ಬ್ರೇಕಿಂಗ್ ನ್ಯೂಸ್
22-08-25 10:00 pm HK News Desk ದೇಶ - ವಿದೇಶ
ನವದೆಹಲಿ, ಆ.22 : ದೇಶದಲ್ಲಿ ಯುವಜನತೆಯನ್ನು ಅಡ್ಡದಾರಿಗೆ ಎಳೆಯುತ್ತಿರುವ ಬೆಟ್ಟಿಂಗ್, ಆನ್ಲೈನ್ ಗೇಮ್ಸ್ ಸೇರಿದಂತೆ ಹಣಕಾಸು ಆಧಾರಿತ ಎಲ್ಲ ಆನ್ಲೈನ್ ಗೇಮಿಂಗ್ಸ್ ನಿಷೇಧಿಸುವುದಕ್ಕೆ ಹೊರ ತಂದಿರುವ ’ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ- 2025ʼನ್ನು ಸಂಸತ್ತು ಅಂಗೀಕರಿಸಿದೆ. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಯುವ ಸಮುದಾಯದ ಹಿತ ಕಾಪಾಡುವಲ್ಲಿ ದಿಟ್ಟ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಗೇಮಿಂಗ್ ನಿಯಂತ್ರಣ ಮಸೂದೆ ಅಂಗೀಕಾರವಾದ ಹಿನ್ನೆಲೆ ಪ್ರತಿಕ್ರಿಯಿಸಿರುವ ಸಂಸದರು, ಆನ್ ಲೈನ್ ಮನಿ ಗೇಮಿಂಗ್ ಜಾಲದೊಳಗೆ ಸಿಲುಕಿಕೊಂಡ ಸಾವಿರಾರು ಅಮಾಯಕರ ಬದುಕು ಬೀದಿಗೆ ಬಂದಿದೆ. ಪ್ರತಿ ನಿತ್ಯವೂ ಜನರು ಆನ್ಲೈನ್ ಗೇಮಿಂಗ್ ದುಶ್ಚಟಕ್ಕೆ ಬಲಿಯಾಗಿ ಹಣದ ಜತೆಗೆ ನೆಮ್ಮದಿಯನ್ನೂ ಕಳೆದುಕೊಂಡು ಒದ್ದಾಡುವ ದಯನೀಯ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ, ಈ ಆನ್ಲೈನ್ ಜೂಜಾಟ, ಗೇಮಿಂಗ್ಸ್ ಗಂಭೀರತೆಯನ್ನು ಅರಿತು ಅವುಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಕ್ಕೆ ಕೇಂದ್ರ ಸರ್ಕಾರವು ಪ್ರತ್ಯೇಕ ಕಾಯ್ದೆಯನ್ನು ಜಾರಿಗೆ ತಂದಿರುವುದು ಅತ್ಯಂತ ತುರ್ತು ಅಗತ್ಯವಾಗಿದೆ. ಯುವ ಸಮುದಾಯವನ್ನು ಈ ರೀತಿಯ ಮಾಯಾಜಾಲದ ದುಷ್ಚಟಗಳಿಂದ ಪಾರು ಮಾಡುವುದಕ್ಕೆ ಮಸೂದೆ ತಂದಿರುವುದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಜನತೆ ಪರವಾಗಿ ವಿಶೇಷ ಧನ್ಯವಾದ ಸಲ್ಲಿಸುವುದಾಗಿ ಕ್ಯಾ. ಚೌಟ ಹೇಳಿದ್ದಾರೆ.
ಈ ಮಸೂದೆ ಪ್ರಕಾರ, ಆನ್ಲೈನ್ ಗೇಮ್ಗೆ ಸಂಬಂಧಿಸಿದ ಯಾವುದೇ ಹಣ ವರ್ಗಾವಣೆ ಮಾಡುವುದಕ್ಕೂ ಇನ್ನು ಬ್ಯಾಂಕ್ಗಳಿಗೆ ಅವಕಾಶವಿರುವುದಿಲ್ಲ. ಜತೆಗೆ, ಗೇಮಿಂಗ್ ಜಾಹೀರಾತು, ಪ್ರಮೋಷನ್ಸ್ಗಳಿಗೂ ಕಡಿವಾಣ ಹಾಕಲಾಗಿದೆ. ಈ ಹಿನ್ನಲೆಯಲ್ಲಿ ಇನ್ನು ಮುಂದೆ ಯಾವುದೇ ರೀತಿ ಹಣ ವರ್ಗಾಯಿಸಿ ಆನ್ಲೈನ್ನಲ್ಲಿ ಆಟವಾಡಿ ಎಲ್ಲವನ್ನೂ ಕಳೆದುಕೊಳ್ಳುವುದಕ್ಕೂ ಅವಕಾಶ ನೀಡದಂತೆ ಅತ್ಯಂತ ಕಠಿಣ ನಿಯಮಗಳನ್ನು ಈ ಮಸೂದೆಯಲ್ಲಿ ರೂಪಿಸಲಾಗಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.
ಇನ್ನೊಂದೆಡೆ ಈ ಮಸೂದೆಯಲ್ಲಿ ಇ-ಸ್ಪೋರ್ಟ್ಸ್ ಹಾಗೂ ಸೋಷಿಯಲ್ ಗೇಮ್ಸ್ಗಳನ್ನು ಉತ್ತೇಜಿಸುವುದಕ್ಕೂ ನಿರ್ಧರಿಸಲಾಗಿದೆ. ಈ ಮಸೂದೆ ಭಾರತದ ಡಿಜಿಟಲ್ ಪ್ರಯಾಣದಲ್ಲಿ ಒಂದು ನಿರ್ಣಾಯಕ ಹೆಜ್ಜೆ ಗುರುತಾಗಿದ್ದು, ಆ ಮೂಲಕ ನಮ್ಮ ದೇಶ ಗೇಮಿಂಗ್ನ ಸಕಾರಾತ್ಮಕ ಶಕ್ತಿಯನ್ನು ಅನಾವರಣಗೊಳಿಸುವ ವೇದಿಕೆಯನ್ನೂ ಕಲ್ಪಿಸಲಿದೆ. ಭಾರತವನ್ನು ಜಾಗತಿಕವಾಗಿ ಸೃಜನಶೀಲ ಹಾಗೂ ಹೊಸ ಗೇಮಿಂಗ್ ಕ್ಷೇತ್ರದತ್ತ ಅಭಿವೃದ್ಧಿಪಡಿಸುವ ಗುರಿಯನ್ನೂ ಹೊಂದಿದೆ. ನಿರ್ದಿಷ್ಟ ನಿಯಮ ಮತ್ತು ಮಾನದಂಡಗಳ ಮೂಲಕ ಕೌಶಲ್ಯ ಆಧಾರಿತ ಕ್ರೀಡೆಗಳನ್ನು , ವೃತ್ತಿಪರ ಟೂರ್ನಮೆಂಟ್ ಗಳು, ಸಂಘಟಿತ ಸ್ಪರ್ಧೆಗಳು ಮತ್ತು ಗೇಮಿಂಗ್ ಗಳನ್ನು ಕ್ರೀಡೆ ಎಂದು ಪರಿಗಣಿಸುವ ಮೂಲಕ ಮಹತ್ತರ ಹೆಜ್ಜೆ ಇಟ್ಟಿದೆ. ಇದರೊಂದಿಗೆ ರಾಷ್ಟ್ರೀಯ ಆನ್ಲೈನ್ ಗೇಮಿಂಗ್ ಪ್ರಾಧಿಕಾರಕ್ಕೆ ಇದರ ನಿರ್ವಹಣೆ ಹೊಣೆಯನ್ನು ನೀಡಲಿದೆ. ಈ ಮಸೂದೆ ಮೂಲಕ ಆನ್ ಲೈನ್ ಗೇಮಿಂಗ್ ನಲ್ಲಿ ಹೊಸ ಶಕೆ ಮೂಡಲಿದ್ದು, ಜಾಗತಿಕ ಟೂರ್ನಿಗಳು ಮತ್ತು ಗೇಮರ್ ಗಳಿಗೆ ಹೆಚ್ಚಿನ ವೃತ್ತಿಪರ ಅವಕಾಶ ಸೃಷ್ಟಿಸಲಿದೆ ಎಂದು ಕ್ಯಾ. ಚೌಟ ಅವರು ಅಭಿಪ್ರಾಯಪಟ್ಟರು.
The Indian Parliament has passed the Online Gaming Promotion and Regulation Bill, 2025, aimed at banning betting and money-based online gaming activities across the country. Hailing the move, Dakshina Kannada MP Captain Brijesh Chowta called it a bold and timely step by the Modi government to protect the nation’s youth from the dangers of online gambling.
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm