ಬ್ರೇಕಿಂಗ್ ನ್ಯೂಸ್
12-02-26 10:51 pm HK News Desk ದೇಶ - ವಿದೇಶ
ನವದೆಹಲಿ, ಫೆ.12 : ವಂದೇ ಮಾತರಂ ಗೀತೆಯನ್ನು ರಾಷ್ಟ್ರಗೀತೆಯ ರೀತಿಯಲ್ಲೇ ಹಾಡುವುದು ಕಡ್ಡಾಯಗೊಳಿಸಿದ ಕೇಂದ್ರ ಗೃಹ ಸಚಿವಾಲಯದ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್ ವಿರೋಧ ವ್ಯಕ್ತಪಡಿಸಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ, ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಗೃಹ ಇಲಾಖೆ ಕಡ್ಡಾಯ ಮಾಡಿದ್ದು ಗೀತೆಯನ್ನು ಹಾಡುವಾಗ ಎಲ್ಲರೂ ಎದ್ದು ನಿಲ್ಲಬೇಕು. ರಾಷ್ಟ್ರಗೀತೆಗೂ ಮುನ್ನ ಆರು ಚರಣಗಳನ್ನು ಹಾಡಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ಗೃಹ ಇಲಾಖೆಯ ಆದೇಶವನ್ನು 'ಏಕಪಕ್ಷೀಯ' ಮತ್ತು 'ನಿರಂಕುಶ' ಎಂದು ಮುಸ್ಲಿಂ ಸಂಘಟನೆ ಜಮಿಯತ್ ಉಲಮಾ-ಇ-ಹಿಂದ್ ಗುರುವಾರ ಆಕ್ಷೇಪಿಸಿದೆ. ಇದು ಸಂವಿಧಾನ ಖಾತರಿಪಡಿಸುವ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಉಗ್ರ ದಾಳಿ ಎಂದು ಹೇಳಿದೆ. ಈ ಕುರಿತು ಮಾತನಾಡಿರುವ ಜಮಿಯತ್ ಉಲೆಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ, ವಂದೇ ಮಾತರಂ ಹಾಡುವುದು ಅಥವಾ ನುಡಿಸುವುದಕ್ಕೆ ಮುಸ್ಲಿಮರು ಯಾರು ತಡೆಯುವುದಿಲ್ಲ. ಆದರೆ ಗೀತೆಯ ಕೆಲವು ಪದ್ಯಗಳು ಮಾತೃಭೂಮಿಯನ್ನು ದೇವತೆಯಾಗಿ ಬಿಂಬಿಸುವ ನಂಬಿಕೆಗಳನ್ನು ಆಧರಿಸಿವೆ. ಇದು ಏಕದೇವತಾವಾದಿ ಧರ್ಮಗಳ ಮೂಲಭೂತ ನಂಬಿಕೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಇದು ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸುವ ವ್ಯವಸ್ಥಿತ ಪ್ರಯತ್ನವಾಗಿದೆ."ಮುಸ್ಲಿಮರು ಮಾತ್ರ ಅಲ್ಲಾನನ್ನು ಪೂಜಿಸುತ್ತಾರೆ. ಈ ಗೀತೆ ಹಾಡಲು ಒತ್ತಾಯಿಸುವುದು ಸಂವಿಧಾನದ 25 ನೇ ವಿಧಿ ಮತ್ತು ಸುಪ್ರೀಂ ಕೋರ್ಟ್ನ ಹಲವಾರು ತೀರ್ಪುಗಳ ಸ್ಪಷ್ಟ ಉಲ್ಲಂಘನೆಯಾಗಿದೆ" ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಾಡನ್ನು ಕಡ್ಡಾಯಗೊಳಿಸುವುದು ಮತ್ತು ಅದನ್ನು ನಾಗರಿಕರ ಮೇಲೆ ಹೇರಲು ಪ್ರಯತ್ನಿಸುವುದು ದೇಶಭಕ್ತಿಯ ಅಭಿವ್ಯಕ್ತಿಯಲ್ಲ, ಬದಲಿಗೆ ಇದು ಚುನಾವಣಾ ರಾಜಕೀಯ, ಮತೀಯ ಅಜೆಂಡಾ ಮತ್ತು ಕೆಲವು ಮೂಲಭೂತ ಸಮಸ್ಯೆಗಳಿಂದ ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶಪೂರ್ವಕ ಪ್ರಯತ್ನ ಎಂದು ಮದನಿ ಹೇಳಿದ್ದಾರೆ.
Jamiat Ulema-e-Hind has expressed strong opposition to the Union Home Ministry’s directive making the singing of all six stanzas of Vande Mataram mandatory at government functions and in all schools. As per the reported order, the song must be sung before the National Anthem, and everyone present must stand during its rendition.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm