ಬ್ರೇಕಿಂಗ್ ನ್ಯೂಸ್
24-04-25 01:58 pm HK News Desk ದೇಶ - ವಿದೇಶ
ನವದೆಹಲಿ, ಎ.24 : ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಪತಿ ಉದ್ಯಮಿಯೂ ಆಗಿರುವ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಉಗ್ರರ ದಾಳಿಯನ್ನು ಹಿಂದುತ್ವದ ಜೊತೆಗೆ ಲಿಂಕ್ ಮಾಡಿ, ಸರ್ಕಾರ ಹಿಂದುತ್ವ ಪರವಾಗಿದ್ದಕ್ಕೆ ಉಗ್ರರು ಹಿಂದುಗಳನ್ನು ಟಾರ್ಗೆಟ್ ಮಾಡಿದ್ದಾರೆಂದು ಹೇಳಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ದೇಶದಲ್ಲಿ ಅಲ್ಪಸಂಖ್ಯಾತರು ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದಾಗಿ ಅವರಲ್ಲಿ ಅಸಹಿಷ್ಣು ಭಾವನೆ ಇದೆ. ಕೇಂದ್ರದ ಬಿಜೆಪಿ ಸರ್ಕಾರ ಹಿಂದುತ್ವ ಪರವಾಗಿ ಕೆಲಸ ಮಾಡುತ್ತಿದೆ. ಸರ್ಕಾರ ಹಿಂದೂತ್ವದ ಬಗ್ಗೆ ಮಾತನಾಡುವುದನ್ನು ನಾವು ನೋಡುತ್ತಿದ್ದೇವೆ. ನಮ್ಮ ದೇಶದಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಒಡಕು ಉಂಟಾಗಿದೆ. ಹಾಗಾಗಿ ಉಗ್ರರು ಹಿಂದುಗಳನ್ನು ಗುರಿಯಾಗಿಸಿ ಕೊಲ್ಲುವ ಕೃತ್ಯ ಮಾಡುತ್ತಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಪ್ರತಿಕ್ರಿಯೆಯಲ್ಲಿ ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ.
ಉಗ್ರರು ಜನರ ಗುರುತನ್ನು ಪರಿಶೀಲಿಸುವ ಮತ್ತು ಹಿಂದೂಗಳನ್ನು ಕೊಲ್ಲುವ ಕೃತ್ಯವು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿರುವ ಸಂದೇಶವಾಗಿದೆ. ಹಿಂದೂಗಳು ಎಲ್ಲಾ ಮುಸ್ಲಿಮರಿಗೆ ತೊಂದರೆ ಕೊಡುತ್ತಿದ್ದಾರೆ ಎಂಬುದು ಈ ರೀತಿಯ ಸಂಘಟನೆಗಳಿಗೆ ಅನಿಸಿದೆ. ಗುರುತನ್ನು ಪತ್ತೆ ಹಚ್ಚಿ ನಂತರ ಯಾರನ್ನೋ ಕೊಲ್ಲುವುದು ಪ್ರಧಾನಿಗೆ ನೀಡಿದ ಸಂದೇಶವಾಗಿದೆ. ಕಾರಣ, ಮುಸ್ಲಿಂರು ದುರ್ಬಲರಾಗಿದ್ದಾರೆ ಎನ್ನುವ ಭಾವನೆ ಉಗ್ರ ಸಂಘಟನೆಗಳಲ್ಲಿ ಇದೆ. ಅಲ್ಪಸಂಖ್ಯಾತರಲ್ಲಿ ದುರ್ಬಲರೆಂಬ ಭಾವನೆಯಿದೆ. ನಮ್ಮ ದೇಶದಲ್ಲಿ ನಾವು ಸುರಕ್ಷಿತರು ಮತ್ತು ಜಾತ್ಯತೀತರು ಎಂಬ ಭಾವನೆ ಸರ್ಕಾರದ ಮಟ್ಟದಿಂದ ಬರಬೇಕು. ಆಗ ಈ ರೀತಿಯ ಕೃತ್ಯಗಳು ನಡೆಯುವುದನ್ನು ನಾವು ನೋಡುವುದಕ್ಕೆ ಆಗಲ್ಲ ಎಂದಿದ್ದಾರೆ. ವಾದ್ರಾ ನೀಡಿರುವ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಆತನ ಹೇಳಿಕೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ, ಈ ಹೇಳಿಕೆಗೆ ಆಘಾತ ವ್ಯಕ್ತಪಡಿಸಿದ್ದಾರೆ. ಉಗ್ರರ ಕೃತ್ಯ ಕುರಿತು ಸೋನಿಯಾ ಅಳಿಯ ರಾಬರ್ಟ್ ವಾದ್ರಾ ಸಮರ್ಥನೆ ನಾಚಿಕೆಗೇಡಿನತನದ್ದು. ಖಂಡಿಸುವ ಬದಲು ಉಗ್ರರನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಪಾಕ್ ಉಗ್ರರು ಮಾಡಿರುವ ದೌರ್ಜನ್ಯಗಳಿಗೆ ಭಾರತ ಸರಕಾರವನ್ನು ದೂಷಿಸುತ್ತಿದ್ದಾರೆ. ಇದು ಇವರ ಮಾನಸಿಕತೆಯನ್ನು ತೋರಿಸುತ್ತದೆ ಎಂದಿದ್ದಾರೆ.
Shocking! Sonia Gandhi’s son-in-law Robert Vadra shamelessly defends an act of terror, offering cover to the terrorists instead of condemning them. He doesn’t stop there, instead, shifts the blame onto India for the atrocities committed by Pakistani terrorists. https://t.co/3CQlCmewjn
— Amit Malviya (@amitmalviya) April 23, 2025
Businessman Robert Vadra, husband of Congress MP Priyanka Gandhi, on Wednesday linked the Pahalgam terror attack to BJP government's Hindutva push in the country evoking a strong retort from the BJP. "If you dissect this terrorist act that took place, if they (terrorists) are looking at people's identity, why are they doing this? Because there's a divide that has come about in our country with Hindus and Muslims ... and also christians.
24-04-25 04:56 pm
HK News Desk
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
24-04-25 04:59 pm
HK News Desk
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
Pahalgam terror attack, Pakistani terrorists:...
23-04-25 09:25 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm