ಬ್ರೇಕಿಂಗ್ ನ್ಯೂಸ್
09-10-25 12:12 pm HK News Desk ದೇಶ - ವಿದೇಶ
ಚೆನ್ನೈ, ಅ.9 : 20 ಪುಟಾಣಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಉತ್ಪಾದಕ ತಮಿಳುನಾಡು ಮೂಲದ ಸ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದು ಭೋಪಾಲ್ ಒಯ್ದಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳು ಸಾವನ್ನಪ್ಪಿದ್ದು ಇದರ ಬೆನ್ನಲ್ಲೇ ಪೊಲೀಸರು ಅವರ ಶೋಧಕ್ಕೆ ಇಳಿದಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನ ಘೋಷಿಸಲಾಗಿತ್ತು.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದು ಗಂಭೀರ ಸ್ಥಿತಿಗೆ ಒಳಗಾಗಿ ಸಾವು ಕಂಡಿದ್ದರು.
ಎರಡು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆಗಾಗಿ ಕೋಲ್ಡ್ರಿಫ್ ಸಿರಪ್ ಸೂಚಿಸಲಾಗಿತ್ತು. ಇದೇ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ ಇರುವುದು ಕಂಡುಬಂದ ನಂತರ ಸಿರಪ್ ಬಳಕೆ ಮಾಡದಂತೆ ಸೂಚಿಸಿದ್ದರು. ಆದರೆ ಈ ಔಷಧಿಯನ್ನು ಅದಾಗಲೇ ಉತ್ತರ ಭಾರತಕ್ಕೆ ಪೂರೈಕೆ ಮಾಡಲಾಗಿತ್ತು. ಸಿರಪ್ ತಯಾರಕ ಸಂಸ್ಥೆ ತಮಿಳುನಾಡಿನದ್ದಾಗಿದ್ದು ವಿಷಕಾರಿ ಅಂಶ ಪತ್ತೆಯಾದರೂ ನಿರ್ಲಕ್ಷ್ಯ ವಹಿಸಿದ್ದು ದುಬಾರಿಯಾಗಿ ಪರಿಣಮಿಸಿದೆ.
The owner of Srisan Pharmaceuticals, the Tamil Nadu-based company that manufactured ColdRiff cough syrup, has been arrested in connection with the deaths of at least 20 children in Madhya Pradesh.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm