ಬ್ರೇಕಿಂಗ್ ನ್ಯೂಸ್
25-06-25 11:10 am HK News Desk ದೇಶ - ವಿದೇಶ
ನವದೆಹಲಿ, ಜೂನ್ 24 : ಇಸ್ರೇಲ್ ಮತ್ತು ಇರಾನ್ ಮಧ್ಯೆ ಕದನ ವಿರಾಮ ಘೋಷಿಸಿದ್ದರೂ ಉಭಯ ದೇಶಗಳು ಯುದ್ಧದಲ್ಲಿ ತೊಡಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಿ ಎಂದು ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.
12 ದಿನಗಳ ಇಸ್ರೇಲ್ ಮತ್ತು ಇರಾನ್ ಯುದ್ಧಕ್ಕೆ ಮಂಗಳವಾರ ಬೆಳಗ್ಗೆ ಅಮೆರಿಕ ಕದನ ವಿರಾಮ ಘೋಷಣೆ ಮಾಡಿತ್ತು. ಘೋಷಣೆಯ ಬೆನ್ನಲ್ಲೇ ಇರಾನ್ ಅದನ್ನು ಉಲ್ಲಂಘಿಸಿದ್ದು ಇಸ್ರೇಲ್ ಮೇಲೆ ಅಟ್ಯಾಕ್ ಮಾಡಿತ್ತು. ಇದೇ ನೆಪವೊಡ್ಡಿ ಇಸ್ರೇಲ್ ಮರು ದಾಳಿಗೆ ಮುಂದಾಗಿದ್ದು ತಕ್ಕ ಪ್ರತ್ಯುತ್ತರ ನೀಡುವಂತೆ ಸೇನಾ ಪಡೆಗೆ ಸೂಚಿಸಿದೆ. ದಕ್ಷಿಣ ಇಸ್ರೇಲಿನ ಬೀರ್ ಶೆವಾದ ಮೇಲೆ ಕ್ಷಿಪಣಿ ದಾಳಿಯಾಗಿದ್ದರಿಂದ ಏಳು ಮಂದಿ ಸಾವು ಕಂಡಿದ್ದಾರೆ.
ಈ ಮಧ್ಯೆ ಇರಾನ್ ಮೇಲೆ ಬಾಂಬ್ ದಾಳಿ ನಡೆಸದಂತೆ ಇಸ್ರೇಲ್ಗೆ ತಮ್ಮ ಟ್ರುತ್ ಸೋಶಿಯಲ್ ಪೋಸ್ಟ್ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾಕೀತು ಮಾಡಿದ್ದಾರೆ. ನೀವು ಈಗ ಇರಾನ್ ಮೇಲೆ ಬಾಂಬ್ ದಾಳಿ ನಡೆಸಿದರೆ, ಬಹುದೊಡ್ಡ ಯುದ್ಧ ವಿರಾಮ ಉಲ್ಲಂಘನೆಯಾಗಲಿದೆ. ನಿಮ್ಮ ವಿಮಾನಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಟ್ರಂಪ್ ಸೂಚಿಸಿದ್ದಾರೆ.
ಅಮೆರಿಕ ಕದನ ವಿರಾಮ ಘೋಷಣೆ ಮಾಡಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಒಡಂಬಡಿಕೆ ಆಗಿಲ್ಲ. ಟೆಹ್ರಾನ್ ಕಡೆಯಿಂದ ಬೆಳಗ್ಗೆ ನಾಲ್ಕು ಗಂಟೆಯಿಂದ ಯಾವುದೇ ದಾಳಿ ಆಗಿಲ್ಲ. ಇಸ್ರೇಲ್ ಇದನ್ನು ಉಲ್ಲಂಘಿಸಿ ದಾಳಿ ನಡೆಸಿದರೆ ನಾವು ಪ್ರತ್ಯುತ್ತರ ನೀಡಲು ಮುಕ್ತವಾಗಿದ್ದೇವೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಇರಾನ್ ಮಾತುಕತೆ ಮೂಲಕ ಬಗೆಹರಿಸಲು ರೆಡಿಯಾಗಿದೆ ಎಂಬುದನ್ನು ಈ ಮೂಲಕ ತಿಳಿಸುತ್ತೇವೆ ಎಂದು ಅರಾಗ್ಚಿ ಹೇಳಿದ್ದಾರೆ.
Despite the announcement of a ceasefire between Israel and Iran, hostilities continue to escalate, drawing sharp criticism from U.S. President Donald Trump, who has urged Israel to halt military operations immediately.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm