ಬ್ರೇಕಿಂಗ್ ನ್ಯೂಸ್
04-11-24 12:54 pm HK News Desk ದೇಶ - ವಿದೇಶ
ಒಟ್ಟಾವ, ನ 04: ಕೆನಡಾದ ಬ್ರಾಮ್ಟನ್ನಲ್ಲಿರುವ ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಭಕ್ತರ ಮೇಲೆ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು ದಾಳಿ ಮಾಡಿದ್ದಾರೆ.
ಈ ದೇವಾಲಯವು ಟೊರೊಂಟೊದಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ದಾಳಿಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಖಾಲಿಸ್ತಾನಿ ಧ್ವಜ ಹಿಡಿದಿರುವುದು, ಭಕ್ತರನ್ನು ನಿಂದಿಸುತ್ತಾ ಹಲ್ಲೆ ನಡೆಸುತ್ತಿರುವುದು ವಿಡಿಯೊದಲ್ಲಿದೆ.
ಕೆನಡಾ ಸಂಸದ, ಕರ್ನಾಟಕ ಮೂಲದ ಚಂದ್ರ ಆರ್ಯ ಅವರು ವಿಡಿಯೊವನ್ನು ಹಂಚಿಕೊಂಡಿದ್ದು, 'ಮಿತಿ ಮೀರಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರೂ ಈ ಘಟನೆಯನ್ನು ಖಂಡಿಸಿದ್ದಾರೆ. 'ಬ್ರಾಂಪ್ಟನ್ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಹಿಂಸಾಚಾರ ಕೃತ್ಯವನ್ನು ಒಪ್ಪಲಾಗದು. ಕೆನಡಾದ ಪ್ರತಿಯೊಬ್ಬರಿಗೂ ತಮ್ಮ ಧರ್ಮವನ್ನು ಮುಕ್ತಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕು ಇದೆ' ಎಂದು ಹೇಳಿದ್ದಾರೆ. ಹಾಗೆಯೇ, ಸಮುದಾಯದ ರಕ್ಷಣೆ ಹಾಗೂ ಪ್ರಕರಣದ ತನಿಖೆ ನಿಟ್ಟಿನಲ್ಲಿ ತ್ವರಿತವಾಗಿ ಪ್ರತಿಕ್ರಿಯಿಸಿದ ಪೊಲೀಸರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಭಾರತ ಹಾಗೂ ಕೆನಡಾ ನಡುವಣ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಹೊತ್ತಿನಲ್ಲೇ, ಈ ಆಘಾತಕಾರಿ ಘಟನೆ ನಡೆದಿದೆ.
2023ರ ಜೂನ್ನಲ್ಲಿ ಕೆನಡಾದಲ್ಲಿ ನಡೆದಿರುವ ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರ ಪಾತ್ರದ ಬಗ್ಗೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಪ್ರಧಾನಿ ಟ್ರುಡೊ ವರ್ಷದ ಹಿಂದೆ ಹೇಳಿದ್ದರು.
ಏತನ್ಮಧ್ಯೆ, ಸಿಖ್ ಪ್ರತ್ಯೇಕತಾವಾದಿಗಳ ಹತ್ಯೆ ಸಂಚಿನಲ್ಲಿ ಅಮಿತ್ ಶಾ ಅವರ ಕೈವಾಡವಿದೆ ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಡೇವಿಡ್ ಮಾರಿಸನ್ ಇತ್ತೀಚೆಗೆ ಆರೋಪಿಸಿದ್ದಾರೆ.
ಇವುಗಳ ಪರಿಣಾಮವಾಗಿ ರಾಜತಾಂತ್ರಿಕ ಸಂಬಂಧ ಜಟಿಲಗೊಂಡಿರುವುದರ ನಡುವೆ, ಕೆನಡಾ ಸರ್ಕಾರವು ಸೈಬರ್ ಬೆದರಿಕೆಯೊಡ್ಡುವ ವಿರೋಧಿ ರಾಷ್ಟ್ರಗಳ ಪಟ್ಟಿಗೆ ಭಾರತವನ್ನು ಕಳೆದ ವಾರ ಸೇರಿಸಿದೆ. ಇದರಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ
Upholding the right to practice religion "freely and safely", Canada's Prime Minister Justin Trudeau on Monday called the violence at a Hindu temple near Toronto "unacceptable". Heavy police deployment was seen at the Hindu Sabha temple in Brampton after skirmishes blamed by some leaders on Sikh activists. In videos that went viral, some men were seen breaching the gates of the temple and assaulting devotees inside the complex.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm