ಬ್ರೇಕಿಂಗ್ ನ್ಯೂಸ್
15-09-25 04:57 pm HK News Desk ದೇಶ - ವಿದೇಶ
ನವದೆಹಲಿ, ಸೆ.15 : ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ಕೆಲವು ಅಂಶಗಳಿಗೆ ತಡೆ ಹೇರಿ ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ. ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಾಲಯ, ರಾಜ್ಯ ಮತ್ತು ಕೇಂದ್ರ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರ ಸದಸ್ಯರ ಸಂಖ್ಯೆ ಮೂರಕ್ಕಿಂತ ಹೆಚ್ಚಿರಬಾರದು ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ ವಕ್ಫ್ ಮಂಡಳಿಯ ಸದಸ್ಯರಾಗಲು ಕನಿಷ್ಠ ಐದು ವರ್ಷ ಇಸ್ಲಾಂ ಧರ್ಮವನ್ನು ಅನುಸರಿಸಿರಬೇಕೆಂಬ ಷರತ್ತನ್ನು ನ್ಯಾಯಾಲಯ ತಡೆಹಿಡಿದಿದೆ. ಈ ನಿಟ್ಟಿನಲ್ಲಿ ಸರಿಯಾದ ನಿಯಮಗಳನ್ನು ರೂಪಿಸುವ ವರೆಗೆ ಈ ನಿಬಂಧನೆಯನ್ನು ಜಾರಿಗೊಳಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದಲ್ಲದೆ, ಸೆಕ್ಷನ್ 3(74) ಗೆ ಸಂಬಂಧಿಸಿದ ಕಂದಾಯ ವಿಭಾಗದ ದಾಖಲೆಗಳ ಸಂಗ್ರಹಕ್ಕೂ ತಡೆಹಿಡಿಯಲಾಗಿದೆ.
ವಕ್ಫ್ ಕಾಯ್ದೆಯ ಸೆಕ್ಷನ್ 3 ಮತ್ತು 4 ಅನ್ನು ನ್ಯಾಯಾಲಯ ತಡೆ ಹೇರಿದ್ದು, ಆದರೆ ಸಂಪೂರ್ಣ ಕಾನೂನನ್ನು ನಿಷೇಧಿಸುವ ಹಕ್ಕು ನಮಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ವಕ್ಫ್ ಮಂಡಳಿಯ ಸಿಇಒ ಆಗುವ ವ್ಯಕ್ತಿ ಮುಸ್ಲಿಂ ಸಮುದಾಯದ್ದೇ ಆಗಿರಬೇಕು ಎಂದು ನ್ಯಾಯಾಲಯ ಹೇಳಿದೆ. ವಕ್ಫ್ ಮಂಡಳಿಯ 11 ಸದಸ್ಯರಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರರು ಇರಬಾರದು ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.
ವಕ್ಫ್ ತಿದ್ದುಪಡಿ ಕಾಯ್ದೆ ಪ್ರಕಾರ ಒಬ್ಬ ವ್ಯಕ್ತಿಯು ವಕ್ಫ್ ರಚಿಸಲು ಕನಿಷ್ಠ 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಸರಣೆ ಮಾಡಿರಬೇಕು. ಒಬ್ಬ ವ್ಯಕ್ತಿ ಇಸ್ಲಾಂ ಧರ್ಮದ ಅನುಯಾಯಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರಗಳು ಸ್ಪಷ್ಟ ನಿಯಮಗಳನ್ನು ರೂಪಿಸುವ ವರೆಗೆ ಮೇಲಿನ ನಿಷೇಧ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.
The Supreme Court has issued an interim order on the Waqf Amendment Act brought by the Central Government, refusing to strike down the law entirely but staying the implementation of certain provisions.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm