Japan, India Economy: ಜಪಾನ್ ದೇಶವನ್ನು ಹಿಂದಿಕ್ಕಿದ ಭಾರತ ; ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದ ನೀತಿ ಆಯೋಗದ ಸಿಇಓ ಬಿವಿಆರ್ ಸುಬ್ರಹ್ಮಣ್ಯಂ 

25-05-25 04:29 pm       HK News Desk   ದೇಶ - ವಿದೇಶ

ಭಾರತವು ಆರ್ಥಿಕತೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿದ್ದು ಜಗತ್ತಿನ 4ನೇ ಅತೀದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ನೀತಿ ಆಯೋಗದ ಸಿಇಓ ಬಿವಿಆರ್ ಸುಬ್ರಹ್ಮಣ್ಯಂ ಮಾಹಿತಿ ನೀಡಿದ್ದಾರೆ. ‌

ನವದೆಹಲಿ, ಮೇ 25 : ಭಾರತವು ಆರ್ಥಿಕತೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿದ್ದು ಜಗತ್ತಿನ 4ನೇ ಅತೀದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ನೀತಿ ಆಯೋಗದ ಸಿಇಓ ಬಿವಿಆರ್ ಸುಬ್ರಹ್ಮಣ್ಯಂ ಮಾಹಿತಿ ನೀಡಿದ್ದಾರೆ. ‌

'ಭಾರತವು ಅಧಿಕೃತವಾಗಿ ಜಪಾನ್ ದೇಶವನ್ನು ಹಿಂದಿಕ್ಕಿದ್ದು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಮೂಡಿಬಂದಿದೆ. ಇದು ದೇಶ ಸಾಗುತ್ತಿರುವ ಆರ್ಥಿಕ ಹಾದಿಯಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ ಎಂದವರು ಹೇಳಿದ್ದಾರೆ. ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯಲ್ಲಿ ಸುಬ್ರಹ್ಮಣ್ಯಂ ಈ ಮಾತುಗಳನ್ನಾಡಿದ್ದಾರೆ.

ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಇತ್ತೀಚಿನ ದತ್ತಾಂಶವನ್ನು ಉಲ್ಲೇಖಿಸಿದ ಅವರು, ಭಾರತವು $4 ಟ್ರಿಲಿಯನ್ ಒಟ್ಟು ದೇಶೀಯ ಉತ್ಪನ್ನವನ್ನು ಹೊಂದಿದೆ. ನಾವು ಈಗ 4 ಟ್ರಿಲಿಯನ್ ಅಮೆರಿಕನ್‌ ಡಾಲರ್‌ ಆರ್ಥಿಕತೆಯನ್ನು ಹೊಂದಿದ್ದೇವೆ. ಜಗತ್ತಿನಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಜಪಾನ್‌ ದೇಶದ ಆರ್ಥಿಕತೆಗಿಂತ ಭಾರತದ ಹಣಕಾಸು ದೊಡ್ಡದಾಗಿದೆ. ಐಎಂಎಫ್‌ ಅಂಕಿ ಅಂಶಗಳನ್ನು ಗಮನಿಸಿದರೆ, ಸದ್ಯ ಅಮೆರಿಕ, ಚೀನಾ ಮತ್ತು ಜರ್ಮನಿ ದೇಶಗಳು ಮಾತ್ರ ಭಾರತಕ್ಕಿಂತ ದೊಡ್ಡ ಆರ್ಥಿಕತೆಯೆನ್ನು ಹೊಂದಿವೆ. ನಮ್ಮ ಯೋಜನೆಗಳೆಲ್ಲವೂ ಕೈಗೂಡಿದರೆ, ಮುಂದಿನ 2.5-3 ವರ್ಷಗಳಲ್ಲಿ ನಾವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುತ್ತೇವೆ ಎಂದು ಬಿ.ವಿ.ಆರ್‌ ಸುಬ್ರಹ್ಮಣ್ಯಂ ಭರವಸೆ ವ್ಯಕ್ತಪಡಿಸಿದರು. 

ಕಳೆದ ಹತ್ತು ವರ್ಷಗಳಲ್ಲಿ ಅನುಷ್ಠಾನ ಯೋಗ್ಯ ಯೋಜನೆಗಳನ್ನು ನೀಡಿದ್ದೇವೆ. ವಿಕಸಿತ್ ಭಾರತ್@2047 ಕೇವಲ ಮಹತ್ವಾಕಾಂಕ್ಷೆಯಲ್ಲ, ಸಾಧಿಸಬಹುದಾದದ್ದು ಎಂಬ ವಿಶ್ವಾಸವನ್ನು ನಮಗೆ ನೀಡುತ್ತದೆ ಎಂದು ಹೇಳಿದ ಅವರು, ವಿಕಸಿತ್ ಭಾರತ@2047 ಎಂಬುದು ಕೇವಲ ಘೋಷಣೆಯಲ್ಲ. ಅದರ ಹಿಂದೆ ಒಂದು ಕ್ರಮಬದ್ಧ, ವಿಕೇಂದ್ರೀಕೃತ ಯೋಜನೆ ಇದೆ. 17 ರಾಜ್ಯಗಳು ಈಗಾಗಲೇ ತಮ್ಮ ವಿಷನ್ 2047 ದಾಖಲೆಗಳನ್ನು ಸಿದ್ಧಪಡಿಸಿವೆ. ಗುಜರಾತ್, ಆಂಧ್ರಪ್ರದೇಶ, ಉತ್ತರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳು ಮುಂಚೂಣಿಯಲ್ಲಿವೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆರ್ಥಿಕ ಗುರಿಯನ್ನು ನಿಗದಿಪಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ" ಎಂದು ನೀತಿ ಆಯೋಗದ ಸಿಇಒ ಸುಬ್ರಹ್ಮಣ್ಯಂ ಹೇಳಿದ್ದಾರೆ.

India has become the fourth largest economy in the world, overtaking Japan, NITI Aayog CEO BVR Subrahmanyam said on Saturday. Briefing reporters after the 10th Governing Council meeting of Niti Aayog, Mr Subrahmanyam said the overall geopolitical and economic environment is favourable to India.