ಬ್ರೇಕಿಂಗ್ ನ್ಯೂಸ್
09-09-25 11:09 pm HK News Desk ದೇಶ - ವಿದೇಶ
ನವದೆಹಲಿ, ಸೆ.9 : ನೇಪಾಳದಲ್ಲಿ ಹಿಂಸಾಚಾರ ಮುಂದುವರಿದಿದ್ದು ಜನರು ಸಂಸತ್ತು, ಪ್ರಧಾನಿ ನಿವಾಸಕ್ಕೆ ನುಗ್ಗಿದ್ದಾರೆ. ಇದರ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ ಶರ್ಮಾ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ.
ನೇಪಾಳದ ಪಾರ್ಲಿಮೆಂಟ್, ಅಧ್ಯಕ್ಷರ ನಿವಾಸ, ಪ್ರಧಾನಿ ಬಂಗಲೆ, ವಿವಿಧ ರಾಜಕೀಯ ನಾಯಕರ ಮನೆಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ. ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೂ ಬೆಂಕಿ ಹಚ್ಚಲಾಗಿದ್ದು, ಈ ವೇಳೆ ಮನೆಯ ಒಳಗಿದ್ದ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಜೀವಂತ ಸುಟ್ಟು ಹೋಗಿದ್ದಾರೆ. ಬೆಂಕಿಯಿಂದ ಸುಟ್ಟು ಹೋಗಿದ್ದ ರಾಜಲಕ್ಷ್ಮಿ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಷ್ಟರಲ್ಲಿಯೇ ಅವರು ಸಾವನ್ನಪ್ಪಿದ್ದರು.

![]()

![]()

)

ಹಿಂಸಾಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೇಪಾಳದ ಜನರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚಾಗಿದೆ. ಪ್ರತಿಭಟನಾಕಾರರು ಭಯೋತ್ಪಾದಕರಂತೆ ವರ್ತಿಸುತ್ತಿದ್ದು ಸೇನೆ, ಪೊಲೀಸರನ್ನು ಲೆಕ್ಕಿಸದೆ ಹಿಂಸಾಚಾರಕ್ಕೆ ಇಳಿದಿದ್ದಾರೆ. ನೇಪಾಳದ ಬೆಳವಣಿಗೆ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಳವಳ, ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಸಚಿವನನ್ನು ಹೊಡೆದು ಅಟ್ಟಾಡಿಸಿದ ಜನರು !
ಪ್ರಧಾನಿ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರದ ವಿತ್ತ ಸಚಿವ ಬಿಷ್ಣು ಪೌಡೆಲ್ ಅವರನ್ನು ಪ್ರತಿಭಟನಾಕಾರರು ಬೀದಿಯಲ್ಲಿ ಅಟ್ಟಾಡಿಸಿ ಹೊಡೆದಿದ್ದಾರೆ. ಇದರ ವಿಡಿಯೋವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಸಚಿವ ಬಿಷ್ಣು ಪೌಡೆಲ್ ರನ್ನು ಸುಮಾರು 25ಕ್ಕೂ ಅಧಿಕ ಮಂದಿ ಅಟ್ಟಾಡಿಸಿ ಹೊಡೆದಿದ್ದಾರೆ. ಪೌಡೆಲ್ ಜೀವ ಉಳಿಸಿಕೊಳ್ಳಲು ಓಡುತ್ತಿದ್ದು, ಈ ವೇಳೆ ಎರಡು ಡಜನ್ಗೂ ಹೆಚ್ಚು ಜನರು ಅವರನ್ನು ಬೆನ್ನಟ್ಟುತ್ತಿರುವುದು ಕಂಡುಬಂದಿದೆ.
Nepal Prime Minister K.P. Sharma Oli on Tuesday (September 9, 2025) resigned amid continuing anti-corruption protests across the country. Protests led by Nepal’s Gen Z continued for a second day on Tuesday (September 9, 2025), despite local administrations in three districts of the Kathmandu Valley imposing a curfew from the morning.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm