ಬ್ರೇಕಿಂಗ್ ನ್ಯೂಸ್
13-11-25 10:56 pm HK News Desk ದೇಶ - ವಿದೇಶ
ನವದೆಹಲಿ, ನ.13 : ದೆಹಲಿ ಕಾರು ಸ್ಫೋಟ ಪ್ರಕರಣ ಸಂಬಂಧಿಸಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಕಾನ್ಪುರದ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಿದೆ.
ರಾಜ್ಯ ಸರ್ಕಾರಿ ಸ್ವಾಮ್ಯದ ಗಣೇಶ್ ಶಂಕರ್ ವಿದ್ಯಾರ್ಥಿ ಸ್ಮಾರಕ (ಜಿಎಸ್‌ವಿಎಂ) ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಎಂ (ಹೃದಯಶಾಸ್ತ್ರ) ವಿದ್ಯಾರ್ಥಿಯಾಗಿರುವ 32 ವರ್ಷದ ಡಾ. ಮೊಹಮ್ಮದ್ ಆರಿಫ್ ಬಂಧನಕ್ಕೊಳಗಾದವ. ಆತನನ್ನು ನಿಗೂಢ ಸ್ಥಳದಿಂದ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಎಟಿಎಸ್ ತಂಡ ನಜೀರಾಬಾದ್‌ನ ಅಶೋಕ್ ನಗರದಲ್ಲಿರುವ ಆತನ ಬಾಡಿಗೆ ವಸತಿಗೃಹವನ್ನು ಶೋಧಿಸಿ, ವಿಧಿವಿಜ್ಞಾನ ಪರೀಕ್ಷೆಗಾಗಿ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್ ವಶಪಡಿಸಿ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಜಿ ಜಿಎಸ್‌ವಿಎಂ ಪ್ರಾಧ್ಯಾಪಕ ಡಾ. ಶಾಹೀನ್ ಸಯೀದ್ ಅವರ ವಿಚಾರಣೆಯಲ್ಲಿ ಸಿಕ್ಕ ಮಾಹಿತಿ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಮೂಲದ ಆರಿಫ್ ಬಗ್ಗೆ ಎಟಿಎಸ್ ಕಣ್ಗಾವಲು ಇಟ್ಟಿತ್ತು. ಜೈಶ್-ಎ- ಮೊಹಮ್ಮದ್ ಮತ್ತು ಅನ್ಸರ್ ಘಜ್ವತ್-ಉಲ್-ಹಿಂದ್ ಜೊತೆ ಸಂಪರ್ಕ ಹೊಂದಿರುವ ವೈಟ್ ಕಾಲರ್ ಉಗ್ರರ ಜಾಲದ ಭಾಗವಾಗಿ ಅಲ್ ಫಲಾಹ್ ವಿಶ್ವವಿದ್ಯಾಲಯದೊಂದಿಗೆ ಸಂಪರ್ಕ ಹೊಂದಿರುವ ಸಯೀದ್ ಅವರನ್ನು ಬಂಧಿಸಲಾಗಿತ್ತು.
ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟದ ದಿನದಂದು, ಆರಿಫ್, ಡಾ.ಶಾಹೀನ್, ತಮ್ಮ ಜಾಲಕ್ಕೆ ಸಂಬಂಧಿಸಿದ ವ್ಯಕ್ತಿಗಳೊಂದಿಗೆ ಪರಸ್ಪರ ದೂರವಾಣಿ ಸಂಪರ್ಕದಲ್ಲಿದ್ದರು. ಅಲ್ಲದೆ, ಇವರು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು ಅನುಮಾನ ಹುಟ್ಟುಹಾಕಿತ್ತು. ಎಟಿಎಸ್ ಸಿಬ್ಬಂದಿ ಅವರ ನಿವಾಸವನ್ನು ತಲುಪಿದಾಗ, ಆರಿಫ್ ತನ್ನ ಫೋನ್‌ನಿಂದ ಡೇಟಾವನ್ನು ಅಳಿಸಲು ಪ್ರಯತ್ನಿಸುತ್ತಿದ್ದ ಎಂದು ಹೇಳಲಾಗುತ್ತದೆ. ಆದರೆ ಅಷ್ಟರಲ್ಲಿ ಅಧಿಕಾರಿಗಳು ಮೊಬೈಲ್ ವಶಪಡಿಸಿದ್ದಾರೆ.
In a major breakthrough in the Delhi car explosion case, the Uttar Pradesh Anti-Terrorism Squad (ATS) has arrested a medical student from Kanpur suspected of links to terror networks. The arrested individual has been identified as Dr. Mohammad Arif (32), a first-year DM (Cardiology) student at the Ganesh Shankar Vidyarthi Memorial (GSVM) Medical College, a government-run institution in Kanpur.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm