ಬ್ರೇಕಿಂಗ್ ನ್ಯೂಸ್
21-07-25 09:56 pm HK News Desk ದೇಶ - ವಿದೇಶ
ಢಾಕಾ, ಜುಲೈ 21 : ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನವು ರಾಜಧಾನಿ ಢಾಕಾದಲ್ಲಿ ಶಾಲಾ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು ದುರಂತಕ್ಕೀಡಾಗಿದ್ದು 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಸೇರಿ 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಢಾಕಾದ ಉತ್ತರ ಭಾಗದ ಮೈಲ್ ಸ್ಟೋನ್ ಸ್ಕೂಲ್ ಮತ್ತು ಕಾಲೇಜು ಕಟ್ಟಡಕ್ಕೆ ಬಾಂಗ್ಲಾದೇಶ ವಾಯುಪಡೆಯ ಚೀನಾ ನಿರ್ಮಿತ
F-7 BGI ತರಬೇತಿ ವಿಮಾನ ಡಿಕ್ಕಿಯಾಗಿದೆ. ತಾಂತ್ರಿಕ ದೋಷದಿಂದಾಗಿ ವಿಮಾನ ಕೆಳಕ್ಕೆ ಬಿದ್ದಿದೆ ಎನ್ನಲಾಗುತ್ತಿದೆ. ದುರಂತದಲ್ಲಿ 20 ಜನರ ಶವಗಳು ಪತ್ತೆಯಾಗಿದ್ದು, 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಬಾಂಗ್ಲಾ ಸರ್ಕಾರ ಸಮಗ್ರ ತನಿಖೆಗೆ ಆದೇಶಿಸಿದೆ.





ವಿಮಾನ ಬೀಳುತ್ತಿದ್ದಂತೆ ಸ್ಫೋಟಗೊಂಡು ಭಾರೀ ಹೊಗೆ ಆವರಿಸಿದೆ. ಆಂಬ್ಯುಲೆನ್ಸ್ ಲಭ್ಯವಿಲ್ಲದ ಕಾರಣ, ಸೇನಾ ಸಿಬ್ಬಂದಿ ಗಾಯಗೊಂಡ ವಿದ್ಯಾರ್ಥಿಗಳನ್ನು ರಕ್ಷಿಸಿ ರಿಕ್ಷಾ ಮತ್ತು ಇತರ ವಾಹನಗಳಲ್ಲಿ ಆಸ್ಪತ್ರೆಗೆ ಸಾಗಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬಾಂಗ್ಲಾದೇಶದ ವಾಯುಪಡೆ ವಿಮಾನ ಪತನವನ್ನು ಖಚಿತಪಡಿಸಿದೆ.
ಕಾಲೇಜಿನ ಶಿಕ್ಷಕರು ಮತ್ತು ಸಿಬ್ಬಂದಿ ಸ್ಥಳಕ್ಕೆ ಅಗ್ನಿಶಾಮಕ ದಳ ಬರುವ ಮೊದಲೇ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಮೂರು ಅಂತಸ್ತಿನ ಶಾಲಾ ಕಟ್ಟಡದ ಮುಂಭಾಗಕ್ಕೆ ವಿಮಾನವು ಡಿಕ್ಕಿಯಾಗಿದ್ದು ಹಲವಾರು ವಿದ್ಯಾರ್ಥಿಗಳು ದುರಂತದಲ್ಲಿ ಸಿಲುಕಿಕೊಂಡಿದ್ದರು. 30ಕ್ಕೂ ಹೆಚ್ಚು ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಇಲ್ಲಿ ಶಾಲೆ ಮತ್ತು ಕಾಲೇಜು ತರಗತಿಗಳಿದ್ದು ಒಟ್ಟು 2000 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಹೇಳಿಕೆ ನೀಡಿದ್ದಾರೆ.
A Bangladesh Air Force jet crashed into a college in the capital Dhaka on Monday, killing at least 19 people, according to emergency officials, in the country’s deadliest air incident in recent memory. The crash at Milestone School and College campus, in the Diabari neighborhood of northern Dhaka, injured more than 100 others, according to a spokesperson for the country’s interim leader Muhammad Yunus.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm