ಬ್ರೇಕಿಂಗ್ ನ್ಯೂಸ್
27-12-20 10:14 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.27: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ, ಭಾರತವು ಸೋವಿಯತ್ ಯೂನಿಯನ್ ರೀತಿ ಒಕ್ಕೂಟ ವ್ಯವಸ್ಥೆಯಿಂದ ಒಡೆದು ಹೋಗುವ ಸ್ಥಿತಿ ದೂರವಿಲ್ಲ ಎಂದು ಕಿಡಿಕಾರಿದೆ.
ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದು ಕೇಂದ್ರ ಮತ್ತು ರಾಜ್ಯಗಳ ನಡುವಿನ ಬಾಂಧವ್ಯ ಹದಗೆಡುತ್ತಿದ್ದು, ದೇಶದ ರಾಜ್ಯಗಳು ಸೋವಿಯತ್ ಒಕ್ಕೂಟದಂತೆ ಒಡೆದು ಹೋಗಲು ಹೆಚ್ಚು ಸಮಯ ತೆಗೆದುಕೊಳ್ಳಲ್ಲ ಎಂದು ಹೇಳಿದೆ.
ರಾಜಕೀಯ ಕಾರಣಕ್ಕಾಗಿ ರಾಜ್ಯ ಸರಕಾರಗಳ ಮೇಲೆ ಮೂಗು ತೂರಿಸಲು ಯತ್ನಿಸುವ ಕೇಂದ್ರ ಸರಕಾರ, ಇದರಿಂದ ಜನರಿಗೆ ಹಾನಿ ಆಗುತ್ತದೆ ಎಂಬುದನ್ನು ಮನಗಾಣಬೇಕು. ಬಿಜೆಪಿ ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಆಡಳಿತವನ್ನು ಅಸ್ಥಿರಗೊಳಿಸಲು ಪ್ರಧಾನಿ ಯತ್ನಿಸುತ್ತಿದ್ದಾರೆ ಎಂಬ ಗುಮಾನಿ ಇದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಪ್ರಧಾನಿ ಯತ್ನಿಸಿದ್ದಾರೆಂದು ಬಿಜೆಪಿ ಮುಖಂಡ ವಿಜಯ್ ವರ್ಗೀಯಾ ಹೇಳಿದ್ದರೆಂದು ಪತ್ರಿಕೆ ಉಲ್ಲೇಖ ಮಾಡಿದೆ.
ಪ್ರಧಾನಿ ಇಡೀ ದೇಶಕ್ಕೆ ಸೇರಿದವರು. ಒಕ್ಕೂಟವಾಗಿ ನೆಲೆನಿಂತಿರುವ ಈ ದೇಶದಲ್ಲಿ ರಾಜ್ಯಗಳ ಸ್ವಾಯತ್ತೆಯನ್ನು ಕಾಪಾಡುವ ಹೊಣೆಯೂ ಪ್ರಧಾನಿಗಿದೆ. ಬಿಜೆಪಿ ಆಡಳಿತದಲ್ಲಿ ಇಲ್ಲದ ರಾಜ್ಯಗಳು ಕೂಡ ರಾಷ್ಟ್ರೀಯ ಹಿತಾಸಕ್ತಿಗೆ ಮಹತ್ವ ನೀಡುತ್ತವೆ. ಆದರೆ, ಅಲ್ಲಿನ ರಾಜ್ಯಗಳಲ್ಲಿ ಅಂತಹ ಭಾವನೆಯನ್ನು ನಿರ್ಮೂಲನಗೊಳಿಸುವ ಯತ್ನವನ್ನು ಮಾಡಲಾಗುತ್ತಿದೆ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.
Shiv Sena launched a scathing attack against the BJP-led Central government stating that the relations between the Centre and States are worsening and cautioned that "it will not take much time for states in our country to break away like the Soviet Union".
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm