ಬ್ರೇಕಿಂಗ್ ನ್ಯೂಸ್
19-06-25 10:58 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 19 : ಭ್ರಷ್ಟಾಚಾರ ಆರೋಪಕ್ಕೀಡಾಗಿದ್ದ ದೆಹಲಿ ಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಪದಚ್ಯುತಿಗೆ ಸುಪ್ರೀಂ ಕೋರ್ಟಿನ ಮೂವರು ಸದಸ್ಯರನ್ನೊಳಗೊಂಡ ಸಮಿತಿ ಶಿಫಾರಸ್ಸು ಮಾಡಿದೆ. ವರ್ಮಾ ಅವರ ನಿವಾಸದಲ್ಲಿ ಅರೆ ಸುಟ್ಟು ಹೋದ ಕಂತೆ ಕಂತೆ ನಗದು ಹಣ ಪತ್ತೆಯಾದ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಮಿತಿ ಕ್ರಮಕ್ಕೆ ಶಿಫಾರಸು ಮಾಡಿದೆ.
55 ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದ ಸಮಿತಿ 64 ಪುಟಗಳ ವರದಿ ತಯಾರಿಸಿದ್ದು ನ್ಯಾಯಮೂರ್ತಿ ವರ್ಮಾ ದುರ್ವರ್ತನೆ ವಿರುದ್ಧ ಆರೋಪ ಪಟ್ಟಿ ಮಾಡಿದೆ. ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸದ ಆವರಣದ ಸ್ಟೋರ್ ರೂಮ್ಗೆ ಬೆಂಕಿ ಬಿದ್ದ ಸಂದರ್ಭದಲ್ಲಿ ಹಣದ ಕಂತೆ ಪತ್ತೆಯಾಗಿತ್ತು. ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ವರ್ಮಾ ಅವರು ತಮ್ಮ ನಿವಾಸದಲ್ಲಿ ಪತ್ತೆಯಾದ ಹಣದ ಬಗ್ಗೆ ತನಗೇನೂ ಗೊತ್ತಿಲ್ಲ ಎಂದು ಹೇಳಿದರೂ, ಆ ಬಗ್ಗೆ ಸಮರ್ಥ ವಿವರಣೆ ನೀಡಲು ವಿಫಲರಾಗಿದ್ದಾರೆಂದು ಸಮಿತಿ ಹೇಳಿದೆ. ಇದು ನಂಬಲು ಸಾಧ್ಯವಿಲ್ಲ. ಯಾವುದೇ ಪಿತೂರಿ ನಡೆದಿದ್ದರೆ, ಅವರು ಏಕೆ ದೂರು ದಾಖಲಿಸಲಿಲ್ಲ ಅಥವಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಥವಾ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಯಾಕೆ ತಿಳಿಸಲಿಲ್ಲ? ಎಂದು ಪ್ರಶ್ನಿಸಿದೆ.
ಕಂತೆ ಕಂತೆ ಹಣ ಪತ್ತೆಯಾದ ವಿಚಾರದ ಬಗ್ಗೆ ಅವರಿಗೂ ಅದಕ್ಕೂ ಸಂಬಂಧ ಇಲ್ಲ ಎಂದಾದರೆ ಯಾಕೆ ಘಟನೆಯ ಬಗ್ಗೆ ಪೊಲೀಸರು, ನ್ಯಾಯಾಂಗ ಅಥವಾ ಯಾವುದೇ ಪ್ರಾಧಿಕಾರಕ್ಕೆ ವರದಿ ಮಾಡಿಲ್ಲ ಎಂದು ಪ್ರಶ್ನಿಸಿದೆ. ಹೆಚ್ಚಿನ ಸಂಖ್ಯೆಯ ಪ್ರತ್ಯಕ್ಷದರ್ಶಿಗಳು ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ ಸಮಿತಿ ಸ್ಥಳದಲ್ಲಿ ಪತ್ತೆಯಾದ 500 ರೂ. ನೋಟುಗಳನ್ನು ದೃಢಪಡಿಸಿದೆ.
ಸಮಿತಿಯ ತನಿಖಾ ವರದಿಯ ನಂತರವೂ ನ್ಯಾಯಮೂರ್ತಿ ವರ್ಮಾ ರಾಜೀನಾಮೆ ನೀಡಲು ನಿರಾಕರಿಸಿದ್ದು ಸಮಿತಿ ಸದಸ್ಯರು ಪದಚ್ಯುತಿಗೆ ನಿರ್ಧಾರ ಕೈಗೊಂಡಿದ್ದಾರೆ. ದೋಷಾರೋಪ ವರದಿ ನೀಡಿದ ನಂತರ ಮುಖ್ಯ ನ್ಯಾಯಮೂರ್ತಿ ಖನ್ನಾ ಅವರು, ವರ್ಮಾಗೆ ರಾಜೀನಾಮೆ ನೀಡುವಂತೆ ಕೇಳಿದ್ದರು. ಆದರೆ ಈ ಪ್ರಸ್ತಾಪಕ್ಕೆ ವಿರೋಧ ಸೂಚಿಸಿದ್ದರು.
Multiple witnesses saw a large pile of currency notes inside Justice Yashwant Varma’s residence, but he never filed a police complaint or informed judicial authorities, a Supreme Court-appointed inquiry panel has found. The panel also termed the conduct of the Allahabad High Court judge 'unnatural' and recommended his removal.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm