ಬ್ರೇಕಿಂಗ್ ನ್ಯೂಸ್
14-10-25 10:33 pm HK News Desk ದೇಶ - ವಿದೇಶ
ನವದೆಹಲಿ, ಅ.14 : ಭಾರತದಲ್ಲಿ ಹೂಡಿಕೆ ಮಾಡದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಡದ ನಡುವೆಯೂ ಅಮೆರಿಕ ಮೂಲದ ಜಾಗತಿಕ ಟೆಕ್ ದೈತ್ಯ ಗೂಗಲ್ ಸಂಸ್ಥೆ ಭಾರತದಲ್ಲಿ 15 ಶತಕೋಟಿ ಡಾಲರ್ ಮೌಲ್ಯದ ಭಾರೀ ಮೊತ್ತದ ಹೂಡಿಕೆಗೆ ಮುಂದಾಗಿದೆ.
ಭಾರತದಲ್ಲಿ ಮೊದಲ AI-ಹಬ್‌ಗಾಗಿ ಬರೋಬ್ಬರಿ 15 ಶತಕೋಟಿ ಅಮೆರಿಕನ್ ಡಾಲರ್ ಹೂಡಿಕೆ ಮಾಡಲಿದೆ. ಈ ಬಗ್ಗೆ ಗೂಗಲ್ ಸಿಇಒ ಸುಂದರ್ ಪಿಚೈ ಅವರು ಖುದ್ದಾಗಿ ಭಾರತದ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ವಿವರಣೆ ನೀಡಿದ್ದಾರೆ. ಮಂಗಳವಾರ ಪ್ರಧಾನಿ ಮೋದಿಯವರನ್ನು ಭೇಟಿಯಾದ ಪಿಚೈ, ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಿರ್ಮಿಸಬೇಕೆಂದಿರುವ ಗೂಗಲ್ ಕಂಪನಿಯ ಮೊದಲ AI ಹಬ್‌ಗಾಗಿ ಯೋಜನೆಗಳನ್ನು ಹಂಚಿಕೊಂಡರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸುಂದರ್ ಪಿಚೈ ಅವರು, "ವಿಶಾಖಪಟ್ಟಣದಲ್ಲಿ ಮೊದಲ Google AI ಹಬ್‌ಗಾಗಿ ನಮ್ಮ ಯೋಜನೆಗಳನ್ನು ಹಂಚಿಕೊಳ್ಳಲಿದ್ದೇವೆ. ಈ ಬಗ್ಗೆ ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನಡೆಸಿದ್ದು ಇದು ಭಾರತದ ಪಾಲಿಗೆ ಪ್ರಮುಖ ಹೆಗ್ಗುರುತು ಎಂದು ಬರೆದುಕೊಂಡಿದ್ದಾರೆ.
"ಈ ಹಬ್ ನಲ್ಲಿ ಗಿಗಾವ್ಯಾಟ್- ಪ್ರಮಾಣದ ಕಂಪ್ಯೂಟರ್ ಸಾಮರ್ಥ್ಯ, ಅಂತರಾಷ್ಟ್ರೀಯ ಸಬ್‌ಸೀ ಗೇಟ್‌ವೇ ಮತ್ತು ದೊಡ್ಡ ಪ್ರಮಾಣದ ಇಂಧನ ಮೂಲಸೌಕರ್ಯವನ್ನು ಸಂಯೋಜಿಸುತ್ತದೆ. ಇದಲ್ಲದೇ, ದೇಶಾದ್ಯಂತ ಬೆಳವಣಿಗೆಯಲ್ಲಿ ಕ್ರಾಂತಿಯಾಗಲಿದೆ ಎಂದು ಪೋಸ್ಟ್ ಮಾಡಿದ್ದಾರೆ. ಅಮೆರಿಕದಿಂದ ಹೊರಗೆ ಅತಿದೊಡ್ಡ AI ಹಬ್ ಆಗಿ ವಿಶಾಖಪಟ್ಟಣ ರೂಪುಗೊಳ್ಳಲಿದ್ದು ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ 15 ಶತಕೋಟಿ ಡಾಲರ್ ಹೂಡಿಕೆ ಮಾಡಲಾಗುವುದು. ಪ್ರಮುಖ ಡೇಟಾ ಸೆಂಟರ್ ಮತ್ತು ಕೃತಕ ಬುದ್ಧಿಮತ್ತೆ ನೆಲೆಯನ್ನು ಈ ಕೇಂದ್ರ ಒಳಗೊಂಡಿರುತ್ತದೆ ಎಂದು ಸುಂದರ್ ಪಿಚೈ ಹೇಳಿದ್ದಾರೆ.
2026ರ ಭಾರತ-AI ಇಂಪ್ಯಾಕ್ಟ್ ಶೃಂಗಸಭೆಗೆ ಮುಂಚಿತವಾಗಿ ದೆಹಲಿಯಲ್ಲಿ ನಡೆದ ಗೂಗಲ್ ಆಯೋಜಿಸಿದ ಭಾರತ್ AI ಶಕ್ತಿ ಕಾರ್ಯಕ್ರಮದಲ್ಲಿ ಈ ಯೋಜನೆಯನ್ನು ಔಪಚಾರಿಕವಾಗಿ ಅನಾವರಣಗೊಳಿಸಲಾಯಿತು. ಹೊಸ AI ಹಬ್ ಪ್ರಬಲ AI ಮೂಲಸೌಕರ್ಯ, ಡೇಟಾ ಸೆಂಟರ್ ಸಾಮರ್ಥ್ಯ, ಹೊಸ ದೊಡ್ಡ ಪ್ರಮಾಣದ ಇಂಧನ ಮೂಲಗಳು ಮತ್ತು ವಿಸ್ತೃತ ಫೈಬರ್-ಆಪ್ಟಿಕ್ ನೆಟ್‌ವರ್ಕ್ ಅನ್ನು ಒಂದೇ ಸ್ಥಳದಲ್ಲಿ ಸಂಯೋಜಿಸುತ್ತದೆ ಎಂದು ಹೇಳಲಾಗಿದೆ.
In a bold move amid pressure from U.S. President Donald Trump to curtail overseas tech investments, Google has committed USD 15 billion over five years to develop India’s first major AI hub in Visakhapatnam, Andhra Pradesh — its largest project outside the U.S.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್‌ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm