ಬ್ರೇಕಿಂಗ್ ನ್ಯೂಸ್
20-09-25 11:42 am HK News Desk ದೇಶ - ವಿದೇಶ
ನವದೆಹಲಿ, ಸೆ.20: ಪಾಕಿಸ್ತಾನಕ್ಕೆ ಹೋದರೆ ನನಗೆ ಮನೆಗೆ ಹೋದ ರೀತಿಯ ಅನುಭವ ಆಗುತ್ತದೆ ಎಂದು ಕಾಂಗ್ರೆಸ್ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಹೇಳಿದ್ದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ.
ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು, ''ಕೇಂದ್ರ ಸರಕಾರವು ವಿದೇಶಾಂಗ ನೀತಿಯಲ್ಲಿ ನೆರೆಹೊರೆಯ ರಾಷ್ಟ್ರಗಳ ಮೇಲೆ ಗಮನ ಕೇಂದ್ರೀಕರಿಸಬೇಕು. ನೆರೆಹೊರೆಯ ರಾಷ್ಟ್ರಗಳೊಂದಿಗೆ ನಾವು ನಿಜವಾಗಿಯೂ ಸಂಬಂಧವನ್ನು ಗಣನೀಯ ಪ್ರಮಾಣದಲ್ಲಿ ಸುಧಾರಿಸಬಹುದೇ ಎಂಬ ಬಗ್ಗೆ ಯೋಚಿಸಬೇಕು. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕೆ ಭೇಟಿ ನೀಡಿದ್ದೇನೆ. ಆ ರಾಷ್ಟ್ರಗಳಿಗೆ ಹೋದಾಗ ನನ್ನ ಮನೆಗೇ ಹೋದ ಅನುಭವವಾಗಿದೆ ಎಂದು ಹೇಳಿದ್ದಾರೆ.
'ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕೆ ಭೇಟಿ ನೀಡಿದ ವೇಳೆ ನನಗೆ ವಿದೇಶದಲ್ಲಿದ್ದೇನೆ ಎಂದು ಅನಿಸುವುದಿಲ್ಲ. ಅಲ್ಲಿನ ಜನರು ನನ್ನಂತೆ ಕಾಣುವರು, ಅವರು ನನ್ನಂತೆ ಮಾತನಾಡುವರು, ಅವರು ನನ್ನಂತೆಯೇ ಹಾಡುಗಳನ್ನು ಇಷ್ಟಪಡುವರು, ನಾನು ಸೇವಿಸುವ ಆಹಾರಗಳನ್ನೇ ಅವರೂ ಸೇವಿಸುವರು. ನಾವು ಅವರೊಂದಿಗೆ ಶಾಂತಿ ಮತ್ತು ಸಾಮರಸ್ಯದಿಂದ ಬದುಕಲು ಕಲಿಯಬೇಕು ಎಂದು ಪಿತ್ರೋಡಾ ಹೇಳಿದ್ದಾರೆ. ನೆರೆಹೊರೆಯ ದೇಶಗಳಲ್ಲಿ ಹಿಂಸಾಚಾರ ಮತ್ತು ಭಯೋತ್ಪಾದನೆಯಂಥ ಸಮಸ್ಯೆಗಳ ನಡುವೆಯೂ ಭಾರತವು ಆ ರಾಷ್ಟ್ರಗಳ ಜತೆ ಸಂಬಂಧ ಸುಧಾರಣೆಗೆ ಮುಂದಾಗಬೇಕು ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಆಹಾರ ಒದಗಿಸಿದ್ದಾರೆ.
ಕಾಂಗ್ರೆಸಿನ ಪಾಕ್ ಪ್ರೀತಿಗೆ ನಿದರ್ಶನ
ಸ್ಯಾಮ್ ಪಿತ್ರೋಡಾ ಹೇಳಿಕೆಯು ಕಾಂಗ್ರೆಸ್ ಪಾಕಿಸ್ತಾನ ಬಗ್ಗೆ ಅತಿಯಾದ ಪ್ರೀತಿ ಹೊಂದಿರುವುದನ್ನು ತೋರಿಸುತ್ತದೆ. ಇವರ ಹೇಳಿಕೆ ನೋಡಿದರೆ, 2008ರ ಮುಂಬೈ ದಾಳಿ ನಂತರವೂ ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ನೆರೆಯ ದೇಶದ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವ ಬಗ್ಗೆ ಕಾರಣ ತಿಳಿಯುತ್ತದೆ, ಇದರಲ್ಲಿ ಅಚ್ಚರಿ ಎನಿಸುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಕುಟುಕಿದ್ದಾರೆ. "ಕಾಂಗ್ರೆಸ್ ಮೊದಲಿನಿಂದಲೂ ರಾಷ್ಟ್ರೀಯ ಹಿತಾಸಕ್ತಿಯನ್ನು ಬದಿಗೊತ್ತಿ ಪಾಕಿಸ್ತಾನಕ್ಕೆ ಅನುಕೂಲ ಮಾಡಿಕೊಟ್ಟಿದೆ. ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಮೂಲಕ ಲಷ್ಕರ್ ಉಗ್ರ ಹಫೀಜ್ ಸಯೀದ್ ಜತೆಗೂ ಸಂಪರ್ಕ ಸಾಧಿಸಲಾಗಿತ್ತು. 26/11 ದಾಳಿ, ಪುಲ್ವಾಮಾ, ಪಹಲ್ಗಾಮ್ ದಾಳಿಯಲ್ಲಿ ಕಾಂಗ್ರೆಸ್ ನಾಯಕರು ಪಾಕಿಸ್ತಾನ ಪರ ಮಾತನಾಡಿದ್ದಾರೆ. ಅವರು ಪಾಕಿಸ್ತಾನವನ್ನು ಪ್ರೀತಿಸುತ್ತಿದ್ದು ಐಎನ್ಸಿ ಎಂದರೆ ಇಸ್ಲಾಮಾಬಾದ್ ನ್ಯಾಷನಲ್ ಕಾಂಗ್ರೆಸ್ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಟೀಕಿಸಿದ್ದಾರೆ.
Congress’ Overseas Unit Chairman Sam Pitroda has stirred controversy yet again with his latest remark, stating that visiting Pakistan feels like "going home." The comment has drawn sharp criticism from the BJP, which accused the Congress of harboring undue affection for Pakistan.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm