ಬ್ರೇಕಿಂಗ್ ನ್ಯೂಸ್
15-12-24 11:05 pm HK News Desk ದೇಶ - ವಿದೇಶ
ನವದೆಹಲಿ, ಡಿ.15: ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ (73) ಭಾನುವಾರ ಅಮೆರಿಕದಲ್ಲಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಭಾರತ ಸೇರಿದಂತೆ ವಿದೇಶಗಳಲ್ಲಿ ಭಾರೀ ಹೆಸರು ಗಳಿಸಿದ್ದ ಜಾಕೀರ್ ಹುಸೇನ್ ಹಲವಾರು ಹಾಲಿವುಡ್ ಚಿತ್ರಗಳಲ್ಲಿಯೂ ಕೈಚಳಕ ತೋರಿದ್ದರು. ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿದ್ದು ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ ಪುತ್ರ. ಭಾರತ ಸೇರಿದಂತೆ ವಿಶ್ವದಾದ್ಯಂತ ಅಭಿಮಾನಿಗಳನ್ನು ಹೊಂದಿದ್ದರು. ದೇಶ- ವಿದೇಶಗಳಲ್ಲಿ ಪ್ರಮುಖ ವಿಶ್ವವಿದ್ಯಾಲಯಗಳ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
ಅಸಾಧಾರಣ ಪ್ರತಿಭೆಯಿಂದಾಗಿ ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಕೊಡಮಾಡುವ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳನ್ನು ಪಡೆದ ಕೀರ್ತಿ ಇವರಿಗಿದೆ. ಜಾಕೀರ್ ಹುಸೇನ್ ಅವರಿಗೆ 1999 ರಲ್ಲಿ US ನ್ಯಾಷನಲ್ ಎಂಡೋಮೆಂಟ್ ಫಾರ್ ದಿ ಆರ್ಟ್ಸ್ನಿಂದ ನ್ಯಾಷನಲ್ ಹೆರಿಟೇಜ್ ಫೆಲೋಶಿಪ್ ಅವಾರ್ಡ್ ನೀಡಲಾಯಿತು. ಭಾರತೀಯ ಶಾಸ್ತ್ರೀಯ ಸಂಗೀತದ ಜಾಗತಿಕ ರಾಯಭಾರಿಯಾಗಿಯೂ ಇವರು ಗುರುತಿಸಿಕೊಂಡಿದ್ದರು.
ಜಾಕೀರ್ ಹುಸೇನ್ ಅವರು ತಮ್ಮ ವೃತ್ತಿ ಜೀವನದಲ್ಲಿ 3 ಗ್ರಾಮಿ ಪ್ರಶಸ್ತಿ ಪಡೆದಿದ್ದರು. 66ನೇ ಗ್ರಾಮಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 3 ಪ್ರಶಸ್ತಿ ಪಡೆದಿದ್ದರು. ಅಷ್ಟೇ ಅಲ್ಲದೆ 1988ರಲ್ಲಿ ಪದ್ಮಶ್ರೀ ಪ್ರಶಸ್ತಿ, 2002ರಲ್ಲಿ ಪದ್ಮಭೂಷಣ ಮತ್ತು 2023ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.
Renowned tabla virtuoso Zakir Hussain passed away at the age of 73 in the US on Sunday. The Ministry of Information and Broadcasting has confirmed the death of the tabla maestro. "The world has lost a true musical genius. Zakir Hussain's contributions to the world of music will forever be cherished," the ministry said in a tweet.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm