ಬ್ರೇಕಿಂಗ್ ನ್ಯೂಸ್
05-12-24 11:00 pm HK News Desk ದೇಶ - ವಿದೇಶ
ಮಾಸ್ಕಾ, ಡಿ 05: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ಆರ್ಥಿಕ ಉಪಕ್ರಮಗಳನ್ನು ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ "ಮೇಕ್ ಇನ್ ಇಂಡಿಯಾ" ಉಪಕ್ರಮವನ್ನು ಶ್ಲಾಘಿಸಿದ್ದಾರೆ.
ಬುಧವಾರ, ಡಿ 4, 2024 ಮಾಸ್ಕೋದಲ್ಲಿ ನಡೆದ ವಿಟಿಬಿ ರಷ್ಯಾ ಕಾಲಿಂಗ್ ಇನ್ವೆಸ್ಟ್ಮೆಂಟ್ ಫೋರಮ್ ಕಾರ್ಯಕ್ರಮದಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್ ಅವರು ಮೋದಿ ನೇತೃತ್ವದ ಭಾರತದ "ಮೇಕ್ ಇನ್ ಇಂಡಿಯಾ" ಉಪಕ್ರಮವನ್ನು ಶ್ಲಾಘಿಸಿದರು.
ಇನ್ನು ದೇಶದ ಅಭಿವೃದ್ಧಿಗಾಗಿ ಸ್ಥಿರ ವಾತಾವರಣವನ್ನು ಉತ್ತೇಜಿಸಲು ಭಾರತದ ಪ್ರಯತ್ನಗಳನ್ನು ಅಧ್ಯಕ್ಷ ಪುಟಿನ್ ಶ್ಲಾಘಿಸಿದರು ಮತ್ತು ಈ ನೀತಿಗಳು ಭಾರತದ ಅಭಿವೃದ್ಧಿಗೆ ಹೇಗೆ ಕೊಡುಗೆ ನೀಡಿವೆ ಎಂಬುದನ್ನು ಒತ್ತಿ ಹೇಳಿದರು.
'ಮೇಕ್ ಇನ್ ಇಂಡಿಯಾ'ವನ್ನು ಶ್ಲಾಘಿಸಿದ ಪುಟಿನ್!
ಮೇಕ್ ಇನ್ ಇಂಡಿಯಾದ ಬಗ್ಗೆ ಮಾತನಾಡಿದ ಪುಟಿನ್, ದೇಶದಲ್ಲಿ ಉತ್ಪಾದನೆಯನ್ನು ಉತ್ತೇಜಿಸುವ ಮತ್ತು ವಿದೇಶಿ ಹೂಡಿಕೆಯನ್ನು ಆಕರ್ಷಿಸುವ ಗುರಿಯನ್ನು ಹೊಂದಿರುವ 'ಮೇಕ್ ಇನ್ ಇಂಡಿಯಾ' ಉಪಕ್ರಮವು ಜಾಗತಿಕ ಆರ್ಥಿಕತೆಯಲ್ಲಿ ಭಾರತದ ಸ್ಥಾನವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಒತ್ತಿ ಹೇಳಿದರು.
ಅಧ್ಯಕ್ಷ ಪುಟಿನ್ ಅವರ ಹೇಳಿಕೆಗಳು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತದ ಆರ್ಥಿಕ ಪ್ರಗತಿಯನ್ನು ಗುರುತಿಸುವಂತಾಗಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆ (ಎಸ್ಎಂಇ) 'ಸ್ಥಿರ ವಾತಾವರಣ' ನಿರ್ಮಿಸಲು ಭಾರತ ಸರ್ಕಾರ ಮಾಡಿದ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಆರ್ಥಿಕತೆಯ ಅಭಿವೃದ್ಧಿಗಾಗಿ ಪ್ರಧಾನಿ ಮೋದಿಯ "ಮೇಕ್ ಇನ್ ಇಂಡಿಯಾ" ಉಪಕ್ರಮ ತುಂಬಾನೇ ಪ್ರಯೋಜನವಾಗಿದೆ ಎಂದರು.
'ಭಾರತದಲ್ಲಿ ಉತ್ಪಾದನಾ ಘಟಕ ನಿರ್ಮಿಸಲು ರಷ್ಯಾ ಸಿದ್ಧ' ಇನ್ನು ಅಧ್ಯಕ್ಷ ಪುಟಿನ್ ಅವರು ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ರಷ್ಯಾದ ಇಚ್ಛೆಯನ್ನು ವ್ಯಕ್ತಪಡಿಸಿದರು. ಅಲ್ಲದೇ ಭಾರತದಲ್ಲಿ ಹೂಡಿಕೆ ಲಾಭದಾಯಕವಾಗಿದೆ ಎಂದು ಹೇಳಿದರು. ಭಾರತದ ನಾಯಕತ್ವವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಆದ್ಯತೆ ನೀಡುವತ್ತ ಗಮನಹರಿಸಿದೆ ಎಂದು ಅವರು ಒತ್ತಿ ಹೇಳಿದರು.
Putin Praises PM Modi's Policies, Says Russia Will Now 'Make In India'. Russia will set up manufacturing plants across India, Vladimir Putin said today as he praised Prime Minister Narendra Modi for his "India-first" policies. President Putin, who spoke at an investment summit in Moscow today, said he was impressed by how PM Modi's 'Make in India' initiative was "strengthening India's position globally".
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm