ಬ್ರೇಕಿಂಗ್ ನ್ಯೂಸ್
15-10-25 11:02 pm HK News Desk ದೇಶ - ವಿದೇಶ
ನವದೆಹಲಿ, ಅ.15 : ಪಾಕಿಸ್ತಾನ- ಅಫ್ಘಾನಿಸ್ತಾನ ಮಧ್ಯೆ ಪೂರ್ಣ ಮಟ್ಟದ ಸಂಘರ್ಷ ಏರ್ಪಟ್ಟಿದೆ. ಒಂದೆಡೆ ಕದನ ವಿರಾಮ ಎನ್ನುತ್ತಲೇ ಪಾಕಿಸ್ತಾನ ವಾಯುಪಡೆಯು ಅಫ್ಘಾನಿಸ್ತಾನದ ಕಂದಹಾರ್ ಮೇಲೆ ಬಾಂಬ್ ದಾಳಿ ನಡೆಸಿದ್ದು, 15 ನಾಗರಿಕರು ಸಾವನ್ನಪ್ಪಿದ್ದು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪ್ರತಿಯಾಗಿ ತಾಲಿಬಾನಿಗಳು ಪಾಕಿಸ್ತಾನ ಗಡಿಯಾಚೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದು ಹಲವು ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ ಪಾಕಿಸ್ತಾನ ವಾಯುಪಡೆಯು ಕಂದಹಾರ್ ಬಳಿಯ ಸ್ಪಿನ್ ಬೋಲ್ಡಾಕ್ ಪ್ರದೇಶಕ್ಕೆ ದಾಳಿ ನಡೆಸಿದೆ. ವಸತಿ ಪ್ರದೇಶದ ಮೇಲೆ ದಾಳಿ ಎಸಗಿದ್ದರಿಂದ ಮಕ್ಕಳು, ಮಹಿಳೆಯರು ಸೇರಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳದಲ್ಲೇ 12 ಮಂದಿ ಸಾವಿಗೀಡಾಗಿದ್ದಾರೆಂದು ಅಫ್ಘಾನ್ ಸರ್ಕಾರದ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೇಳಿದ್ದಾರೆ.
ಇದರ ಬೆನ್ನಲ್ಲೇ ಪಾಕ್ ಮತ್ತು ಅಫ್ಘಾನ್ ಸೇನಾಪಡೆಗಳು ಕದನ ವಿರಾಮ ಘೋಷಣೆ ಮಾಡಿದ್ದು, ಬುದವಾರ ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಈ ವಿರಾಮ ಇರಲಿದೆ. ಬುಧವಾರ ಕಾಬೂಲ್ ನಲ್ಲಿ ತೈಲ ಟ್ಯಾಂಕರ್ ಸ್ಫೋಟಿಸಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪಾಕಿಸ್ತಾನವು ಯುದ್ಧ ಕೊನೆಗೊಳಿಸುವುದಕ್ಕಾಗಿ ಕತಾರ್ ಮತ್ತು ಸೌದಿ ಅರೇಬಿಯಾವನ್ನು ಮಧ್ಯವರ್ತಿಯಾಗಿ ಬರುವಂತೆ ಕೇಳಿಕೊಂಡಿದೆ. ಮಾತುಕತೆ ಕಾರಣಕ್ಕೆ ಪಾಕ್ ಸಚಿವರು ಅಫ್ಘಾನ್ ಒಳಗೆ ಬರಬಾರದು ಎಂದು ತಾಲಿಬಾನ್ ಹೇಳಿಕೊಂಡಿದೆ.
ಕಳೆದೊಂದು ವಾರದಿಂದ ಉಭಯ ದೇಶಗಳ ಮಧ್ಯೆ ಸಂಘರ್ಷ ಏರ್ಪಟ್ಟಿದೆ. ಪಾಕ್ ವಾರದ ಹಿಂದೆ ಕಾಬೂಲಿನ ಟಿಟಿಪಿ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್ ಮಿಲಿಟರಿಯು ಪಾಕ್ ಮೇಲೆ ಮುಗಿಬಿದ್ದಿದೆ. ಇದೇ ವೇಳೆ ಅಫ್ಘಾನ್ ವಿದೇಶಾಂಗ ಮಂತ್ರಿ ಮುತ್ತಾಕಿ ಭಾರತಕ್ಕೆ ಭೇಟಿ ನೀಡಿದ್ದು, ಪಾಕಿಸ್ತಾನ ವಿರುದ್ಧ ಕಾರ್ಯಾಚರಣೆಗೆ ಬಲ ಸಿಕ್ಕಂತಾಗಿದೆ.
Full-scale conflict has erupted between Pakistan and Afghanistan after the Pakistan Air Force carried out airstrikes on Kandahar’s Spin Boldak region, killing at least 15 civilians and injuring over 100. The attack targeted residential areas, leading to heavy civilian casualties, including women and children, according to Afghan government spokesperson Zabihullah Mujahid.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm