ಬ್ರೇಕಿಂಗ್ ನ್ಯೂಸ್
02-10-25 03:45 pm HK News Desk ದೇಶ - ವಿದೇಶ
ನವದೆಹಲಿ, ಅ.2: ಡಿಸೆಂಬರ್ 5–6 ರಂದು ನಡೆಯಲಿರುವ 23ನೇ ವಾರ್ಷಿಕ ಭಾರತ-ರಷ್ಯಾ ದ್ವಿಪಕ್ಷೀಯ ಶೃಂಗಸಭೆಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಭೇಟಿಯನ್ನು ಭಾರತ ಅಥವಾ ರಷ್ಯಾ ಅಧಿಕೃತವಾಗಿ ದೃಢಪಡಿಸಿಲ್ಲವಾದರೂ, ಈ ಬಗ್ಗೆ ಸಿದ್ಧತೆಗಳಲ್ಲಿ ತೊಡಗಿರುವ ಬಗ್ಗೆ ಮೂಲಗಳು ಖಚಿತಪಡಿಸಿವೆ.
ಫೆಬ್ರವರಿ 2022 ರಲ್ಲಿ ರಷ್ಯಾ-ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರ ಪುಟಿನ್ ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಕೊನೆಯ ಬಾರಿಗೆ 2021 ರಲ್ಲಿ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದರು. ವಿಶೇಷವಾಗಿ ಭಾರತದ ಮೇಲೆ ಅಮೆರಿಕವು ದಂಡನಾತ್ಮಕ ಸುಂಕಗಳನ್ನು ವಿಧಿಸಿದ ನಂತರ, ಎರಡು ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ ಗಟ್ಟಿಗೊಳ್ಳುತ್ತಿರುವ ಮಧ್ಯೆ ಈ ಶೃಂಗಸಭೆ ನಡೆಯುತ್ತಿರುವುದು ಮಹತ್ವ ಪಡೆದಿದೆ. ಭಾರತ - ರಷ್ಯಾ ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಈ ಶೃಂಗಸಭೆ ಹೆಚ್ಚಿನ ಅವಕಾಶ ಒದಗಿಸಲಿದೆ.
2024–25ರಲ್ಲಿ ಉಭಯ ರಾಷ್ಟ್ರಗಳ ನಡುವಿನ ವಹಿವಾಟು ದಾಖಲೆಯ 68.7 ಬಿಲಿಯನ್ ಡಾಲರ್ ತಲುಪಿತ್ತು. ಈ ಪೈಕಿ ತೈಲ ವಹಿವಾಟಿನದ್ದೇ ಸಿಂಹಪಾಲಾದರೆ, ರಷ್ಯಾಕ್ಕೆ ಭಾರತದ ರಫ್ತು ಪಾಲು 4.88 ಶತಕೋಟಿ ಡಾಲರ್ ಅಷ್ಟೇ ಆಗಿದೆ. ಎರಡು ದೇಶಗಳ ವ್ಯಾಪಾರ ಅಸಮತೋಲನವನ್ನು ಕಡಿಮೆಗೊಳಿಸುವುದು ಮಾತುಕತೆ ಸಮಯದಲ್ಲಿ ಪ್ರಮುಖವಾಗಿರುವ ನಿರೀಕ್ಷೆಯಿದೆ.
ಪ್ರಧಾನಿ ಮೋದಿ ಕಳೆದ ವರ್ಷದ ಶೃಂಗಸಭೆಗಾಗಿ ರಷ್ಯಾಕ್ಕೆ ಭೇಟಿ ನೀಡಿದ್ದು ಪುಟಿನ್ ಅವರೊಂದಿಗೆ ನಿಯಮಿತ ಸಂಬಂಧ ಹೊಂದಿದ್ದಾರೆ. ಸೆಪ್ಟೆಂಬರ್ನಲ್ಲಿ ನಡೆದ ಶಾಂಘೈ ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರೂ ನಾಯಕರು ಭೇಟಿಯಾಗಿದ್ದರು. ಅಲ್ಲಿ ತಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಬದ್ಧತೆಯನ್ನು ಪುನರುಚ್ಚರಿಸಿದ್ದರು.
Russian President Vladimir Putin is expected to visit India on December 5–6 for the 23rd Annual India-Russia Bilateral Summit, marking his first trip since the Russia-Ukraine conflict began in February 2022. Although neither New Delhi nor Moscow has officially confirmed, diplomatic sources suggest preparations are underway.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 05:28 pm
HK News Desk
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm