ಬ್ರೇಕಿಂಗ್ ನ್ಯೂಸ್
17-03-25 10:57 pm HK News Desk ದೇಶ - ವಿದೇಶ
ಮುಂಬೈ, ಮಾ.17 : ಛತ್ರಪತಿ ಶಿವಾಜಿ ಮಹಾರಾಜ ಪುತ್ರ ಸಂಭಾಜಿ ಕುರಿತ 'ಛಾವಾ' ಚಿತ್ರ ಧೂಳೆಬ್ಬಿಸಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಶಿವಾಜಿ ಪರ ಕಿಚ್ಚು ಎದ್ದಿದೆ. ಶಿವಾಜಿ ಮಹಾರಾಜರ ಜನ್ಮ ದಿನಾಚರಣೆಯ ಸಂದರ್ಭದಲ್ಲೇ ಮೊಘಲ್ ರಾಜ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಅಭಿಯಾನ ಆರಂಭಿಸಿವೆ.
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ನೇತೃತ್ವದ ಸಂಘಟನೆಗಳು ಸಂಭಾಜಿ ನಗರದಲ್ಲಿ ಪ್ರಾಚ್ಯವಸ್ತು ಇಲಾಖೆ ವ್ಯಾಪ್ತಿಯಲ್ಲಿರುವ ಔರಂಗಜೇಬನ ಸಮಾಧಿಯನ್ನು ಕೆಡವಲು ಒತ್ತಾಯಿಸಿ ಬಾಬರಿ ಮಸೀದಿ ಮಾದರಿ ಆಂದೋಲನವನ್ನು ಪ್ರಾರಂಭಿಸಿವೆ. ಇದಕ್ಕೆ ಆಡಳಿತಾರೂಢ ಬಿಜೆಪಿ ನಾಯಕರಿಂದ ಬೆಂಬಲ ವ್ಯಕ್ತವಾಗಿದ್ದು ಮಹಾರಾಷ್ಟ್ರ ವಿಧಾನಸಭೆಯ ಅಧಿವೇಶನದಲ್ಲು ಪ್ರಸ್ತಾಪಗೊಂಡು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಹಿಂದೂಪರ ಸಂಘಟನೆಗಳು ಔರಂಗಜೇಬ್ ಸಮಾಧಿಯನ್ನು ಸರ್ಕಾರವೇ ಕೆಡವಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಗಡುವು ನೀಡಿದ್ದಾರೆ. ಇದೇ ವೇಳೆ, ಹಿಂದೂ ಜನಜಾಗೃತಿ ಸಮಿತಿ ಸಮಾಧಿ ನಿರ್ವಹಣೆಗೆ ಹಣಕಾಸಿನ ನೆರವು ನಿಲ್ಲಿಸುವಂತೆ ಸರ್ಕಾರವನ್ನು ಆಗ್ರಹಿಸಿದೆ.
ಮಹಾರಾಷ್ಟ್ರ ಮತ್ತು ಗೋವಾ ವಿಭಾಗದ ವಿಎಚ್‌ಪಿ ಕಾರ್ಯದರ್ಶಿ ಗೋವಿಂದ್ ಶೆಂಡೆ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಆಂದೋಲನ ನಡೆಸಲಾಗುವುದು. ಹಂತ ಹಂತವಾಗಿ ಪ್ರತಿಭಟನೆ, ಪ್ರತಿಕೃತಿ ದಹನ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುವುದು. ಅಂತಿಮವಾಗಿ ಚಲೋ ಸಂಭಾಜಿನಗರ್ ಮಾಡುತ್ತೇವೆ ಎಂದಿದ್ದಾರೆ.
ಗೃಹ ಖಾತೆಯನ್ನೂ ಹೊಂದಿರುವ ಸಿಎಂ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿ, 'ಔರಂಗಜೇಬನ ಸಮಾಧಿ ಪುರಾತತ್ವ ಇಲಾಖೆಯ ರಕ್ಷಣೆಯಲ್ಲಿದ್ದು ಅದನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಕರ್ತವ್ಯ. ಆದಾರೂ ಔರಂಗಜೇಬನ ವೈಭವೀಕರಣ ಸಹಿಸುವುದಿಲ್ಲ" ಎಂದು ಹೇಳಿದ್ದಾರೆ.
ಔರಂಗಜೇಬನ ಸಮಾಧಿ ಮಹಾರಾಷ್ಟ್ರದ ಛತ್ರಪತಿ ಸಂಭಾಜಿ ನಗರದೊಳಗಿನ ಖುಲ್ದಾಬಾದ್ ಎಂಬಲ್ಲಿದೆ. ಇದನ್ನು ಹಿಂದೆ ಔರಂಗಾಬಾದ್ ಎಂದು ಕರೆಯುತ್ತಿದ್ದರು. ಈಗ ಔರಂಗಜೇಬನ ಕ್ರೌರ್ಯದ ಕುರಿತ ಚಿತ್ರ ಛಾವಾ ಬರುವುದರೊಂದಿಗೆ ಮಹಾರಾಷ್ಟ್ರದಲ್ಲಿ ಆ ರಾಜನ ವಿರೋಧಿ ಕಿಚ್ಚು ಜೋರಾಗಿದೆ.
Amid growing calls for the demolition of Mughal emperor Aurangzeb's grave, security has been tightened at the tomb in Khultabad, Chhatrapati Sambhajinagar, Maharashtra. Police have installed barricades and surveillance to prevent unrest in the area.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am