ಬ್ರೇಕಿಂಗ್ ನ್ಯೂಸ್
30-04-25 03:14 pm HK News Desk ದೇಶ - ವಿದೇಶ
ನವದೆಹಲಿ, ಎ.30 : ಭಾರತೀಯ ಸೇನಾಪಡೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಾಳಿ ವಿಚಾರದಲ್ಲಿ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ ಪರಮಾಧಿಕಾರ ನೀಡಿದ್ದಾರೆ. ಹೀಗಾಗಿ ಯಾವುದೇ ಸಂದರ್ಭದಲ್ಲಿ ದಾಳಿ ಎಸಗುವ ಸಾಧ್ಯತೆಯಿದೆ.
ಪ್ರಧಾನಿ ನಿವಾಸದಲ್ಲಿ ಐದು ಗಂಟೆಗಳ ಕಾಲ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನವನ್ನು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ತ್ರಿವಳಿ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರ ಜೊತೆಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ.
ಮೋದಿ ನಿರ್ಧಾರ ಬೆನ್ನಲ್ಲೇ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಅತ್ತೌಲ್ಲಾ ತರಾರ್ ತನ್ನ ದೇಶದ ಸೇನಾಪಡೆಗಳಿಗೆ ಎಚ್ಚರಿಕೆ ನೀಡಿದ್ದಾರೆ.
"ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿದೆ ಎಂಬ ನೆಪದಲ್ಲಿ ಭಾರತ ಮುಂದಿನ 24-36 ಗಂಟೆಗಳಲ್ಲಿ ಪಾಕಿಸ್ತಾನದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಉದ್ದೇಶಿಸಿದೆ ಎಂಬ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಪಾಕಿಸ್ತಾನಕ್ಕೆ ಇದೆ" ಎಂದು ಅತ್ತೌಲ್ಲಾ ತರಾರ್ ಸೋಶಿಯಲ್ ಮೀಡಿಯಾ ಎಕ್ಸ್ನಲ್ಲಿ ಬರೆದಿದ್ದು, ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ. ಪಹಲ್ಗಾಮ್ ದಾಳಿಯ ಕುರಿತು "ತಟಸ್ಥ ಆಯೋಗದಿಂದ ವಿಶ್ವಾಸಾರ್ಹ, ಪಾರದರ್ಶಕ ಮತ್ತು ಸ್ವತಂತ್ರ ತನಿಖೆಗೆ" ಇಸ್ಲಾಮಾಬಾದ್ ಸಹಕರಿಸಲು ಸಿದ್ಧವಾಗಿದೆ ಎಂದು ಸಚಿವ ಹೇಳಿದ್ದು, ಭಾರತದ ಯಾವುದೇ ಮಿಲಿಟರಿ ಸಾಹಸಕ್ಕೆ ನಿರ್ಣಾಯಕವಾಗಿ ಪ್ರತಿಕ್ರಿಯಿಸಲಾಗುವುದು ಎಂದು ಪಾಕಿಸ್ತಾನ ಪುನರುಚ್ಚರಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Pakistan on Wednesday (April 30, 2025), citing “credible intelligence”, claimed that India was planning to carry out military action against it within the next 24 to 36 hours and warned New Delhi that consequences will follow.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm