ಬ್ರೇಕಿಂಗ್ ನ್ಯೂಸ್
26-01-25 09:37 pm HK News Desk ದೇಶ - ವಿದೇಶ
ನವದೆಹಲಿ, ಜ. 26; ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪಥ ಸಂಚಲನದಲ್ಲಿ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಎಂಬ ಹೆಸರಿನ ಕರ್ನಾಟಕ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು.
ರಾಜಧಾನಿಯ ಕರ್ತವ್ಯ ಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವಿಶಿಷ್ಟ ಪೂರ್ಣ ಸ್ತಬ್ಧಚಿತ್ರಗಳ ಮೂಲಕ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು.
ನಿಗದಿತ ರೂಪು ರೇಷೆಯಂತೆ ಈ ಸ್ತಬ್ಧಚಿತ್ರವು ದಿನಗಳ ಲೆಕ್ಕದಲ್ಲಿ ಆಕರ್ಷಕವಾಗಿ ಮೈದಳೆದಿತ್ತು. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದೆ. ಅಹಿಂಸಾವಾದಿಯ ನೆಲೆಬೀಡು, ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿದ್ದು, ದೇವಾಲಯವೇ ಮರುಜೀವ ತಳೆದಂತಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಉಸ್ತುವಾರಿಯಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಕಲಾ ನಿರ್ದೇಶಕ ಶಶಿಧರ ಅಡಪ ಅವರು ಕಲಾ ನಿರ್ದೇಶನ ಮಾಡಿದ್ದಾರೆ. ಸಂಗೀತ ನಿರ್ದೇಶಕ ಪ್ರವೀಣ್ ಡಿ.ರಾವ್ ಅವರು ಕನ್ನಡ ಸಾಹಿತ್ಯ ಇರುವ ಸುಮಧುರವಾದ ಸಂಗೀತ ಕರ್ತವ್ಯಪಥದಲ್ಲಿ ಕೇಳುಗರ ಮನಸೂರಗೊಂಡಿತು. ಮೈಸೂರು, ಬೆಂಗಳೂರು, ಗದಗ ಮತ್ತು ಧಾರವಾಡದಿಂದ ಆಗಮಿಸಿದ 18 ಜನ ಕಲಾವಿದರಿರುವ ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ, ಸಾಂಪ್ರದಾಯಿಕ ಉಡುಪಿನಲ್ಲಿ
ಕರ್ತವ್ಯಪಥದಲ್ಲಿ ಕಂಗೊಳಿಸಿದರು. ಇನ್ನುಳಿದ 10 ಜನ ಕಲಾವಿದರು ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಗಮನಸೆಳೆದರು.
ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ 'ಶಿಲ್ಪಕಲೆಯ ತೊಟ್ಟಿಲು' ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.
ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ. 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸಿತು.
2022ರಲ್ಲಿ ಇಲಾಖೆ ಪ್ರದರ್ಶಿಸಿದ್ದ ʼಸಾಂಪ್ರದಾಯಿಕ ಕಸೂತಿ ತೊಟ್ಟಿಲುʼಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೊಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್ಗಾಗಿ ಪ್ರಶಸ್ತಿ ಲಭಿಸಿತ್ತು.
Karnataka's tableau in the 76th Republic-Day parade here on Sunday depicted the exquisite and artistic temples of the historic city of Lakkundi.Located in Gadag district of Karnataka, about 70 km from Hubballi, Lakkundi is called the "Cradle of Stone Craft" for its stunning stone architecture.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm