ಬ್ರೇಕಿಂಗ್ ನ್ಯೂಸ್
27-09-25 11:16 pm HK News Desk ದೇಶ - ವಿದೇಶ
ಚೆನ್ನೈ, ಸೆ.27 : ತಮಿಳುನಾಡಿನ ಕರೂರಿನಲ್ಲಿ ನಟ ಮತ್ತು ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಅವರು ಹಮ್ಮಿಕೊಂಡಿದ್ದ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದು 36 ಮಂದಿ ಸಾವಿಗೀಡಾಗಿದ್ದಾರೆ. ಸಾವಿರಾರು ಜನರು ಸೇರಿದ್ದ ರ್ಯಾಲಿ ಸಂದರ್ಭದಲ್ಲಿ ಏಕಾಏಕಿ ಕಾಲ್ತುಳಿತ ಉಂಟಾಗಿದ್ದು ಘೋರ ದುರಂತ ನಡೆದಿದೆ.
ಎಂಟು ಮಕ್ಕಳು, 16 ಮಹಿಳೆಯರು ಸೇರಿದಂತೆ ಸುಮಾರು 36ಕ್ಕೂ ಹೆಚ್ಚು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.





ನಿಗದಿತ ಸಮಯಕ್ಕಿಂತ 6 ಗಂಟೆ ತಡವಾಗಿ ವಿಜಯ್ ಸ್ಥಳಕ್ಕೆ ಬಂದಿದ್ದರು. ವಿಜಯ್ ಬರುತ್ತಿದ್ದಂತೆ ವೇದಿಕೆಯತ್ತ ಸಾವಿರಾರು ಸಂಖ್ಯೆಯಲ್ಲಿ ಜನ ನುಗ್ಗಲು ಪ್ರಾರಂಭಿಸಿದ್ದು ಈ ವೇಳೆ ಜನಸಂದಣಿ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ.
ಕಾಲ್ತುಳಿತದ ವೇಳೆ ಹಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಹಲವು ಮಕ್ಕಳು ಕಾಣೆಯಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ವಿಜಯ್ ತಕ್ಷಣ ತಮ್ಮ ಭಾಷಣವನ್ನು ನಿಲ್ಲಿಸಿ ಕಾರ್ಯಕರ್ತರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಆದರೆ ಅಷ್ಟರಲ್ಲಿ ಕೈತಪ್ಪಿ ಹೋಗಿತ್ತು. ಯುವ ನಾಯಕನಾಗಿ ಹೊಸ ರಾಜಕೀಯ ಪಕ್ಷದಿಂದ ಗಮನ ಸೆಳೆಯುತ್ತಿರುವಾಗಲೇ ಆಘಾತಕಾರಿ ಘಟನೆ ನಡೆದಿದೆ.
ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಾಂತ್ವನ ಹೇಳುತ್ತೇನೆ. ಸಂಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿ ತುಂಬಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
At least 36 people, including at least eight children and 16 women, died in a stampede at a rally addressed by Tamilaga Vettri Kazhagam (TVK) president and actor Vijay in Karur on Saturday (September 27, 2025), as part of his State-wide political tour.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm