ಬ್ರೇಕಿಂಗ್ ನ್ಯೂಸ್
24-12-24 09:17 pm HK News Desk ದೇಶ - ವಿದೇಶ
ನವದೆಹಲಿ, ಡಿ.24: ಮಂದಿರ - ಮಸೀದಿ ನಡುವೆ ವಿವಾದ ಎಬ್ಬಿಸಬೇಡಿ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಗೆ ಅಖಿಲ ಭಾರತ ಸಂತ ಸಮಿತಿಯ ಸ್ವಾಮೀಜಿಗಳು ತೀವ್ರ ಆಕ್ಷೇಪ ಎತ್ತಿದ್ದಾರೆ. ಮೋಹನ್ ಭಾಗವತ್ ಸಂಘವನ್ನು ನಡೆಸ್ತಾರೆ ಹೊರತು ಹಿಂದೂ ಧರ್ಮವನ್ನಲ್ಲ ಎಂದು ಕಿಡಿಕಾರಿದ್ದಾರೆ. ಧರ್ಮಕ್ಕೆ ಸಂಬಂಧಿಸಿದ ವಿಚಾರಗಳನ್ನು ಸಂಘಕ್ಕಿಂತ ನಾವು ನಿರ್ಧರಿಸುತ್ತೇವೆ ಎಂದು ಸ್ವಾಮೀಜಿಗಳು ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಮಾತನಾಡಿದ್ದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮ ಮಂದಿರ ನಿರ್ಮಾಣದ ಬಳಿಕ ಮಂದಿರ ಮಸೀದಿ ವಿವಾದ ಸೃಷ್ಟಿಸಿ ಕೆಲವರು ನಾಯಕರಾಗಲು ಹೋಗುತ್ತಿದ್ದಾರೆ. ಇದನ್ನೆಲ್ಲಾ ಒಪ್ಪಲು ಆಗುತ್ತಾ? ಇದು ಮುಂದುವರಿಯಬಾರದು. ನಮ್ಮ ದೇಶ ಸಾಮರಸ್ಯದಿಂದ ಕೂಡಿದೆ ಎಂಬುದನ್ನು ವಿಶ್ವಕ್ಕೆ ಸಾರಬೇಕು ಎಂದಿದ್ದರು.

ಅಖಿಲ ಭಾರತೀಯ ಸಂತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಜಿತೇಂದ್ರನಾಥ್ ಸರಸ್ವತಿ ಅವರು, ಧರ್ಮದ ವಿಚಾರದಲ್ಲಿ ಧಾರ್ಮಿಕ ಗುರುಗಳು ನಿರ್ಧರಿಸುತ್ತಾರೆ. ಅವರು ಏನು ತೀರ್ಮಾನ ಮಾಡ್ತಾರೆ ಅದನ್ನು ಸಂಘ ಮತ್ತು ವಿಎಚ್ಪಿ ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
ಮತ್ತೊಬ್ಬ ಸ್ವಾಮೀಜಿ ಜಗದ್ಗುರು ರಾಮಭದ್ರಾಚಾರ್ಯ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ಗೆ ಸವಾಲು ಹಾಕಿದ್ದು, ಮೋಹನ್ ಭಾಗವತ್ ನಮ್ಮ ಶಿಸ್ತುಪಾಲಕ ಅಲ್ಲ. ನಾವು ಹಿಂದೂಗಳ ಶಿಸ್ತುಪಾಲಕರು ಎಂದು ಹೇಳಿದ್ದಾರೆ. ಮೋಹನ್ ಭಾಗವತ್ ಏನು ಹೇಳಿದ್ದಾರೋ ಅದು ಅವರ ವೈಯಕ್ತಿಕ ಅಭಿಪ್ರಾಯ, ಅದಕ್ಕೂ ನಮಗೂ ಸಂಬಂಧ ಇಲ್ಲ. ಅವರು ಸಂಘವನ್ನು ಮುನ್ನಡೆಸುತ್ತಿದ್ದಾರೆ, ಅವರು ಹಿಂದೂ ಧರ್ಮವನ್ನು ಪ್ರತಿನಿಧಿಸುತ್ತಿಲ್ಲ ಎನ್ನುವ ಮೂಲಕ ನೇರ ಟಾಂಗ್ ನೀಡಿದ್ದಾರೆ.
ಸತ್ಯದ ಕಡೆ ನಮ್ಮ ಗಮನ ಇರಲಿದೆ. ಎಲ್ಲಿ ಪುರಾತನ ಹಿಂದೂ ದೇಗುಲಗಳು ಸಿಗುತ್ತವೋ ಅವುಗಳನ್ನು ಪುನರ್ ಪ್ರತಿಷ್ಠಾಪಿಸುವುದು ನಮ್ಮ ಜವಾಬ್ದಾರಿ. ಅದನ್ನು ನಾವು ಮಾಡೇ ಮಾಡ್ತೀವಿ. ಇದೇನು ಹೊಸ ಚಿಂತನೆಯಲ್ಲ, ಸಾಂಸ್ಕೃತಿಕ ಹಾಗೂ ಧಾರ್ಮಿಕ ರಕ್ಷಣೆಯ ಭಾಗವಾಗಿ ಈ ಕೆಲಸವನ್ನು ನಾವು ಮಾಡುತ್ತೇವೆ ಎಂದಿದ್ದಾರೆ.
Attacking the BJP-RSS claiming that its “duplicity knows no boundaries”, Congress on Tuesday alleged that RSS chief Mohan Bhagwat will project a soft image by talking against Hindutva activists seeking temples behind mosques while others do the opposite.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm