ಬ್ರೇಕಿಂಗ್ ನ್ಯೂಸ್
03-10-25 09:09 pm HK News Desk ದೇಶ - ವಿದೇಶ
ನವದೆಹಲಿ, ಅ.3 : ಪಾಕಿಸ್ತಾನ ಭೂಪಟದಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಯಸಿದರೆ ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಭೌಗೋಳಿಕ ನಕ್ಷೆಯಲ್ಲಿ ಇಲ್ಲದಂತೆ ಪಾಕಿಸ್ತಾನವನ್ನು ಅಳಿಸಿ ಹಾಕುತ್ತೇವೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಎಚ್ಚರಿಕೆ ನೀಡಿದ್ದಾರೆ.
ರಾಜಸ್ಥಾನದ ಅನುಪ್ಗಢದಲ್ಲಿರುವ ಸೇನಾ ಪೋಸ್ಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, 'ಭಯೋತ್ಪಾದನೆ ಬೆಂಬಲಿಸುವುದನ್ನು ಮೊದಲು ನಿಲ್ಲಿಸಿ.. ಇಲ್ಲವಾದಲ್ಲಿ ನಿಮ್ಮ ಭೌಗೋಳಿಕ ನಕ್ಷೆಯನ್ನು ಕಳೆದುಕೊಳ್ಳುತ್ತೀರಿ. ಪಾಕಿಸ್ತಾನವು ನಕ್ಷೆಯಲ್ಲಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಯಸಿದರೆ, ಅದು ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆಯನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಪಾಕಿಸ್ತಾನವನ್ನು ಭೂಪಟದಿಂದಲೇ ಅಳಿಸಿ ಬಿಡುತ್ತೇವೆ ಎಂದು ಹೇಳಿದರು.
ಪಾಕಿಸ್ತಾನ ಸರ್ಕಾರ ಮತ್ತು ಸೇನೆಯು ತನ್ನ ನಿಲುವನ್ನು ಬದಲಿಸಿಕೊಳ್ಳಬೇಕು. ಹದ್ದು ಮೀರಿ ವರ್ತಿಸಿದರೆ ಈ ಬಾರಿ ಭಾರತೀಯ ಪಡೆಗಳು ಯಾವುದೇ ಸಂಯಮ ತೋರಿಸುವುದಿಲ್ಲ. ಭಯೋತ್ಪಾದನೆಯನ್ನು ನೆರೆ ರಾಷ್ಟ್ರಕ್ಕೆ ರಫ್ತು ಮಾಡುವುದನ್ನು ನಿಲ್ಲಿಸದಿದ್ದರೆ 'ಆಪರೇಷನ್ ಸಿಂಧೂರ್' ಎರಡನೇ ಆವೃತ್ತಿ ಹೆಚ್ಚು ದೂರವಿಲ್ಲ ಎಂದು ದ್ವಿವೇದಿ ಎಚ್ಚರಿಸಿದರು.
ಮುಂದಿನ ಬಾರಿ ನಾವು ಆಪರೇಷನ್ ಸಿಂಧೂರ್ ನಲ್ಲಿ ಹೊಂದಿದ್ದ ಸಂಯಮವನ್ನು ಕಾಯ್ದುಕೊಳ್ಳಲ್ಲ. ಪಾಕಿಸ್ತಾನ ಭೌಗೋಳಿಕವಾಗಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಯಸುತ್ತೋ ಇಲ್ಲವೋ ಎಂದು ಯೋಚಿಸುವಂತೆ ಮಾಡುತ್ತೇವೆ ಎಂದು ಹೇಳುವ ಮೂಲಕ ದ್ವಿವೇದಿ ಸೈನಿಕರಿಗೆ ಯಾವುದೇ ಪರಿಸ್ಥಿತಿಗೂ ಸಿದ್ಧರಾಗಿರುವಂತೆ ಸೂಚಿಸಿದರು.
ಪಾಕಿಸ್ತಾನದ 6 ಯುದ್ದ ವಿಮಾನಗಳು ಪತನ
ಇದೇ ವೇಳೆ ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಪಡೆಗಳು ಅಮೆರಿಕ ನಿರ್ಮಿತ ಎಫ್ -16 ಮತ್ತು ಚೀನಾದ ಜೆಎಫ್ -17 ಸೇರಿದಂತೆ ನಾಲ್ಕರಿಂದ ಆರು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ. ಈ ಪೈಕಿ ಐದು ಫೈಟರ್ ಜೆಟ್ಗಳು ಮತ್ತು ಒಂದು 'ದೊಡ್ಡ ಹಕ್ಕಿ'ಯನ್ನು ಹೊಡೆಯಲಾಗಿದೆ ಎಂದು ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಹೇಳಿದ್ದರು.
In a fiery warning from Rajasthan’s Anupgarh, Army Chief General Upendra Dwivedi cautioned Pakistan to halt state-sponsored terrorism or risk being erased from the world map. He stressed that India would show no restraint if provoked again, hinting at a second “Operation Sindhoor.” Earlier this year, Indian forces shot down up to six Pakistani fighter jets, including U.S.-made F-16s and China’s JF-17s.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm