ಬ್ರೇಕಿಂಗ್ ನ್ಯೂಸ್
19-08-25 06:41 pm HK News Desk ದೇಶ - ವಿದೇಶ
ನವದೆಹಲಿ, ಆ.19: ಆರೆಸ್ಸೆಸ್ ಹಿನ್ನೆಲೆಯ ತಮಿಳುನಾಡು ಮೂಲದ ಸಿ.ಪಿ ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಒಕ್ಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎರಡು ದಿನಗಳ ಬಳಿಕ ಅಳೆದೂ ತೂಗಿ ತಮ್ಮ ಅಭ್ಯರ್ಥಿಯನ್ನು ಘೋಷಿಸಿರುವ ಇಂಡಿಯಾ ಬಣವು ಸುಪ್ರೀಂಕೋರ್ಟ್ ಮಾಜಿ ನ್ಯಾಯಾಧೀಶ, ಆಂಧ್ರಪ್ರದೇಶದ ಬಿ.ಸುದರ್ಶನ್ ರೆಡ್ಡಿಯವರನ್ನು ಅಭ್ಯರ್ಥಿಯನ್ನಾಗಿಸಿದೆ.
ಜಗದೀಪ್ ಧನಕರ್ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ದಕ್ಷಿಣ ಭಾರತದಿಂದ ಆರೆಸ್ಸೆಸ್ ಹಿನ್ನೆಲೆಯ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮೂಲತಃ ತಮಿಳುನಾಡಿನವರಾದ ಸಿ.ಪಿ ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಭಾನುವಾರ ಘೋಷಣೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಪ್ರತಿತಂತ್ರ ಹೂಡಿರುವ ಇಂಡಿಯಾ ಬಣವು ಮಂಗಳವಾರ ದಕ್ಷಿಣ ಭಾರತದಿಂದಲೇ ಅಭ್ಯರ್ಥಿಯನ್ನು ಹುಡುಕಿದ್ದು, ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಬಿ.ಸುದರ್ಶನ್ ರೆಡ್ಡಿ ಅವರನ್ನು ಅಭ್ಯರ್ಥಿ ಮಾಡಿದೆ. ತನ್ಮೂಲಕ ಎನ್‌ಡಿಎ ಬಣದ ತಮಿಳುನಾಡು ಅಸ್ತ್ರಕ್ಕೆ ಆಂಧ್ರಪ್ರದೇಶದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿರುವ ಚಂದ್ರಬಾಬು ನಾಯ್ಡು ಅವರ ತೆಲುಗುದೇಶಂ ಪಾರ್ಟಿಯನ್ನು ಇಕ್ಕಟ್ಟಿಗೆ ಸಿಲುಕಿಸುವ ಭರ್ಜರಿ ಪ್ರತಿತಂತ್ರವನ್ನೇ ಕಾಂಗ್ರೆಸ್ ಹೆಣೆದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ನಿವಾಸದಲ್ಲಿ ನಡೆದ ಸಭೆಯ ನಂತರ ಈ ನಿರ್ಧಾರ ಪ್ರಕಟಿಸಲಾಗಿದೆ.
ಆಂಧ್ರ ಪ್ರದೇಶ ಹೈಕೋರ್ಟ್ ನ್ಯಾಯಾಧೀಶರಾಗಿ, ಗೌಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಮತ್ತು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿರುವ ಸುದರ್ಶನ್ ರೆಡ್ಡಿಯವರು ಸುದೀರ್ಘ ಕಾಲದ ಕಾನೂನು ವೃತ್ತಿಜೀವನವನ್ನು ಹೊಂದಿದ್ದಾರೆ. ಇವರು ಆಂಧ್ರಪ್ರದೇಶದ ರಂಗಾರೆಡ್ಡಿ ಜಿಲ್ಲೆಯವರಾಗಿದ್ದು, 1995ರಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. 2005ರಲ್ಲಿ ಗೌಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿದ್ದು, 2007ರಿಂದ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ, 2011ರ ಜುಲೈನಲ್ಲಿ ನಿವೃತ್ತರಾಗಿದ್ದರು.
ಟಿಡಿಪಿಗೆ ಇಕ್ಕಟ್ಟಿನ ಸ್ಥಿತಿ
ಸುದರ್ಶನ್ ರೆಡ್ಡಿಯವರನ್ನು ಇಂಡಿಯಾ ಬಣವು ಉಪರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಯಾಗಿ ಮಾಡಿರುವುದು ತೆಲುಗುದೇಶಂ ಪಾರ್ಟಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಆಂಧ್ರಪ್ರದೇಶದ ಅಭ್ಯರ್ಥಿಯನ್ನು ಬೆಂಬಲಿಸಬೇಕೇ ಅಥವಾ ಮೈತ್ರಿ ಒಪ್ಪಂದಕ್ಕೆ ಅನುಗುಣವಾಗಿ ತಮಿಳುನಾಡಿನ ಅಭ್ಯರ್ಥಿಯನ್ನು ಬೆಂಬಲಿಸಬೇಕೇ ಎಂಬ ವಿಷಯ ಆ ಪಕ್ಷವನ್ನು ಕಾಡಲಿದೆ. ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸಿದರೆ ಆಂಧ್ರಪ್ರದೇಶದಲ್ಲಿ ತಮ್ಮ ಎದುರಾಳಿಗಳಿಂದ ಟೀಕೆ ಎದುರಿಸುವ ಆತಂಕ ಒಂದೆಡೆಯಾದರೆ, ಮೈತ್ರಿ ಧರ್ಮ ಪಾಲನೆಯ ವಿಷಯದಲ್ಲೂ ಸಮಸ್ಯೆ ಎದುರಿಸಬೇಕಾದ ಸ್ಥಿತಿಗೆ ಬರಲಿದೆ. ಈ ಮಧ್ಯೆ ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಮತ್ತು ಕೆ.ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಪಕ್ಷಗಳು ಆಂಧ್ರಪ್ರದೇಶದ ಅಭ್ಯರ್ಥಿಯನ್ನು ಬೆಂಬಲಿಸಲು ಇಂಡಿಯಾ ಒಕ್ಕೂಟದೊಂದಿಗಿನ ತಮ್ಮ ಅಸಮಾಧಾನ ಬದಿಗಿಡುವ ಸಾಧ್ಯತೆ ನಿಚ್ಚಳವಾಗಿದೆ.
ಚುನಾವಣೆ ಗೆಲ್ಲಲು ನಂಬರ್ ಗೇಮ್
ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಮತ ಚಲಾಯಿಸಲಿದ್ದಾರೆ. ಪ್ರಸಕ್ತ ಅಂಕಿ ಅಂಶಗಳ ಪ್ರಕಾರ 782 ಸದಸ್ಯರಿಗೆ ಮತದಾನದ ಹಕ್ಕು ಇದೆ. ಅಂದರೆ 392 ಮತಗಳನ್ನು ಪಡೆದವರು ವಿಜೇತರಾಗಲಿದ್ದಾರೆ. ಲೋಕಸಭೆಯಲ್ಲಿ ಎನ್‌ಡಿಎಗೆ 293 ಸದಸ್ಯರಿದ್ದಾರೆ. ರಾಜ್ಯಸಭೆಯಲ್ಲಿ 133 ಸದಸ್ಯ ಬಲವಿದೆ. ಈ ಅಂಕಿ ಅಂಶಗಳ ಪ್ರಕಾರ ಎನ್‌ಡಿಎ ಒಕ್ಕೂಟದ ಸಿ.ಪಿ ರಾಧಾಕೃಷ್ಣನ್ ಅವರ ಆಯ್ಕೆ ನಿಚ್ಚಳವಾಗಿದೆ. ಆದರೆ ಎನ್‌ಡಿಎ ಒಕ್ಕೂಟದ ಕೆಲವು ಸದಸ್ಯರು ಪ್ರತಿಪಕ್ಷಗಳ ಅಭ್ಯರ್ಥಿಗೆ ಮತ ಹಾಕಿದರೆ ಫಲಿತಾಂಶ ಉಲ್ಟಾ ಆಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
Just two days after the NDA announced Tamil Nadu-origin C.P. Radhakrishnan, a former BJP leader with an RSS background, as its Vice Presidential candidate, the INDIA bloc has fielded former Supreme Court judge and Andhra Pradesh native B. Sudarshan Reddy as their counter-nominee.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm