ಬ್ರೇಕಿಂಗ್ ನ್ಯೂಸ್
01-10-25 09:44 pm HK News Desk ದೇಶ - ವಿದೇಶ
ನವದೆಹಲಿ, ಅ.1 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮಾತೆಯ ಚಿತ್ರವಿರುವ ರೂ. 100 ಮುಖಬೆಲೆಯ ನಾಣ್ಯವನ್ನು ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.
ದೆಹಲಿಯ ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು, 'ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ. ಇದು ಬಹಳ ಹೆಮ್ಮೆ ಮತ್ತು ಐತಿಹಾಸಿಕ ಮಹತ್ವವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.



ರೂ. 100 ಬೆಲೆಯ ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವನ್ನು ಮತ್ತು ಇನ್ನೊಂದು ಬದಿಯಲ್ಲಿ 'ವರದ ಮುದ್ರೆ'ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ.
ನಾಣ್ಯದ ಮೇಲೆ ಆರ್ಎಸ್ಎಸ್ ಧ್ಯೇಯ ವಾಕ್ಯವನ್ನು ಸಹ ಮುದ್ರಿಸಲಾಗಿದ್ದು, 'ಎಲ್ಲವೂ ರಾಷ್ಟ್ರಕ್ಕೆ ಸಮರ್ಪಿತವಾಗಿದೆ. ಎಲ್ಲವೂ ರಾಷ್ಟ್ರದ್ದು, ಯಾವುದೂ ನನ್ನದಲ್ಲ..' ಎಂಬುದು ಇದರ ಅರ್ಥವಾಗಿದೆ.
1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ್ದನ್ನು ಅಂಚೆ ಚೀಟಿಯಲ್ಲಿ ಚಿತ್ರಿಸಲಾಗಿದೆ. ಇದು ಸಂಘದ ಐತಿಹಾಸಿಕ ಕೊಡುಗೆಗಳನ್ನು ಒತ್ತಿ ಹೇಳುತ್ತದೆ. ಜತೆಗೆ, ಭಾರತ ಮಾತೆಗೆ, ಆರ್ಎಸ್ಎಸ್ನ ಶತಮಾನಗಳಷ್ಟು ಹಳೆಯ ಸೇವೆ ಮತ್ತು ಸಮರ್ಪಣಾ ಪ್ರಯಾಣಕ್ಕೆ ಹೆಮ್ಮೆಯ ಗೌರವ ಎಂದು ಮೋದಿ ಹೇಳಿದ್ದಾರೆ.
ಸಮಾರಂಭದಲ್ಲಿ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದರು.
Prime Minister Narendra Modi released a ₹100 commemorative coin and a special postal stamp marking the centenary of the Rashtriya Swayamsevak Sangh (RSS) at Dr. Ambedkar International Centre in New Delhi.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm