ಬ್ರೇಕಿಂಗ್ ನ್ಯೂಸ್
16-10-25 10:52 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.16 : ಗುಜರಾತ್ ನಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಿಎಂ ಭೂಪೇಂದ್ರ ಪಟೇಲ್ ಹೊರತುಪಡಿಸಿ ಇಡೀ ಸಚಿವ ಸಂಪುಟ ಖಾಲಿಯಾಗಿದ್ದು, ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ರಾಜ್ಯದಲ್ಲಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಹೊಸತಾಗಿ 27 ಸಚಿವರು ಪ್ರಮಾಣ ಸ್ವೀಕರಿಸಲಿದ್ದಾರೆ.
ರಾಜೀನಾಮೆ ನೀಡಿರುವ ಸಚಿವರ ಪೈಕಿ ಯಾರು ಸಚಿವ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ, ಹೊಸತಾಗಿ ಯಾರು ಸಚಿವ ಸ್ಥಾನಕ್ಕೆ ಏರಲಿದ್ದಾರೆ ಎಂಬ ಲೆಕ್ಕಾಚಾರಗಳು ಆರಂಭವಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಗುರುವಾರ ಸಂಜೆ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ಹೊಸ ಸಚಿವರ ಪಟ್ಟಿಯನ್ನು ಸಲ್ಲಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 11:30 ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಿಗದಿಯಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಪುಟ ಪುನರಚನೆಯು ಹೊಸ ಉಪ ಮುಖ್ಯಮಂತ್ರಿ, ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಮರು ರೂಪಿಸಬಹುದು. ಅನೇಕ ಹೊಸ ಮುಖಗಳು ಸಚಿವ ಸ್ಥಾನಕ್ಕೆ ಬರಲಿದ್ದು, ಕೆಲವು ಹಳೆಯ ಸಚಿವರು ನೇಪಥ್ಯಕ್ಕೆ ಸರಿಯುವ ನಿರೀಕ್ಷೆಯಿದೆ. ಎಲ್ಲಾ ಶಾಸಕರು ಮತ್ತು ನಿರ್ಗಮಿತ ಸಚಿವರು ಗಾಂಧಿನಗರದಲ್ಲೇ ಇರುವಂತೆ ಸೂಚಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಗುಜರಾತ್‌ಗೆ ಬಂದಿದ್ದು, ಪ್ರಮುಖ ರಾಜ್ಯ ನಾಯಕರೊಂದಿಗೆ ಗೌಪ್ಯ ಸಭೆಗಳನ್ನು ನಡೆಸಿದ್ದಾರೆ.
In a dramatic political development, the entire Gujarat Cabinet, except Chief Minister Bhupendra Patel, has resigned ahead of a major reshuffle. A new team of 27 ministers is set to be sworn in on Friday morning at 11:30 AM. The new Cabinet will reportedly be formed based on caste and regional balance, with both fresh and experienced faces likely to find place.
16-10-25 09:04 pm
Bangalore Correspondent
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
16-10-25 10:52 pm
HK News Desk
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm