ಬ್ರೇಕಿಂಗ್ ನ್ಯೂಸ್
29-06-25 11:13 am HK News Desk ದೇಶ - ವಿದೇಶ
ನವದೆಹಲಿ, ಜೂನ್ 29 : ಪಾಕಿಸ್ತಾನ ಎಷ್ಟು ಸುಟ್ಟುಕೊಂಡರೂ ಬುದ್ಧಿ ಕಲಿಯುತ್ತಿಲ್ಲ. ಪಹಲ್ಗಾಮ್ ದಾಳಿಗೆ ಪ್ರತಿಯಾಗಿ 'ಆಪರೇಷನ್ ಸಿಂಧೂರ್' ವೇಳೆ ಭಾರತೀಯ ಸೇನೆ ಧ್ವಂಸಗೊಳಿಸಿದ ಭಯೋತ್ಪಾದಕರ ಲಾಂಚ್ ಪ್ಯಾಡ್ಗಳು ಮತ್ತು ತರಬೇತಿ ಶಿಬಿರಗಳನ್ನು ಮರು ನಿರ್ಮಾಣ ಮಾಡುತ್ತಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಪಾಕ್ ಆಕ್ರಮಿಕ ಕಾಶ್ಮೀರ ಮತ್ತು ಅದಕ್ಕೆ ಹೊಂದಿಕೊಂಡ ಪ್ರದೇಶಗಳಲ್ಲಿ ಭಯೋತ್ಪಾದಕ ಮೂಲ ಸೌಕರ್ಯಗಳನ್ನು ಪುನರ್ ನಿರ್ಮಾಣಕ್ಕೆ ಪಾಕ್ ಸೇನೆ, ಗುಪ್ತಚರ ಸಂಸ್ಥೆ ISI ಮತ್ತು ಸರ್ಕಾರ ಗಣನೀಯ ಪ್ರಮಾಣದ ಧನಸಹಾಯ ನೀಡುತ್ತಿದೆ ಎಂದು ವರದಿಯಾಗಿದೆ. ಮೂರು ಪ್ರಮುಖ ಭಯೋತ್ಪಾದಕ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ ಲಷ್ಕರ್-ಎ-ತೊಯ್ಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ಗಳಿಗೆ ಸಂಬಂಧಿಸಿದ ನೆಲೆಗಳನ್ನು ಗುರಿಯಾಗಿಟ್ಟು ಭಾರತೀಯ ಪಡೆಗಳು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ್ದವು. ಬಹವಾಲ್ಪುರದಲ್ಲಿರುವ ಜೆಇಎಂ ಪ್ರಧಾನ ಕಚೇರಿಯನ್ನು ಧ್ವಂಸಗೊಳಿಸಲಾಗಿತ್ತು.
ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿಯ ದಟ್ಟ ಅರಣ್ಯಗಳಲ್ಲಿ ಹೈಟೆಕ್, ಸಣ್ಣ ಭಯೋತ್ಪಾದಕ ಶಿಬಿರಗಳನ್ನು ನಿರ್ಮಿಸಲು ಪ್ರಯತ್ನಿಸುತ್ತಿವೆ. ಕಣ್ಗಾವಲು ಮತ್ತು ವೈಮಾನಿಕ ದಾಳಿ ತಪ್ಪಿಸುವ ಗುರಿಯನ್ನು ಹೊಂದಲಾಗಿದೆ ಎಂದು ಮೂಲಗಳು ತಿಳಿಸಿವೆ. ಲುನಿ, ಪುತ್ವಾಲ್, ತೈಪು ಪೋಸ್ಟ್, ಜಮಿಲಾ ಪೋಸ್ಟ್, ಉಮ್ರಾನ್ವಾಲಿ, ಚಪ್ರಾರ್, ಫಾರ್ವರ್ಡ್ ಕಹುಟಾ, ಚೋಟಾ ಚಾಕ್ ಮತ್ತು ಜಂಗ್ಲೋರಾ ಮತ್ತಿತರ ಪ್ರದೇಶಗಳಲ್ಲಿ ಮರು ನಿರ್ಮಾಣ ಮಾಡಲಾಗುತ್ತಿರುವ ಶಿಬಿರಗಳನ್ನು ಥರ್ಮಲ್ ಇಮೇಜರ್, ರಾಡಾರ್ ಮತ್ತು ಉಪಗ್ರಹ ಕಣ್ಗಾವಲು ಎದುರಿಸಲು ಸುಧಾರಿತ ತಂತ್ರಜ್ಞಾನಗಳನ್ನು ಅಳವಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಮತ್ತೆ 13 ಲಾಂಚ್ ಪ್ಯಾಡ್ಗಳ ಅಭಿವೃದ್ಧಿ
ಕೆಲ್, ಶಾರ್ದಿ, ದುಧ್ನಿಯಾಲ್, ಅಥ್ಮುಕಾಮ್, ಜುರಾ, ಲೀಪಾ ವ್ಯಾಲಿ, ಪಚಿಬನ್ ಚಮನ್, ತಾಂಡಪಾನಿ, ನೈಯಾಲಿ ಸೇರಿದಂತೆ ಪಿಒಕೆ.ಲ್ಲಿ ಪಾಕಿಸ್ತಾನಿ ಸೇನೆ ಮತ್ತು ಐಎಸ್ಐ 13 ಲಾಂಚ್ ಪ್ಯಾಡ್ಗಳನ್ನು ಮರು ಅಭಿವೃದ್ಧಿಪಡಿಸುತ್ತಿವೆ. ಇದಲ್ಲದೆ, ಆಪರೇಷನ್ ಸಿಂಧೂರ್ ಸಮಯದಲ್ಲಿ ಧ್ವಂಸಗೊಳಿಸಲಾದ ಅಂತಾರಾಷ್ಟ್ರೀಯ ಗಡಿಯಲ್ಲಿರುವ ನಾಲ್ಕು ಭಯೋತ್ಪಾದಕ ಲಾಂಚ್ಪ್ಯಾಡ್ಗಳನ್ನು ಸಹ ಮತ್ತೆ ಸಕ್ರಿಯಗೊಳಿಸಲಾಗುತ್ತಿದೆ. ಇವುಗಳಲ್ಲಿ ಸಾಮಾನ್ಯ ಪಾಕಿಸ್ತಾನ ರೇಂಜರ್ಸ್ ಪೋಸ್ಟ್ಗಳು ಸೇರಿವೆ ಎಂದು ಮೂಲಗಳು ತಿಳಿಸಿವೆ.
Pakistan is actively working to re-establish terrorist launchpads and training camps that were destroyed by the Indian Army during Operation Sindoor in May, launched in response to the Pahalgam terrorist attack, according to intelligence sources.
28-08-25 11:56 am
HK News Desk
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:27 am
Mangalore Correspondent
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm