ಬ್ರೇಕಿಂಗ್ ನ್ಯೂಸ್
22-07-25 03:04 pm HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 22 : ದೇಶದ ಭದ್ರತೆ ಮತ್ತು ಪಕ್ಷದ ವಿಚಾರದಲ್ಲಿ ಶಶಿ ತರೂರ್ ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುರಳೀಧರನ್, ತರೂರ್ ಅವರ ಇತ್ತೀಚಿನ ಹೇಳಿಕೆಗಳು ಪಕ್ಷದ ಸಾಮೂಹಿಕ ನಿಲುವಿನಿಂದ ಅವರನ್ನು ದೂರವಿಟ್ಟಿದೆ. ಅವರು ನಮ್ಮೊಂದಿಗಿಲ್ಲ, ಹೀಗಾಗಿ ಅವರು ಕಾರ್ಯಕ್ರಮ ಬಹಿಷ್ಕರಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಸೇರಿದಂತೆ ಇತ್ತೀಚಿನ ದೇಶದ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಶಸಾಸ್ತ್ರ ಪಡೆಯನ್ನು ಬಹಿರಂಗವಾಗಿ ಬೆಂಬಲಿಸಿದ ಶಶಿ ತರೂರ್ ಬಗ್ಗೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಡುವೆ, ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಶಶಿ ತರೂರ್, ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದರು. ಕಾಂಗ್ರೆಸ್ ನಾಯಕರೊಂದಿಗೆ ತಮ್ಮ ಭಿನ್ನಾಭಿಪ್ರಾಯದ ನಡುವೆ, ಸಂಸದ ಶಶಿ ತರೂರ್, ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಕೆಲವೊಮ್ಮೆ ಇತರ ಪಕ್ಷಗಳೊಂದಿಗೆ ಸಹಕರಿಸುವುದು ಅಗತ್ಯವಾಗುತ್ತದೆ ಎಂದು ಹೇಳಿದ್ದರು.
ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಶಶಿ ತರೂರ್, ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಯಾವುದೇ ಸಮಾರಂಭಕ್ಕೂ ಕರೆಯಲ್ಲ. ತರೂರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಪಕ್ಷದ ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ ಎಂದು ಮುರಳೀಧರನ್ ಹೇಳಿದ್ದಾರೆ.
ಕೇರಳ ಸಿಎಂ ಸ್ಥಾನಕ್ಕೆ ಶಶಿ ತರೂರ್ ಟಾಪ್ ಆಯ್ಕೆ ಎಂದು ಸೂಚಿಸುವ ಸಮೀಕ್ಷೆಯೊಂದನ್ನು ತರೂರ್ ಹಂಚಿಕೊಂಡ ನಂತರ ಅಸಮಾಧಾನ ಮತ್ತಷ್ಟು ಹೆಚ್ಚಾಗಿತ್ತು. ತರೂರ್ ಯಾವ ಪಕ್ಷಕ್ಕೆ ಸೇರಿದವರು ಎಂಬುದನ್ನು ಮೊದಲು ನಿರ್ಧರಿಸಬೇಕು ಎಂದು ಮುರಳೀಧರನ್ ಟೀಕಿಸಿದ್ದಾರೆ. ಮಲಯಾಳಂ ದೈನಿಕದಲ್ಲಿ ಇತ್ತೀಚೆಗೆ ಇಂದಿರಾ ಗಾಂಧಿ ಮತ್ತು ತುರ್ತು ಪರಿಸ್ಥಿತಿ ಕುರಿತಾದ ಶಶಿ ತರೂರ್ ಲೇಖನ ಪ್ರಕಟವಾದ ನಂತರ ಅವರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.
Senior Congress leader K. Muraleedharan has made it clear that party MP Dr. Shashi Tharoor will not be invited to any Congress events in Thiruvananthapuram until he changes his stance on matters concerning national security and party positions.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm