ಬ್ರೇಕಿಂಗ್ ನ್ಯೂಸ್
13-06-25 12:25 pm HK News Desk ದೇಶ - ವಿದೇಶ
ಅಹಮದಾಬಾದ್, ಜೂ 13: ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಧಾನಮಂತ್ರಿ ಮೋದಿ, ಇಂದು ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬೆಳಗ್ಗೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಿಂದ ಅಹಮದಾಬಾದ್ಗೆ ಬಂದಿಳಿದ ಪ್ರಧಾನಿ, ನೇರವಾಗಿ ಏರ್ ಇಂಡಿಯಾ ವಿಮಾನ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಸಾಥ್ ನೀಡಿದರು.
ದುಃಖಿತರಾದಂತೆ ಕಂಡುಬಂದ ಪ್ರಧಾನಿ ಮೋದಿ, ಅಧಿಕಾರಿಗಳೊಂದಿಗೆ ಮಾತನಾಡುವಾಗಿ ಗದ್ಗತಿರಾದರು. ಅಪಘಾತ ನಡೆದ ಸ್ಥಳ ಮತ್ತು ಅಪಘಾತದಿಂದ ಹಾನಿಗೊಳಗಾದ ಹಾಸ್ಟೇಲ್ ಪ್ರದೇಶವನ್ನು ಪರಿಶೀಲಿಸಿದರು. ಈ ವೇಳೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುಜರಾತ್ ಮುಖ್ಯಮಂತ್ರಿಯಾಗಿ 12 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಮೋದಿ, ಈ ದುರಂತದಿಂದ "ದಿಗ್ಭ್ರಮೆಗೊಂಡಿದ್ದೇನೆ". "ಈ ದುರ್ಘಟನೆಯ ಬಗ್ಗೆ ಮಾತನಾಡಲು ನನಗೆ ಪದಗಳು ಸಿಗುತ್ತಿಲ್ಲ. ಇದು ನನ್ನ ಹೃದಯವನ್ನು ಘಾಸಿಗೊಳಿಸಿದೆ" ಎಂದು ತಮ್ಮ ಅಧಿಕೃತ ಎಕ್ಸ್ ಅಕೌಂಟ್ನಲ್ಲಿ ಟ್ವೀಟ್ ಮಾಡಿದ್ದರು.
ಅಪಘಾತ ಸಂಭವಿಸಿದ ಬಳಿಕ ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ತಕ್ಷಣ ಅಹಮದಾಬಾದ್ಗೆ ತೆರಳುವಂತೆ ಸೂಚನೆ ನೀಡಿದ್ದರು.
ಇದೀಗ ಖುದ್ದು ಅಪಘಾತ ಸ್ಥಳಕ್ಕೆ ಭೇಟಿ ನೀಡಿರುವ ಮೋದಿ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಗರಿಕ ವಿಮಾನಯಾನ ಇಲಾಖೆ ಅಧಿಕಾರಿಗಳಿಂದ ಪ್ರಧಾನಿ ಮೋದಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಇದಕ್ಕೂ ಮೊದಲು ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ, ವಿಮಾನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ಮಧ್ಯ ಅಪಘಾತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕನನ್ನು, ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ವಿಶ್ವಾಸ್ ಕುಮಾರ್ ಅವರಿಗೆ ಅಪಘಾತದಿಂದ ಪಾರಾದ ಬಗೆಯನ್ನು ಕೇಳಿದ ಪ್ರಧಾನಿ ಮೋದಿ, ಬದುಕುಳಿದಿರುವಕ್ಕೆ ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಬೇಗ ಗುಣಮುಖರಾಗುವಂತೆ ಹಾರೈಸಿದರು.
ವಿಮಾನ ನಿಲ್ದಾಣಕ್ಕೆ ಅಂಜಲಿ ರುಪಾನಿ ಭೇಟಿ:
ಇನ್ನು ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ ಗುಜರಾತ್ ಮಾಜಿ ಮುಖ್ಯಂತ್ರಿ ವಿಜಯ್ ರುಪಾನಿ ಅವರ ಪತ್ನಿ ಅಂಜಲಿ ರುಪಾನಿ, ಇಂದು ಅಹಮಾದಾಬಾದ್ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. ದುಃಖತಪ್ತ ಅಂಜಲಿ ರುಪಾನಿ, ಅಪಘಾತ ನಡೆದ ಸ್ಥಳವನ್ನು ಪರಿಶೀಲಿಸಿ ಕಣ್ಣೀರು ಹಾಕಿದರು.
ಇದೇ ವೇಳೇ ಏರ್ ಇಂಡಿಯಾ ವಿಮಾನ ಅಪಘಾತ ನಡೆದ ಸ್ಥಳಕ್ಕೆ ಬ್ರಿಟಿಷ್ ಹೈಕಮಿಷನ್ ಕಚೇರಿಯ ಹಿರಿಯ ಅಧಿಕಾರಿಗಳೂ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆಯಲ್ಲಿ 53 ಬ್ರಿಟನ್ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂಬುದು ಇಲ್ಲಿ ಉಲ್ಲೇಖನೀಯ.
Prime Minister Narendra Modi on Friday met those injured in the Air India plane crash at the civil hospital in Ahmedabad. He also met Vishwas Kumar Ramesh, the lone survivor of the tragedy in which 265 people lost their lives on Thursday. Modi visited the C7 ward of the hospital, where 25 injured people are undergoing treatment.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm