ಬ್ರೇಕಿಂಗ್ ನ್ಯೂಸ್
10-08-20 03:08 pm Headline Karnataka News Network ದೇಶ - ವಿದೇಶ
ಕೋಲ್ಕತ್ತಾ , ಆಗಸ್ಟ್ 10: ಕೊರೊನಾದಿಂದ ಸಾವನ್ನಪ್ಪಿದವರ ದೇಹವನ್ನು ನೋಡಲು ಖಾಸಗಿ ಆಸ್ಪತ್ರೆ 51 ಸಾವಿರ ರೂ. ನೀಡಲುವಂತೆ ಬೇಡಿಕೆ ಇಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಕೊರೊನಾ ಸೋಂಕಿನಿಂದಾಗಿ ನಮ್ಮ ತಂದೆ ಹರಿ ಗುಪ್ತಾ ಶನಿವಾರ ಮಧ್ಯರಾತ್ರಿ ಸಾವನ್ನಪ್ಪಿದ್ದು, ಈ ಕುರಿತು ಖಾಸಗಿ ಆಸ್ಪತ್ರೆಯವರು ಕುಟುಂಬಸ್ಥರಿಗೆ ಯಾವುದೇ ಮಾಹಿತಿ ನೀಡಿಲ್ಲ. ಅಲ್ಲದೆ ಹಣದ ಬೇಡಿಕೆ ಇಟ್ಟಿದ್ದಾರೆ ಎಂದು ಸಾಗರ್ ಗುಪ್ತಾ ತಿಳಿಸಿದ್ದಾರೆ.
ಭಾನುವಾರ ಮಧ್ಯಾಹ್ನ ಆಸ್ಪತ್ರೆಯವರು ಕರೆ ಮಾಡಿ ಶನಿವಾರ ಮಧ್ಯರಾತ್ರಿ ನಮ್ಮ ತಮದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ರಾತ್ರಿಯೇ ಏಕೆ ನಮಗೆ ಹೇಳಲಿಲ್ಲ ಎಂದು ಆಸ್ಪತ್ರೆಯವನ್ನು ಪ್ರಶ್ನಿಸಿದರೆ, ಸಂಪರ್ಕದ ಮಾಹಿತಿ ಇರಲಿಲ್ಲ ಎಂದು ಹೇಳಿದರು ಎಂದು ಸಾಗರ್ ಆರೋಪಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಸ್ಪತ್ರೆಗೆ ತೆರಳಿದ್ದು, ಆಗ ದೇಹವನ್ನು ಅಂತ್ಯಸಂಸ್ಕಾರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ನಂತರ ಕುಟುಂಬಸ್ಥರು ಶಿಬ್ಪುರ್ ಸ್ಮಶಾಣಕ್ಕೆ ತೆರಳಿದ್ದು, ಈ ವೇಳೆ ಸಿಬ್ಬಂದಿ ದೇಹವನ್ನು ನೋಡಲು 51 ಸಾವಿರ ರೂ. ಪಾವತಿಸುವಂತೆ ತಿಳಿಸಿದರು. ನಂತರ ಕುಟುಂಬಸ್ಥರು ಮಾತನಾಡಿ ಈ ಹಣವನ್ನು 31 ಸಾವಿರಕ್ಕೆ ಇಳಿಸಿದ್ದಾರೆ. ಆದರೆ ಈ ಹಣವನ್ನು ಕುಟುಂಬಸ್ಥರಿಗೆ ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಪೊಲೀಸ್ ಅಧಿಕಾರಿಯೊಬ್ಬರು ಸ್ಥಳಕ್ಕಾಗಮಿಸಿದ್ದು, ಈ ವೇಳೆ ಪೊಲೀಸರು ಸಹ ಮನವಿ ಮಾಡಿಕೊಂಡಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಇದಾವುದನ್ನೂ ಕೇಳದೆ ಮೇಲಾಧಿಕಾರಿಗಳನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ. ಈ ವೇಳೆ ಕುಟುಂಬಸ್ಥರು ಘಟನೆಯನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಇದನ್ನು ಕಂಡ ಆಸ್ಪತ್ರೆ ಸಿಬ್ಬಂದಿ ಕುಟುಂಬಸ್ಥರ ಮೊಬೈಲ್ ಕಸಿದುಕೊಂಡಿದ್ದಾರೆ.
ಅಂತಿಮವಾಗಿ ಕುಟುಂಬಸ್ಥರಿಗೆ ಮೃತ ದೇಹವನ್ನು ನೋಡಲು ಬಿಡದೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಈಗಲೂ ಆಸ್ಪತ್ರೆ ಸಿಬ್ಬಂದಿ ಸುಳ್ಳು ಹೇಳಿದ್ದು, ಯಾವುದೇ ಕುಟುಂಬ ಸದಸ್ಯರು ಸಂಪರ್ಕಕ್ಕೆ ಬಾರದ ಕಾರಣ ನಾವೇ ಅಂತ್ಯಸಂಸ್ಕಾರ ಮಾಡಿದ್ದೇವೆ ಎಂದು ವಾದಿಸಿದ್ದಾರೆ. ಇದೀಗ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಲು ಯೋಚಿಸಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm