ್ರೇಕಿಂಗ್ ನ್ಯೂಸ್
08-10-24 02:42 pm HK News Desk ದೇಶ - ವಿದೇಶ
ನವದೆಹಲಿ, ಅ.8: ಹರ್ಯಾಣ ಮತ್ತು ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಅಚ್ಚರಿ ಎನ್ನುವಂತೆ ಮಾಧ್ಯಮ ಸಮೀಕ್ಷೆಗಳು ಉಲ್ಟಾ ಆಗಿವೆ. ಹರ್ಯಾಣದಲ್ಲಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದು ಖಾತ್ರಿಯಾಗಿದೆ. ಹರ್ಯಾಣದಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವು ಖಚಿತ ಎಂದು ಸಮೀಕ್ಷೆಗಳು ಫಲಿತಾಂಶ ಹೇಳಿದ್ದವು. 90 ಕ್ಷೇತ್ರಗಳ ಹರ್ಯಾಣ ಅಸೆಂಬ್ಲಿಯಲ್ಲಿ ಬಿಜೆಪಿ 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಮೈತ್ರಿಕೂಟ 36 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ.
ಜಮ್ಮು ಕಾಶ್ಮೀರದಲ್ಲಿ ಹತ್ತು ವರ್ಷದ ಬಳಿಕ ಚುನಾವಣೆ ನಡೆದಿದ್ದು, ಬಿಜೆಪಿ 28 ಮತ್ತು ಕಾಂಗ್ರೆಸ್ 48 ಸ್ಥಾನಗಳಲ್ಲಿ ಸ್ಪಷ್ಟ ಮುನ್ನಡೆ ಸಾಧಿಸಿದೆ. ಪಿಡಿಪಿ 10 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಸೆ.18, 25 ಮತ್ತು ಅ.1ರಂದು ಮೂರು ಹಂತದಲ್ಲಿ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. 90 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟಾರೆಯಾಗಿ 63.88ರಷ್ಟು ಮತದಾನ ಆಗಿದ್ದಾಗಿ ಚುನಾವಣಾ ಆಯೋಗ ಹೇಳಿತ್ತು. ಜಮ್ಮು ಕಾಶ್ಮೀರಕ್ಕೆ ವಿಶೇಷ ಪ್ರಾತಿನಿಧ್ಯ ನೀಡುವ ಆರ್ಟಿಕಲ್ 370 ರದ್ದಾದ ಬಳಿಕ ಮೊದಲ ಬಾರಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆದಿತ್ತು. ನ್ಯಾಶನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಒಟ್ಟಾಗಿ ಸ್ಪರ್ಧಿಸಿದ್ದರೆ, ಬಿಜೆಪಿ ಮತ್ತು ಪಿಡಿಪಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು.
ಹರ್ಯಾಣದ ಎಲ್ಲ 90 ಕ್ಷೇತ್ರಗಳಿಗೆ ಅ.5ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು ಶೇ. 67.90ರಷ್ಟು ಮತದಾನ ಆಗಿತ್ತು. ಚುನಾವಣೋತ್ತರ ಸಮೀಕ್ಷೆಗಳು ಆಡಳಿತಾರೂಢ ಬಿಜೆಪಿಯನ್ನು ಕಾಂಗ್ರೆಸ್ ಸೋಲಿಸಿ ಅಧಿಕಾರ ಹಿಡಿಯಲಿದೆ ಎಂದು ಹೇಳಿದ್ದವು. ಆದರೆ ಚುನಾವಣೆ ಫಲಿತಾಂಶ ತಲೆಕೆಳಗಾಗಿದ್ದು, ಬಿಜೆಪಿಯನ್ನು ಮತ್ತೆ ಅಧಿಕಾರದತ್ತ ಕೊಂಡೊಯ್ದಿದೆ. ಬಿಜೆಪಿ ವಿರುದ್ಧ ತೊಡೆ ತಟ್ಟಿ ಕಾಂಗ್ರೆಸಿನಲ್ಲಿ ಸ್ಪರ್ಧಿಸಿದ್ದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಜುಲಾನಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಯೋಗೀಶ್ ಕುಮಾರ್ ಅವರನ್ನು 6015 ಮತಗಳಿಂದ ವಿನೇಶ್ ಫೋಗಟ್ ಸೋಲಿಸಿದ್ದಾರೆ.
ಒಮರ್ ಅಬ್ದುಲ್ಲಾ ಮುಖ್ಯಮಂತ್ರಿ ಘೋಷಣೆ
ಜಮ್ಮು ಕಾಶ್ಮೀರದಲ್ಲಿ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಆಯ್ಕೆಯಾಗಲಿದ್ದಾರೆ ಎಂದು ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಒಮರ್ ಅಬ್ದುಲ್ಲಾ ನೇತೃತ್ವದ ಕಾಂಗ್ರೆಸ್ ಮೈತ್ರಿಕೂಟ 45 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದು, ಜಮ್ಮು ಕಾಶ್ಮೀರದಲ್ಲಿ ಅಧಿಕಾರ ಹಿಡಿಯುವುದು ಖಚಿತವಾಗಿದೆ.
In a dramatic turnaround, the BJP is poised to form a government in Haryana for a third time, now leading in 50 seats, as compared to the Congress’s 34. In Jammu and Kashmir, the National Conference-Congress alliance is set to form the next government.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm