ಬ್ರೇಕಿಂಗ್ ನ್ಯೂಸ್
09-12-25 11:03 pm HK News Desk ದೇಶ - ವಿದೇಶ
ನವದೆಹಲಿ, ಡಿ.10: ಸುಪ್ರೀಂ ಕೋರ್ಟ್ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆಯಲೆತ್ನಿಸಿ ಅವಾಂತರ ಸೃಷ್ಟಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ದೆಹಲಿಯ ನ್ಯಾಯಾಲಯ ಸಂಕೀರ್ಣ ಒಂದರಲ್ಲಿ ಚಪ್ಪಲಿಯೇಟು ನೀಡಲಾಗಿದೆ.
ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯ ಸಂಕೀರ್ಣದಲ್ಲಿ ಕೆಲವರು ತನ್ನ ಮೇಲೆ ದಾಳಿ ಮಾಡಿದ್ದಾರೆ ಎಂದು ರಾಕೇಶ್ ಕಿಶೋರ್ ಹೇಳಿಕೊಂಡಿದ್ದಾರೆ. ಆದರೆ ಆತ ಯಾರೆಂದು ಗೊತ್ತಾಗಿಲ್ಲ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ, ರಾಕೇಶ್ ಕಿಶೋರ್ ತನ್ನ ಮೇಲೆ ಹಲ್ಲೆ ನಡೆಸುತ್ತಿರುವ ವ್ಯಕ್ತಿಯನ್ನು 'ನೀವು ಯಾರು? ನನ್ನನ್ನು ಏಕೆ ಹೊಡೆಯುತ್ತಿದ್ದೀರಿ?' ಎಂದು ಕೇಳುತ್ತಿರುವುದು ಕಂಡುಬರುತ್ತದೆ. ನಂತರ ಅವರು 'ಸನಾತನ ಧರ್ಮಕ್ಕೆ ಜಯ' ಎಂದು ಕೂಗುತ್ತಾರೆ. ಆದಾಗ್ಯೂ, ಈ ವಿಷಯದ ಬಗ್ಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ. ಆದರೆ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ಕಾರಣಕ್ಕೆ ರಾಕೇಶ್ ಕಿಶೋರ್ ಮೇಲೆ ದಾಳಿ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಈ ಹಿಂದೆ, ವಕೀಲ ರಾಕೇಶ್ ಕಿಶೋರ್ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡಿದ್ದರು. ಆದರೆ ದೇವರು ತಮ್ಮೊಂದಿಗಿದ್ದಾನೆ, ಆದ್ದರಿಂದ ತನಗೆ ಏನೂ ಆಗುವುದಿಲ್ಲ. ಮನೆಯಲ್ಲಿ ಮಾತ್ರ ಪೊಲೀಸರು ಬೀಡು ಬಿಟ್ಟಿದ್ದಾರೆ ಎಂದು ಹೇಳಿದ್ದರು. ನನ್ನ ಜೀವ ಅಪಾಯದಲ್ಲಿದೆ. ಭದ್ರತೆಯ ಬಗ್ಗೆ ನಾನು ಹೆಚ್ಚು ಮಾತನಾಡಲಾರೆ ಎಂದಿದ್ದರು.
ಏತನ್ಮಧ್ಯೆ, ಶೂ ಎಸೆತ ಪ್ರಕರಣದಲ್ಲಿ ಮಾಜಿ ಸಿಜೆಐ ಬಿಆರ್ ಗವಾಯಿ ಅವರು, ರಾಕೇಶ್ ಕಿಶೋರ್ ಅವರನ್ನು ಕೇಸು ಬೇಡವೆಂದು ಹೇಳಿ ಕ್ಷಮಿಸಿದ್ದರು. ರಾಕೇಶ್ ಕಿಶೋರ್ ಅವರನ್ನು ಕ್ಷಮಿಸುವಲ್ಲಿ ಸಿಜೆಐ ಉದಾರತೆ ತೋರಿಸಿದ್ದಾರೆ. ಆದ್ದರಿಂದ ಈ ವಿಷಯವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯವೂ ಹೇಳಿತ್ತು.
Rakesh Kishore, the lawyer who recently attempted to throw a shoe at former Chief Justice of India B.R. Gavai inside the Supreme Court, was allegedly assaulted inside the Karkardooma Court complex in Delhi. A video circulating on social media shows Kishore being slapped with a slipper by an unidentified man, while he repeatedly asks, “Who are you? Why are you hitting me?” The attacker is heard shouting slogans of “Sanatan Dharm ki Jai.”
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm