ಬ್ರೇಕಿಂಗ್ ನ್ಯೂಸ್
30-08-25 06:44 pm HK News Desk ದೇಶ - ವಿದೇಶ
ನವದೆಹಲಿ, ಆ.30 : ಅಸ್ಸಾಂನಲ್ಲಿ ಅಕ್ರಮ ವಲಸಿಗರನ್ನು ಹೊರಹಾಕುವ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸಿರುವ ಜಮಾತ್ ಮುಖ್ಯಸ್ಥ ಅರ್ಷದ್ ಮದನಿ, ಹಿಮಂತ ಬಿಸ್ವ ಶರ್ಮಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದೆ ಎಂದು ಹೇಳಿರುವುದು ಬಿರುಸಿನ ಚರ್ಚೆಗೆ ಕಾರಣವಾಗಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಜಮಾತ್ ಉಲೇಮಾ -ಇ-ಹಿಂದ್ (ಎ) ಸಂಘಟನೆಯ ಮುಖ್ಯಸ್ಥ ಅರ್ಷದ್ ಮದನಿ, ಹಿಮಂತ ಬಿಸ್ವಾ ಶರ್ಮಗೆ ಆರಂಭದಲ್ಲಿ ಕಾಂಗ್ರೆಸ್ ಟಿಕೆಟ್ ಕೊಡಬೇಡಿ ಎಂದು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದೆ. ಹಿಮಂತ್ ಶರ್ಮ ಆರೆಸ್ಸೆಸ್ ಮನಸ್ಥಿತಿಯ ವ್ಯಕ್ತಿ. ಆತನಿಗೆ ಟಿಕೆಟ್ ಕೊಡಬೇಡಿ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಸಿದ್ದೆ. ನೋಡಿ ಈಗ ಆ ಮನುಷ್ಯ ಅಸ್ಸಾಂನಲ್ಲಿ ಬೆಂಕಿ ಹಚ್ಚುತ್ತಿದ್ದಾನೆ ಎಂದು ಹೇಳಿದ್ದಾರೆ.
ಜಮಾತ್ ಮುಖ್ಯಸ್ಥರ ಈ ಹೇಳಿಕೆಗೆ ಬಿಜೆಪಿ ಮುಖಂಡರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಕೂಡ ಕಟು ಪ್ರತಿಕ್ರಿಯೆ ನೀಡಿದ್ದು, ಮದನಿ ನನಗೆ ಬೆದರಿಕೆ ಹಾಕಿದ್ದಾರೆ, ರಾಹುಲ್ ಗಾಂಧಿ ಕೂಡ ಅನೇಕ ಸಲ ಇದೇ ಎಚ್ಚರಿಕೆ ನೀಡಿದ್ದಾರೆ. ನೀವು ಎಷ್ಟು ಬೆದರಿಕೆ ಹಾಕುತ್ತಿರೋ ನಾವು ಅಷ್ಟೇ ಪ್ರಬಲವಾಗಿ ಕೆಲಸ ಮಾಡುತ್ತೇವೆ. ನಿಮ್ಮ ಬೆದರಿಕೆಗಳಿಗೆ ಅಸ್ಸಾಂ ಜನ ಜಗ್ಗುವುದಿಲ್ಲ. ಅಸ್ಸಾಂನಿಂದ ಅಕ್ರಮ ವಲಸಿಗರನ್ನು ಹೊಡೆದೋಡಿಸಿ, ಇಲ್ಲಿಯ ಮೂಲ ನಿವಾಸಿಗಳ ಹಕ್ಕನ್ನು ರಕ್ಷಿಸುತ್ತೇವೆ. ಮದನಿ ಮತ್ತು ರಾಹುಲ್ ಗಾಂಧಿ ಅಸ್ಸಾಂ ಜನರಿಗಾಗಿ ಹೋರಾಡಲಿ. ಇಲ್ಲಿಯ ಜನ ಅವರನ್ನು ಸೋಲಿಸುತ್ತಾರೆ. ನನಗೆ ಬೆದರಿಕೆ ಹಾಕುವವರು ಅರ್ಷದ್ ಮದನಿಯೇ ಆಗಿರಲಿ, ಮೊಹಮದ್ ಮದನಿಯೇ ಆಗಿರಲಿ, ನಾನು ಯಾರನ್ನೂ ಲೆಕ್ಕಿಸುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಅರ್ಷದ್ ಮದನಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ವಿಡಿಯೋ ಶೇರ್ ಮಾಡಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಅಮಿತ್ ಮಾಳವೀಯ, ಕಾಂಗ್ರೆಸ್ ನಲ್ಲಿ ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಕೊಡಬಾರದು ಎಂದು ನಿರ್ಧರಿಸುವುದು ಮೌಲ್ವಿಗಳೇ ಎಂದು ಪ್ರಶ್ನಿಸಿದ್ದಾರೆ.
ಹಿಮಂತ ಬಿಸ್ವ ಶರ್ಮ ಕಾಂಗ್ರೆಸ್ ಪಕ್ಷದಿಂದ ಮೊದಲನೇ ಸಲ 2001ರಲ್ಲಿ ಜಲೂಕ್ ಬಾರಿ ಕ್ಷೇತ್ರದಿಂದ ಗೆದ್ದು ಬಂದಿದ್ದು, 2006 ಮತ್ತು 2011ರಲ್ಲಿ ಅದೇ ಕ್ಷೇತ್ರದಿಂದ ಮತ್ತೆ ಗೆದ್ದಿದ್ದರು. ಆ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಪ್ರಮುಖ ಖಾತೆಗಳಾದ ಕೃಷಿ, ನಗರ ಯೋಜನೆ, ನಗರಾಭಿವೃದ್ಧಿ, ಹಣಕಾಸು, ಅರೋಗ್ಯ, ಶಿಕ್ಷಣ ಸಚಿವರಾಗಿದ್ದರು. ಆದರೆ ಆಗಿನ ಮುಖ್ಯಮಂತ್ರಿ ತರುಣ್ ಗೊಗೋಯ್ ಜೊತೆಗಿನ ಭಿನ್ನಾಭಿಪ್ರಾಯಗಳಿಂದಾಗಿ 2014ರಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸಿ 2015ರಲ್ಲಿ ಬಿಜೆಪಿ ಸೇರ್ಪಡೆಯಾದರು.
2016ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ಬಿಜೆಪಿಯ ಸರ್ಬಾನಂದ ಸೋನಾವಾಲ್ ಸರ್ಕಾರದಲ್ಲಿ ಸಚಿವರಾದರು. 2021ರ ಚುನಾವಣೆ ಬಳಿಕ ಅಸ್ಸಾಂ ಮುಖ್ಯಮಂತ್ರಿ ಗಾದಿ ಏರಿದರು. ಮುಖ್ಯಮಂತ್ರಿ ಆದ ಬಳಿಕ ಅಸ್ಸಾಂನಲ್ಲಿ ಅಕ್ರಮ ವಲಸಿಗರನ್ನು ಹೊರ ಹಾಕುವ ಕಾರ್ಯದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಮತ್ತು ಮುಸ್ಲಿಂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.
A political storm has erupted after Jamiat Ulama-e-Hind (A) chief Arshad Madani revealed that he had written a letter to Sonia Gandhi years ago, urging her not to give a Congress ticket to Himanta Biswa Sharma, citing his ideological leanings.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm