ಬ್ರೇಕಿಂಗ್ ನ್ಯೂಸ್
16-08-25 03:34 pm HK News Desk ದೇಶ - ವಿದೇಶ
ನವದೆಹಲಿ, ಆ.16: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದು, ಆತುರದಲ್ಲಿ ಎಸ್ಐಟಿ ರಚಿಸಿದ್ದರ ಹಿಂದೆ ರಾಜ್ಯ ಸರ್ಕಾರದ್ದೇ ಷಡ್ಯಂತ್ರ ಇದೆಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಲ್ಹಾದ ಜೋಶಿ ಕುಟುಕಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ, ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಇರುವುದು ಡಿಸಿಎಂಗೆ ಗೊತ್ತಿದೆ ಅಂದಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಾಗದೇ ಹೋಯಿತೇ? ಎಂದು ಪ್ರಶ್ನಿಸಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಅನಾಮಿಕನ ಆರೋಪದ ಬಗ್ಗೆ ರಾಜ್ಯ ಸರ್ಕಾರ, ಆತುರದಲ್ಲಿ ಎಸ್ಐಟಿ ರಚಿಸುವ ಅವಶ್ಯಕತೆ ಏನಿತ್ತು? ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತನಿಖೆಗೆ ಒತ್ತಡ ಹೆಚ್ಚಿದ್ದರಿಂದ ರಾಜ್ಯ ಸರ್ಕಾರ SIT ತನಿಖೆಗೆ ಆದೇಶಿಸಿತ್ತು. ಆದರೆ, ಆತುರದಲ್ಲಿ ಇಂಥ ನಿರ್ಧಾರ ತೆಗೆದುಕೊಂಡು ಧರ್ಮಸ್ಥಳಕ್ಕೆ ಕಪ್ಪು ಮಸಿ ಬಳಿಯುವ ಯತ್ನಕ್ಕೆ ಸರ್ಕಾರವೂ ಸಾಥ್ ನೀಡಿದೆಯೇ? ಇದರಲ್ಲಿ ಸರ್ಕಾರದ್ದೇ ಷಡ್ಯಂತ್ರ ಏನಾದರೂ ಇದೆಯೇ? ಎಂದು ಜೋಷಿ ಪ್ರಶ್ನೆ ಮಾಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಧರ್ಮಸ್ಥಳ ವಿಚಾರ ಅಧಿವೇಶನದಲ್ಲಿ ಚರ್ಚೆಯಾದಾಗ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಒಳ್ಳೇ ಯೋಜನೆ, ತಂತ್ರಗಾರಿಕೆ ಹೆಣೆದು ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ. ಆದರೆ, ಯಾರು? ಏನು? ಅಂತ ಮಾತನಾಡಲು ಹೋಗುವುದಿಲ್ಲ. ತೇಜೋವಧೆ ಮೂಲಕ ನೂರಾರು ವರ್ಷಗಳ ಪರಂಪರೆ ಹಾಳು ಮಾಡಲು ಹೊರಟಿದ್ದಾರೆ ಎಂದಿದ್ದರು. ಡಿಸಿಎಂಗೆ ಗೊತ್ತಿರುವ ಈ ವಿಚಾರ ಸಿಎಂಗೆ ಗೊತ್ತಾಗಿರಲಿಲ್ಲವೇ? ಎಂದು ಜೋಶಿ ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್ ಹೇಳುವಂತೆ ಷಡ್ಯಂತ್ರ ನಡೆಯುತ್ತಿದೆ ಎಂಬ ವಿಚಾರ ಗೊತ್ತಾದ ಮೇಲೂ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ SIT ರಚಿಸಿದ್ದೇಕೆ? ಇಷ್ಟೆಲ್ಲಾ ಹೈಡ್ರಾಮಾ ಮಾಡುವ ಪ್ರಸಂಗವಾದರೂ ಏನಿತ್ತು? ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.
Union Minister for Consumer Affairs and Public Distribution Pralhad Joshi has lashed out at the Karnataka government, raising sharp questions in response to Deputy Chief Minister D.K. Shivakumar’s recent statement regarding a “conspiracy” against Dharmasthala.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm