ಬ್ರೇಕಿಂಗ್ ನ್ಯೂಸ್
05-10-25 10:38 pm HK News Desk ದೇಶ - ವಿದೇಶ
ಭೋಪಾಲ್, ಅ 05 : ಮಧ್ಯ ಪ್ರದೇಶದ ಛಿಂದ್ವಾಡಾ ಜಿಲ್ಲೆಯಲ್ಲಿ 14 ಮಕ್ಕಳ ಸಾವಿಗೆ ಕಾರಣವಾಗಿದೆ ಎನ್ನಲಾದ ಕೆಮ್ಮಿನ ಸಿರಪ್ 'ಕೋಲ್ಡ್ರಿಫ್' ಶಿಫಾರಸು ಮಾಡಿದ್ದ ವೈದ್ಯನನ್ನು ಬಂಧಿಸಲಾಗಿದೆ.
ಬಂಧಿತ ವೈದ್ಯನನ್ನು ಡಾ. ಪ್ರವೀಣ್ ಸೋನಿ ಎಂದು ಗುರುತಿಸಲಾಗಿದ್ದು, ಈತ ಸರಕಾರಿ ವೈದ್ಯನಾಗಿದ್ದರೂ ಖಾಸಗಿ ಕ್ಲಿನಿಕ್ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ವೈದ್ಯನ ವಿರುದ್ಧ ವೈದ್ಯಕೀಯ ನಿರ್ಲಕ್ಷ್ಯ ಪ್ರಕರಣ ದಾಖಲಿಸಿರುವ ಪೊಲೀಸರು, ಔಷಧ ತಯಾರಿಕಾ ಸಂಸ್ಥೆ ' ಸ್ರೇಸನ್ ಫಾರ್ಮಾಸ್ಯುಟಿಕಲ್ಸ್ ' ವಿರುದ್ಧವೂ ಎಫ್ಐಆರ್ ದಾಖಲಿಸಿದ್ದಾರೆ.
ಕೆಮ್ಮಿನ ಸಿರಪ್ನಲ್ಲಿ ವಿಷಕಾರಿ ಅಂಶ ದೃಢ
ಸುಮಾರು ಒಂದು ತಿಂಗಳಿನಿಂದ ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮದ ಹೊರತಾಗಿಯೂ ಡಾ. ಸೋನಿ ಇದೇ ಔಷಧ ಬರೆದುಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ. ತಮಿಳುನಾಡಿನ ಕಾಂಚೀಪುರಂ ಮೂಲದ ಔಷಧ ಕಂಪನಿ ತಯಾರಿಸಿದ ಕೆಮ್ಮಿನ ಸಿರಪ್ನಲ್ಲಿ ವಿಷಕಾರಿ ಅಂಶವಿರುವುದು ದೃಢಪಟ್ಟ ಬೆನ್ನಲ್ಲೇ, ಹಲವು ರಾಜ್ಯಗಳು ಈ ಸಿರಪ್ ಮಾರಾಟವನ್ನು ನಿಷೇಧಿಸಿವೆ.
ಮತ್ತಿಬ್ಬರು ಮಕ್ಕಳು ಸಾವು:
ಈ ಮಧ್ಯೆ, ಮಧ್ಯ ಪ್ರದೇಶದ ಬೇತಲ್ನಲ್ಲಿ ಮತ್ತಿಬ್ಬರು ಮಕ್ಕಳು ಕಿಡ್ನಿವೈಫಲ್ಯಕ್ಕೆ ಗುರಿಯಾಗಿ ಭಾನುವಾರ ಮೃತಪಟ್ಟಿದ್ದಾರೆ. ಮೃತ ಮಕ್ಕಳನ್ನು ಕಲ್ಮೇಶ್ವರ ಗ್ರಾಮದ ಕಮಲೇಶ್ ಅವರ ಮಗ ಕಬೀರ್(4) ಮತ್ತು ಜಾಮುನ್ ಬಿಚುವಾ ಗ್ರಾಮದ ನಿಖ್ಲೇಶ್ ಅವರ ಮಗ ಎರಡೂವರೆ ವರ್ಷದ ಗಾರ್ಮಿತ್ ಎಂದು ಗುರುತಿಸಲಾಗಿದೆ. ಇವರ ಸಾವಿಗೂ ವಿಷಯಕಾರಿ ಸಿರಪ್ ಸೇವನೆ ಕಾರಣವೆಂದು ಶಂಕಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
‘ಕೆಮ್ಮು ಮತ್ತು ಶೀತಕ್ಕೆ ಸಂಬಂಧಿಸಿದಂತೆ ಎರಡು ವರ್ಷದೊಳಗಿನ ಮಕ್ಕಳಿಗೆ ಔಷಧ ಶಿಫಾರಸು ಮಾಡಬಾರದು. ಐದು ವರ್ಷದೊಳಗಿನ ಮಕ್ಕಳಿಗೂ ಸಾಮಾನ್ಯವಾಗಿ ಅಗತ್ಯ ಇರುವುದಿಲ್ಲ. ಅತಿ ಅಗತ್ಯವಾದರೆ ಮಾತ್ರ ಸೂಕ್ತ ಪ್ರಮಾಣದಲ್ಲಿ ಕಡಿಮೆ ಅವಧಿಗೆ ಒದಗಿಸಬೇಕು’ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (ಡಿಜಿಎಚ್ಎಸ್) ಸೂಚನೆ ನೀಡಿದೆ.
ಈ ಬಗ್ಗೆ ಎಲ್ಲ ರಾಜ್ಯಗಳ ಆರೋಗ್ಯ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದೆ. ‘ಮಕ್ಕಳಲ್ಲಿನ ಕೆಮ್ಮಿಗೆ ಔಷಧಗಳನ್ನು ವಿವೇಚನೆ ಬಳಸಿ ವೈದ್ಯರು ಶಿಫಾರಸು ಮಾಡಬೇಕು. ಬಹುತೇಕ ಕೆಮ್ಮಿನ ಸಮಸ್ಯೆಗಳು ಔಷಧಗಳ ಅಗತ್ಯವಿಲ್ಲದೆ ಕಡಿಮೆಯಾಗುತ್ತವೆ. ಆದ್ದರಿಂದ ಅನಗತ್ಯವಾಗಿ ಔಷಧ ಬಳಕೆ ತಪ್ಪಿಸಿ, ವೈದ್ಯರ ಸಲಹೆಗಳನ್ನು ಮಾತ್ರ ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದೆ.
In Madhya Pradesh’s Chhindwara district, police have arrested Dr. Praveen Soni for prescribing the cough syrup ‘Coldrif,’ which has been linked to the deaths of at least 14 children. Despite reports of adverse effects for nearly a month, the government doctor allegedly continued prescribing the medicine at his private clinic. Authorities have also registered an FIR against the manufacturer, Sresen Pharmaceuticals, based in Tamil Nadu’s Kanchipuram.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm