ಬ್ರೇಕಿಂಗ್ ನ್ಯೂಸ್
08-09-25 02:02 pm HK News Desk ದೇಶ - ವಿದೇಶ
ನವದೆಹಲಿ, ಸೆ.7 : ದೃಶ್ಯಂ ಇತ್ಯಾದಿ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ಮಲಯಾಳಂ ಚಿತ್ರರಂಗದ ಖ್ಯಾತ ನಟಿ ನವ್ಯಾ ನಾಯರ್ ಮಲ್ಲಿಗೆ ಮುಡಿದುಕೊಂಡು ವಿಮಾನದಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಿದ್ದಕ್ಕೆ 1.14 ಲಕ್ಷ ರೂ. ದಂಡ ತೆರಬೇಕಾಗಿ ಬಂದಿದೆ. ಕೇವಲ 15 ಸೆಂ.ಮೀ ಉದ್ದದ ಮಲ್ಲಿಗೆ ಹೂವಿನ ಹಾರ ಮುಡಿದಿದ್ದ ನವ್ಯಾ ನಾಯರ್ ಅವರನ್ನು ಮೆಲ್ಬೋರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದ ಅಲ್ಲಿನ ಅಧಿಕಾರಿಗಳು 1.14 ಲಕ್ಷ ರೂ. (1,980 ಆಸ್ಟ್ರೇಲಿಯನ್ ಡಾಲರ್) ದಂಡ ಹಾಕಿದ್ದಾರೆ.
ವಿಕ್ಟೋರಿಯಾದಲ್ಲಿ ಮಲಯಾಳಿ ಅಸೋಸಿಯೇಷನ್ ಸಂಸ್ಥೆಯು ಆಯೋಜಿಸಿದ್ದ ಓಣಂ ಆಚರಣೆಯಲ್ಲಿ ಭಾಗವಹಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ. ಆ ಕಾರ್ಯಕ್ರಮಕ್ಕಾಗಿ ನಾನು ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಹೂವುಗಳನ್ನು ಧರಿಸಿದ್ದೆ ಎಂದು ನವ್ಯಾ ತಮಾಷೆ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
![]()

ಆಸ್ಟ್ರೇಲಿಯಾ ಪ್ರವಾಸಕ್ಕೆ ಹೊರಡುವ ಮೊದಲು ತಂದೆ ಉಡುಗೊರೆಯಾಗಿ ನೀಡಿದ ಮಲ್ಲಿಗೆ ಹಾರವನ್ನು ಧರಿಸಿದ್ದೆ. ಆ ದೇಶದ ನಿಯಮಗಳ ಅರಿವಿಲ್ಲದೆ ಹೀಗಾಗಿದೆ. ವಿಮಾನ ನಿಲ್ದಾಣದಲ್ಲಿ ಮಲ್ಲಿಗೆ ಹೂ ತೆಗೆದುಕೊಂಡು ಹೋಗಬಾರದು ಎಂದು ಯಾರೂ ಹೇಳಿರಲಿಲ್ಲ. ಇದು ದಂಡ ತೆರುವುದಕ್ಕೆ ಕಾರಣವಾಯಿತು ಎಂದು ತಿಳಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಆ ದೇಶದ ಸ್ಥಳೀಯ ಸಸ್ಯ ಮತ್ತು ಪ್ರಾಣಿಗಳನ್ನು ರಕ್ಷಿಸಲು ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಅಲ್ಲಿನ ನಿಯಮಗಳ ಪ್ರಕಾರ ವಿದೇಶಿ ಸಸ್ಯಗಳು, ಹೂವು ಅಥವಾ ಪ್ರಾಣಿಗಳನ್ನು ಆ ದೇಶಕ್ಕೆ ಕೊಂಡೊಯ್ಯುವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಇದು ಅಲ್ಲಿನ ಸ್ಥಳೀಯ ಪ್ರಭೇದಗಳಿಗೆ ಅಪಾಯ ಉಂಟುಮಾಡುತ್ತದೆ ಎಂದು ಆಸ್ಟ್ರೇಲಿಯಾ ಸರ್ಕಾರದ ಕೃಷಿ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಈ ನಿಯಮ ತಂದಿದೆ. ಅಲ್ಲಿನ ಸಚಿವಾಲಯದ ಪ್ರಕಾರ, ಯಾವುದೇ ವಿದೇಶಿ ಸಸ್ಯ ಅಥವಾ ಪ್ರಾಣಿಗಳನ್ನು ಸರಿಯಾದ ತಪಾಸಣೆಯ ನಂತರ ಮಾತ್ರ ಆ ದೇಶಕ್ಕೆ ತರಬೇಕು. ನವ್ಯಾ ನಾಯರ್ ಈ ನಿಯಮ ಪಾಲಿಸಿಲ್ಲವಾದ್ದರಿಂದ ಆಕೆ 28 ದಿನಗಳಲ್ಲಿ ದಂಡ ಪಾವತಿಸುವಂತೆ ಸೂಚಿಸಲಾಗಿದೆ.
Malayalam actor Navya Nair was reportedly fined AUD 1,980 (around ₹1.14 lakh) at Melbourne International Airport after officials found her carrying a jasmine gajra.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 08:56 pm
HK News Staffer
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am