ಬ್ರೇಕಿಂಗ್ ನ್ಯೂಸ್
12-02-26 01:09 pm HK News Desk ದೇಶ - ವಿದೇಶ
ನವದೆಹಲಿ, ಫೆ 11 : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ಮತ್ತೆ ಚುರುಕುಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ. ದೆಹಲಿಯಲ್ಲಿ ಬೀಡುಬಿಟ್ಟು, ಎಐಸಿಸಿ ವರಿಷ್ಠೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಡಿಕೆ ಶಿವಕುಮಾರ್ ತಮ್ಮ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಿ ಚರ್ಚೆ ನಡೆಸಿದರು. ಈ ವೇಳೆ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ. ಬಹುಕಾಲದಿಂದ ಬಾಕಿ ಉಳಿದಿರುವ ಅಧಿಕಾರ ಹಂಚಿಕೆ ಸೂತ್ರ ಕುರಿತಂತೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ತಮ್ಮ ಮನದ ಇಂಗಿತವನ್ನು ಡಿಕೆಶಿ ಹೈಕಮಾಂಡ್ ಮುಂದೆ ಸ್ಪಷ್ಟವಾಗಿ ಮಂಡಿಸಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಸೋನಿಯಾ-ರಾಹುಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ತಮ್ಮ ಮಾತಿನಲ್ಲಿ ನಿಗೂಢತೆಯನ್ನು ಕಾಯ್ದುಕೊಂಡರು. “ದೆಹಲಿಗೆ ಬಂದ ಮೇಲೆ ಎಲ್ಲ ವಿಚಾರಗಳನ್ನೂ ಮಾತನಾಡಬೇಕು, ಅದನ್ನ ಮಾತನಾಡಿದ್ದೀನಿ. ಆದರೆ ಯಾರ್ಯಾರ ಜೊತೆ ಏನು ಮಾತನಾಡಿದೆ ಅಂತ ಬಹಿರಂಗವಾಗಿ ಹೇಳೋಕೆ ಆಗಲ್ಲ. ಒಳಗಿನ ಚರ್ಚೆಯನ್ನು ಹೊರಗೆ ಹೇಳುವುದು ಸರಿಯಲ್ಲ,” ಎಂದರು.
ಮುಂದುವರಿದು ಮಾತನಾಡಿದ ಡಿಕೆಶಿ, “ನಾನು ಇಲ್ಲಿಗೆ ಬಂದಿರೋದು ರಾಜಕಾರಣ ಮಾಡೋಕೆ, ಸುಮ್ಮನೆ ಗಾಳಿ ಕುಡಿಯೋಕೆ ಬಂದಿಲ್ಲ. ವರಿಷ್ಠರ ಬಳಿ ಏನು ಮಾತನಾಡಬೇಕೋ ಅದನ್ನ ಮಾತನಾಡಿದ್ದೀನಿ. ಎಲ್ಲದಕ್ಕೂ ಕಾಲ ಉತ್ತರ ಕೊಡುತ್ತೆ,” ಎಂದು ಹೇಳುವ ಮೂಲಕ ಕುರ್ಚಿ ಕದನದ ಬಗ್ಗೆ ಪರೋಕ್ಷ ಸುಳಿವು ನೀಡಿದರು.
ಡಿಕೆಶಿ ಪ್ರಸ್ತಾಪಕ್ಕೆ ಸೋನಿಯಾ ಮತ್ತು ರಾಹುಲ್ ಗಾಂಧಿ ಏನು ಪ್ರತಿಕ್ರಿಯೆ ನೀಡಿದ್ದಾರೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಸಂದೇಶ ರವಾನೆಯಾಗಿದೆವಾ? ಅಥವಾ ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಲಾಗಿದೆವಾ? ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ಡಿಕೆಶಿ ಅವರ “ರಾಜಕಾರಣ ಮಾಡೋಕೆ ಬಂದಿದ್ದೀನಿ” ಎಂಬ ಹೇಳಿಕೆ, ರಾಜ್ಯ ಕಾಂಗ್ರೆಸ್ನಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆಗೆ ಇಂಧನ ತುಂಬಿದಂತಾಗಿದೆ. ದೆಹಲಿ ದರ್ಬಾರಿನ ಈ ಭೇಟಿ ಕರ್ನಾಟಕ ರಾಜಕೀಯಕ್ಕೆ ಯಾವ ದಿಕ್ಕು ತೋರಿಸಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.
Karnataka Deputy CM D.K. Shivakumar’s meeting with Sonia and Rahul Gandhi in Delhi has reignited leadership change buzz in the state Congress. Saying he came “to do politics, not just breathe air,” DKS hinted at key internal discussions, fueling speculation over a possible power shift.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm