ಬ್ರೇಕಿಂಗ್ ನ್ಯೂಸ್
21-02-26 05:01 pm HK News Desk ದೇಶ - ವಿದೇಶ
ಅಹ್ಮದಾಬಾದ್, ಫೆ.21: 'ಲವ್ ಜಿಹಾದ್’ ತಡೆಯಲು ಗುಜರಾತ್ ಸರ್ಕಾರ ವಿವಾಹ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, ಪ್ರೇಮ ವಿವಾಹಗಳಿಗೂ ಪೋಷಕರ ಅನುಮತಿ ಕಡ್ಡಾಯ ಎನ್ನುವ ಮಾನದಂಡ ಸೇರಿಸಿದೆ. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.
ಗುಜರಾತ್ ವಿವಾಹ ನೋಂದಣಿ ನಿಯಮಗಳಿಗೆ ತಿದ್ದುಪಡಿ ತರುತ್ತಿದ್ದು, ಇದು ಗೌಪ್ಯತೆ, ಪೋಷಕರ ಒಪ್ಪಿಗೆ ಮತ್ತು ಗುರುತು ಮರೆಮಾಚಿ ವಂಚಿಸುವುದನ್ನು ತಡೆಯುವ ಉದ್ದೇಶ ಹೊಂದಿದೆ. ಪ್ರಸ್ತಾವಿತ ಪ್ರಮಾಣೀಕರಣ ಅವಧಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ 40 ದಿನಗಳಲ್ಲಿ ಗುರುತಿನ ಚೀಟಿ, ಸಾಕ್ಷಿ ಮತ್ತು ನೋಟರಿ ಪರಿಶೀಲನೆ ಮಾಡಲಾಗುತ್ತದೆ. ವಿವಾಹ ನೋಂದಣಿ ಅರ್ಜಿಗಳನ್ನು ಸ್ವೀಕರಿಸಿದ ಹತ್ತು ದಿನಗಳಲ್ಲಿ ಸಹಾಯಕ ನೋಂದಣಾಧಿಕಾರಿ ಸ್ವತಃ ಪೋಷಕರಿಗೆ ಮಾಹಿತಿ ನೀಡಲಿದ್ದಾರೆ. ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆ ಅಥವಾ ತಾಲೂಕು ನೋಂದಣಾಧಿಕಾರಿಗೆ ಕಳುಹಿಸಬೇಕು. ಪರಿಶೀಲನೆ ಮತ್ತು ಉಪ-ನಿಯಮಗಳ (1 ರಿಂದ 7) ಅನುಸರಣೆಯನ್ನು ಖಚಿತಪಡಿಸಿದ ನಂತರವೇ ಮದುವೆಯನ್ನು ನೋಂದಣಿ ಮಾಡಲಾಗುತ್ತದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಾಂಘ್ವಿ ವಿವರಿಸಿದ್ದಾರೆ.
ವಿಧಾನಸಭೆಯಲ್ಲಿ ಮಂಡಿಸಲಾದ ಈ ಪ್ರಸ್ತಾವನೆ ಪ್ರಕಾರ, ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಲಿದೆ. ಹೊಸ ನಿಯಮದ ಪ್ರಕಾರ, ವಧು-ವರರು ತಮ್ಮ ಹೆತ್ತವರಿಗೆ ಮದುವೆಯ ಬಗ್ಗೆ ತಿಳಿಸಿರುವುದಾಗಿ ಘೋಷಣೆಯನ್ನು ಸಲ್ಲಿಸಬೇಕಾಗುತ್ತದೆ, ಜೊತೆಗೆ ಅವರ ಪೋಷಕರ ಗುರುತಿನ ಪುರಾವೆ, ಫೋನ್ ನಂಬರ್, ವಸತಿ ಪುರಾವೆಗಳು ಸೇರಿದಂತೆ ಇತರ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪ್ರೇಮ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿದ ನಂತರ, ಹುಡುಗಿಯ ಪೋಷಕರಿಗೆ ವಾಟ್ಸಾಪ್ ಮೂಲಕ ವಿವರಗಳನ್ನು ನೀಡಲಾಗುತ್ತದೆ. ಆದರೆ ಅರ್ಜಿ ಸಲ್ಲಿಸಿದ 40 ದಿನಗಳ ನಂತರ ವಿವಾಹ ನೋಂದಣಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. 40 ದಿನಗಳ ವಿಳಂಬವು ಬಲವಂತ, ತಪ್ಪು ನಿರೂಪಣೆ ಅಥವಾ ನಕಲಿ ಗುರುತನ್ನು ಪತ್ತೆಹಚ್ಚಲು ಅವಕಾಶ ನೀಡುತ್ತದೆ ಎಂದು ಸರ್ಕಾರ ವಾದಿಸಿದೆ. ಈ ಕ್ರಮವನ್ನು ಸಮರ್ಥಿಸಿಕೊಂಡ ಗೃಹ ಸಚಿವ ಹರ್ಷ ಸಾಂಘ್ವಿ, "ನಾವು ಪ್ರೀತಿಯನ್ನು ವಿರೋಧಿಸುವುದಿಲ್ಲ. ಆದರೆ ಯಾರಾದರೂ 'ಸಲೀಮ್ ಸುರೇಶ್' ಆಗಿ ನಕಲಿ ಗುರುತಿನೊಂದಿಗೆ ಯುವತಿಯನ್ನು ಬಲೆಗೆ ಬೀಳಿಸಲು ಹೋದರೆ, ಅಂತಹ ವಂಚನೆಗೆ ಅವಕಾಶ ನೀಡುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm