ಬ್ರೇಕಿಂಗ್ ನ್ಯೂಸ್
14-10-25 11:11 am HK News Desk ದೇಶ - ವಿದೇಶ
ಚೆನ್ನೈ, ಅ.14 : ತಮಿಳುನಾಡಿನ ಕರೂರಿನಲ್ಲಿ ನಟ, ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಪ್ರಚಾರ ರ್ಯಾಲಿ ನಡೆಸುತ್ತಿದ್ದಾಗ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 27ರಂದು ಕರೂರಿನಲ್ಲಿ ಟಿಎಂಕೆ ಪಕ್ಷದ ಅಧ್ಯಕ್ಷ, ನಟ ವಿಜಯ್ ಪ್ರಚಾರ ರ್ಯಾಲಿ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ 41 ಜನರು ಬಲಿಯಾಗಿದ್ದರು. ಈ ಘಟನೆಯನ್ನು ಆಡಳಿತಾರೂಢ ಡಿಎಂಕೆ ಷಡ್ಯಂತ್ರ ಎಂದು ಆರೋಪಿಸಿದ್ದ ಟಿವಿಕೆ, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆಗೆ ಮನವಿ ಮಾಡಿತ್ತು.
ನ್ಯಾಯಮೂರ್ತಿಗಳಾದ ಜೆ.ಕೆ ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು, ಸಿಬಿಐ ತನಿಖೆಯ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದ ಸಮಿತಿಯನ್ನು ನೇಮಿಸಿದೆ. ಇದಕ್ಕೂ ಮುನ್ನ ಮದ್ರಾಸ್ ಹೈಕೋರ್ಟ್ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸುವಂತೆ ಆದೇಶಿಸಿತ್ತು. ಆದರೆ, ಎಸ್ಐಟಿಯಲ್ಲಿ ತಮಿಳುನಾಡಿನ ಪೊಲೀಸ್ ಅಧಿಕಾರಿಗಳು ಮಾತ್ರ ಇದ್ದು, ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಆರೋಪಿಸಿ ಟಿವಿಕೆ ಪಕ್ಷ ಸುಪ್ರೀಂ ಮೆಟ್ಟಿಲೇರಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ, ಸುಪ್ರೀಂ ಕೋರ್ಟಿನ ಹಾದಿ ತಪ್ಪಿಸಲಾಗಿದೆ, ಸತ್ಯವನ್ನು ಮರೆಮಾಚಿ ಕೋರ್ಟನ್ನು ತಪ್ಪು ದಾರಿಗೆ ಎಳೆದಿದ್ದಾರೆ. ರಾಜಕೀಯ ಕಾರಣಕ್ಕೆ ಸಂತ್ರಸ್ತರನ್ನು ದುರ್ಬಳಕೆ ಮಾಡಲಾಗಿದೆ. ಅರ್ಜಿದಾರರು ದುರಂತದಲ್ಲಿ ಮೃತಪಟ್ಟ ಕುಟುಂಬದ ಸಂಬಂಧಿಕರಲ್ಲ. ಯಾರದ್ದೋ ಸಹಿ ಮಾಡಿಸಿ ಕೋರ್ಟಿಗೆ ನೀಡಲಾಗಿದೆ ಎಂದು ಆರೋಪಿಸಿದೆ.
The Supreme Court has handed over the investigation of the Karur stampede case in Tamil Nadu to the CBI, following a petition by actor and TVK party chief Vijay, who alleged a DMK conspiracy behind the incident. The September 27 rally tragedy claimed 41 lives during Vijay’s political campaign. A committee led by retired Supreme Court judge Ajay Rastogi will supervise the probe.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm