ಬ್ರೇಕಿಂಗ್ ನ್ಯೂಸ್
12-02-26 09:19 pm HK News Desk ದೇಶ - ವಿದೇಶ
ವಾಷಿಂಗ್ಟನ್, ಫೆಬ್ರವರಿ 12 : ಅಮೆರಿಕದಲ್ಲಿ 2023ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸುಮಾರು 29 ಮಿಲಿಯನ್ ಡಾಲರ್ (ಅಂದಾಜು ₹260-262 ಕೋಟಿ) ಪರಿಹಾರ ನೀಡಲು ನಿರ್ಧರಿಸಲಾಗಿದೆ. ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಗಳಲ್ಲಿ ಇದು ಅಮೆರಿಕ ಇತಿಹಾಸದಲ್ಲೇ ಅತಿದೊಡ್ಡ ಪರಿಹಾರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.
ಜಾಹ್ನವಿ ಕಂದುಲಾ ಅವರು ಸಿಯಾಟಲ್ ನಗರದ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿದ್ದರು. 2023ರ ಜನವರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ, ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಚಾಲನೆ ಮಾಡುತ್ತಿದ್ದ ವಾಹನವು 25 mph ಮಿತಿಯ ಪ್ರದೇಶದಲ್ಲಿ 74 mph (119 kmph) ವೇಗದಲ್ಲಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಜಾಹ್ನವಿ ಸುಮಾರು 100 ಅಡಿಗಳಷ್ಟು ದೂರ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದರು.
ತನಿಖೆಯಲ್ಲಿ, ಅಧಿಕಾರಿ ಡೇವ್ ಅತಿಯಾದ ವೇಗದಲ್ಲಿ ಕಾರು ಚಾಲನೆ ಮಾಡಿದ್ದು ದೃಢವಾಗಿತ್ತು. ಇದಕ್ಕಾಗಿ ಅಧಿಕಾರಿಗೆ 5,000 ಡಾಲರ್ ದಂಡ ವಿಧಿಸಿ, ಪೊಲೀಸ್ ಇಲಾಖೆಯಿಂದ ವಜಾಗೊಳಿಸಲಾಗಿತ್ತು. ಆದರೆ, ಉದ್ದೇಶಪೂರ್ವಕ ನಿರ್ಲಕ್ಷ್ಯವನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಗಂಭೀರ ಕ್ರಿಮಿನಲ್ ಆರೋಪಗಳನ್ನು ದಾಖಲಿಸಿರಲಿಲ್ಲ.
ಆದರೆ ಮತ್ತೊಬ್ಬ ಅಧಿಕಾರಿ ಡೇನಿಯಲ್ ಆಡೆರರ್ ಅವರ ಬಾಡಿ ಕ್ಯಾಮ್ ವಿಡಿಯೋ ಹೊರಬಂದ ಬಳಿಕ ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜಾಹ್ನವಿ ಸಾವಿನ ಕುರಿತು ಅವರು ನಗುತ್ತಾ ಮಾಡಿದ ಅವಹೇಳನಕಾರಿ ಹೇಳಿಕೆಗಳು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದು, ಅವರನ್ನು ಕೂಡ ಸೇವೆಯಿಂದ ವಜಾಗೊಳಿಸಲಾಗಿದೆ.
ಘಟನೆ ವಿವಾದ ಆಗುತ್ತಿದ್ದಂತೆ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ತನಿಖೆಗೆ ಒತ್ತಾಯಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಕಿಂಗ್ ಕೌಂಟಿ ಸುಪೀರಿಯರ್ ನ್ಯಾಯಾಲಯ ತೀರ್ಪು ನೀಡಿದ್ದು, ದೊಡ್ಡ ಮೊತ್ತದ ದಂಡ ಹಾಗೂ ಪೊಲೀಸ್ ಅಧಿಕಾರಿಗಳ ಹೊಣೆಗಾರಿಕೆಯ ಕುರಿತು ಮಹತ್ವದ ಸಂದೇಶ ನೀಡಿದೆ.
In a major development in the 2023 fatal crash case in the United States, a court has ordered compensation of nearly 29 million dollars (approximately ₹260–262 crore) to the family of 23-year-old Indian student Jaahnavi Kandula, who died in a road accident involving a police vehicle. The settlement is being described as one of the largest compensation amounts in U.S. history in cases involving police negligence.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm