ಬ್ರೇಕಿಂಗ್ ನ್ಯೂಸ್
13-12-24 09:06 pm HK News Desk ದೇಶ - ವಿದೇಶ
ಪಾಲಕ್ಕಾಡ್, ಡಿ 13: ಕೇರಳದ ಪಾಲಕ್ಕಾಡ್ ಜಿಲ್ಲೆಯ ಕಲ್ಲಡಿಕೋಡ್ ನಲ್ಲಿ ಲಾರಿ ಪಲ್ಟಿಯಾಗಿ ಶಾಲೆ ಬಿಟ್ಟು ಮೆನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಬಿದ್ದ ಪರಿಣಾಮ 8ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಪಾಲಕ್ಕಾಡ್-ಕೋಝಿಕೋಡ್ ರಾಷ್ಟ್ರೀಯ ಹೆದ್ದಾರಿಯ ಪನಯಂಪದಂನಲ್ಲಿ ಗುರುವಾರ ಸಂಜೆ 4.15 ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕರಿಂಬದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿಯರಾದ ಇರ್ಫಾನಾ ಶೆರಿನ್ ಪಿ ಎ, ರಿಧಾ ಫಾತಿಮಾ, ನಿಧಾ ಫಾತಿಮಾ ಕೆ ಎಂ ಮತ್ತು ಆಯಿಷಾ ಎ ಎಸ್ ಮೃತಪಟ್ಟಿದ್ದಾರೆ.
ಐವರು ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಮನೆಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. ಸಿಮೆಂಟ್ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿದ್ಯಾರ್ಥಿಗಳ ಮೇಲೆ ಬಿದ್ದ ಕಾರಣ ಅವಘಡ ಸಂಭವಿಸಿದೆ. ಮೂವರು ಬಾಲಕಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಬಾಲಕಿಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ಓರ್ವ ಬಾಲಕಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಮತ್ತೋರ್ವ ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದೆ.
ಲಾರಿ ಚಾಲಕ ಮತ್ತು ಕ್ಲೀನರ್ ಗೂ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂಕ್ತ ತನಿಖೆಯ ನಂತರವಷ್ಟೇ ಅಪಘಾತಕ್ಕೆ ಕಾರಣ ತಿಳಿಯಬಹುದು ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಇದು ಆಘಾತಕಾರಿ ಮತ್ತು ದುರಂತ ಎಂದು ಬಣ್ಣಿಸಿದ್ದಾರೆ. "ಗಾಯಗೊಂಡ ಎಲ್ಲಾ ಮಕ್ಕಳಿಗೆ ತುರ್ತು ಚಿಕಿತ್ಸೆ ನೀಡಲು ಸರ್ಕಾರವು ಬದ್ಧವಾಗಿದೆ. ಅಪಘಾತದ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ಮೃತ ಮಕ್ಕಳ ಸಂಬಂಧಿಕರು ಮತ್ತು ಸ್ನೇಹಿತರಿಗೆ ಸಂತಾಪಗಳು ಎಂದು ತಿಳಿಸಿದ್ದಾರೆ.
In a tragic accident, four schoolgirls, studying in Class 8, were killed after a speeding lorry laden with cement bags overturned onto them on Thursday in Kalladikode on the Kozhikode-Palakkad National Highway. The four girls were walking on the pavement on their way back home when they got trapped under the lorry at around 4.15 p.m.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm