ಬ್ರೇಕಿಂಗ್ ನ್ಯೂಸ್
17-01-26 01:47 pm HK News Desk ದೇಶ - ವಿದೇಶ
ನವದೆಹಲಿ, ಜ.17: ದೇಶಾದ್ಯಂತ ಹೆದ್ದಾರಿ ಪ್ರಯಾಣವನ್ನು ಡಿಜಿಟಲ್ ರೂಪಕ್ಕಿಳಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ನಿಷೇಧಿಸಲು ಮುಂದಾಗಿದೆ.
ವಾಹನ ದಟ್ಟಣೆ ಆಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಪ್ರಯಾಣಿಕರು ಹೆದ್ದಾರಿಯಲ್ಲಿ ಟೋಲ್ಗಳನ್ನು ಪಾವತಿಸಲು FASTag ಅಥವಾ UPI ಬಳಸಬೇಕಾಗುತ್ತದೆ. ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲವಾದರೂ, ಸುಗಮ ವಾಹನ ಸಂಚಾರಕ್ಕಾಗಿ ಇಲಾಖೆ ಸಿದ್ಧತೆ ನಡೆಸುತ್ತಿದೆ. ಪ್ರಯಾಣಿಕರು ಪೂರ್ತಿಯಾಗಿ ಡಿಜಿಟಲ್ ಬದಲಾವಣೆಗೆ ಮತ್ತು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ.
ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗೆ ಸರತಿ ಸಾಲಿನಲ್ಲಿ ನಿಂತು ಕಾಯಬೇಕಾಗುತ್ತದೆ. ಇದನ್ನು ತಪ್ಪಿಸಿ ಸುಗಮ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದು, ಡಿಜಿಟಲ್ ಪಾವತಿಯಿಂದ ಪಾರದರ್ಶಕ ವಹಿವಾಟು ತರುವುದು ಇದರ ಹಿಂದಿನ ಉದ್ದೇಶ ಎನ್ನಲಾಗಿದೆ. ಯಾವುದೇ ಭೌತಿಕ ಅಡೆತಡೆಗಳಿಲ್ಲದೆ ಹೆದ್ದಾರಿ ವೇಗದಲ್ಲಿ ಕಾರುಗಳು ಟೋಲ್ ಗೇಟ್ ನಲ್ಲೂ ಓಡಿಸಲು ಅನುವಾಗುವಂತೆ ತಂತ್ರಜ್ಞಾನ ಚಾಲ್ತಿಗೆ ತರಲು ಪರಿಶೀಲನೆ ನಡೆದಿದೆ. ‘ನೋ-ಸ್ಟಾಪ್’ ವ್ಯವಸ್ಥೆಯನ್ನು ಈಗಾಗಲೇ ದೇಶದಾದ್ಯಂತ 25 ಟೋಲ್ ಪ್ಲಾಜಾಗಳಲ್ಲಿ ಪರೀಕ್ಷಿಸಲಾಗುತ್ತಿದೆ.
ಇದಕ್ಕಾಗಿ ಪ್ರಯಾಣಿಕರು ತಮ್ಮ FASTag ಖಾತೆಗಳನ್ನು ತಕ್ಷಣವೇ ಪರಿಶೀಲಿಸಿ ರೆಡಿ ಮಾಡಿಕೊಳ್ಳಬೇಕು. ನಿಮ್ಮ ಟ್ಯಾಗ್ ಸಕ್ರಿಯವಾಗಿದೆಯೇ ಮತ್ತು ಸಾಕಷ್ಟು ಬ್ಯಾಲೆನ್ಸ್ ಹೊಂದಿದೆಯೇ ಎಂದು ಖಚಿತಪಡಿಸಿಕೊಳ್ಳಿ. ನೀವು FASTag ಬಳಸದಿದ್ದರೆ, ಪ್ಲಾಜಾದಲ್ಲಿ ನಿಮ್ಮನ್ನು ವಾಪಸ್ ಕಳುಹಿಸುವುದನ್ನು ತಪ್ಪಿಸಲು ನಿಮ್ಮ ಸ್ಮಾರ್ಟ್ಫೋನ್ UPI ಪಾವತಿಗಳಿಗೆ ಸಿದ್ಧವಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕಿದೆ.
To ease traffic congestion and promote seamless travel, the Ministry of Road Transport and Highways plans to ban cash payments at national highway toll plazas from April 1. Commuters will be required to pay tolls only through digital modes such as FASTag or UPI, paving the way for faster, transparent, and ‘no-stop’ toll operations across the country.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am