ಬ್ರೇಕಿಂಗ್ ನ್ಯೂಸ್
07-07-25 04:11 pm HK News Desk ದೇಶ - ವಿದೇಶ
ವಾಷಿಂಗ್ಟನ್, ಜುಲೈ 7 : ಅಮೆರಿಕದ ಟೆಕ್ಸಾಸ್ನಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಸಾವನ್ನಪ್ಪಿದವರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ. ಈ ಪೈಕಿ 28 ಮಕ್ಕಳು ಸೇರಿದ್ದು 41 ಮಂದಿ ಪ್ರವಾಹಕ್ಕೆ ಸಿಲುಕಿ ಕಾಣೆಯಾಗಿದ್ದಾರೆ. ಕಳೆದ 100 ವರ್ಷಗಳಲ್ಲೇ ಅಮೆರಿಕದ ಟೆಕ್ಸಾಸ್ ನಗರ ಎದುರಿಸಿದ ಅತ್ಯಂತ ಭೀಕರ ಪ್ರವಾಹ ಎಂದು ಹೇಳಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಹೆಚ್ಚಿನ ಬಿರುಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹಲವಾರು ಕಡೆಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು ವಿಷಪೂರಿತ ಹಾವುಗಳು ಕೂಡ ಪ್ರವಾಹದ ನೀರಿನಲ್ಲಿ ಕಂಡುಬರುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.



ಪ್ರವಾಹ ಪೀಡಿತ ಪ್ರದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ನೀಡುವ ಸಾಧ್ಯತೆಯಿದೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಡೊನಾಲ್ಡ್ ಟ್ರಂಪ್, ಇದು ನಿಜಕ್ಕೂ ಭಯಾನಕ, ದೇವರು ಜನರಿಗೆ ದುಃಖ ಭರಿಸುವ ಶಕ್ತಿ ಕೊಡಲೆಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ಹವಾಮಾನ ಮಾಹಿತಿ ಪ್ರಕಾರ, ಟೆಕ್ಸಾಸ್ ಆಸುಪಾಸಿನಲ್ಲಿ ಭಾನುವಾರ 15 ಇಂಚು (38 ಸೆಂ.ಮೀ) ಮಳೆಯಾಗಿದ್ದು ಹಠಾತ್ ಪ್ರವಾಹ ಸಂಭವಿಸಿದೆ. ಸದ್ಯ ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ವರೆಗೆ 850ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಟೆಕ್ಸಾಸ್ ಬಳಿಯಲ್ಲೇ ಹರಿಯುವ ನದಿಯಲ್ಲಿ ಪ್ರವಾಹ ಬಂದಿದ್ದರಿಂದ ನೀರು ನಗರದೊಳಕ್ಕೆ ನುಗ್ಗಿದ್ದು ವ್ಯಾಪಕ ನಾಶ ನಷ್ಟವಾಗಿದೆ.
The number of people who have died from flash flooding in Texas has risen to 82, while the risk of further life-threatening floods continues with more rain forecast. Searches continue for the dozens still missing in what officials are labelling the state's deadliest flood disaster in decades.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm